Big news: ಡಿ.ಕೆ.ಶಿವಕುಮಾರ್​ಗೆ ಹೆಚ್ಚು ಶಾಸಕರ ಬೆಂಬಲ ಇಲ್ಲ, 5 ವರ್ಷ ನಾನೇ ಮುಖ್ಯಮಂತ್ರಿ - ಸಿದ್ದರಾಮಯ್ಯ

author-image
Ganesh
Updated On
ಖರ್ಗೆ ಜೊತೆ CM ಸಿದ್ದರಾಮಯ್ಯ ಚರ್ಚೆ.. ಡಿಕೆಶಿ ಮೌನದ ಹಿಂದೆ 6 ಸೂತ್ರಗಳು..!
Advertisment
  • 5 ವರ್ಷ ನಾನೇ ಸಿಎಂ ಅಂತ ಮತ್ತೆ ಹೇಳಿರುವ ಸಿದ್ದರಾಮಯ್ಯ
  • ಸಿಎಂ ಬದಲಾವಣೆ ಚರ್ಚೆ ಆಗುತ್ತಿದೆ ಅನ್ನೋದು ತಪ್ಪು ಮಾಹಿತಿ
  • ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಹೇಳಿಕೆ

ದೆಹಲಿ: ಮುಂದಿನ ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಅಧಿಕಾರ ಹಸ್ತಾಂತರ ಚರ್ಚೆ ಜೋರಾಗಿದೆ. ಬೆನ್ನಲ್ಲೇ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಇದೀಗ ಸಿದ್ದರಾಮಯ್ಯರ ಈ ಹೇಳಿಕೆ ತುಂಬಾನೇ ಮಹತ್ವ ಪಡೆದುಕೊಂಡಿದೆ.

ಇದನ್ನೂ ಓದಿ: ಕುತೂಹಲ ಘಟ್ಟ ತಲುಪಿದ ಅಧಿಕಾರದ ಆಟ.. ರಾಹುಲ್ ಮುಂದೆ ಸಿದ್ದು, ಡಿಕೆಶಿ ಪ್ರತ್ಯೇಕ ವಾದ, ಏನು ಗೊತ್ತಾ..?

ಖಾಸಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, 5 ವರ್ಷ ನಾನೇ ಸಿಎಂ. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಚರ್ಚೆ ಅನ್ನೋದು ಸುಳ್ಳು. ಸಿಎಂ ಬದಲಾವಣೆ ಚರ್ಚೆ ಆಗುತ್ತಿದೆ ಅನ್ನೋದು ತಪ್ಪು ಮಾಹಿತಿ ಎಂದಿದ್ದಾರೆ.

ಡಿ.ಕೆ.ಶಿವಕುಮಾರ್​ಗೆ ಹೆಚ್ಚು ಶಾಸಕರ ಬೆಂಬಲ ಇಲ್ಲ. ಡಿ.ಕೆ. ಶಿವಕುಮಾರ್​ಗೆ ಇರೋ ಬೆಂಬಲಿಗರ ಸಂಖ್ಯೆ ಕಡಿಮೆ ಇದೆ. ಅವರಿಗೆ ಕೆಲವರು ಬೆಂಬಲ ನೀಡಿದ್ದಾರೆ. ಸುರ್ಜೇವಾಲಾ ಯಾರಿಗೂ ಅಧಿಕಾರ ಬದಲಾವಣೆ ಪ್ರಶ್ನೆ ಕೇಳಿಲ್ಲ. ಕೆಲವು ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಅಷ್ಟೇ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಬಾಗೇಪಲ್ಲಿ ಕಾಂಗ್ರೆಸ್​ MLA ಸುಬ್ಬಾರೆಡ್ಡಿಗೆ ಇ.ಡಿ ಶಾಕ್.. ಅಧಿಕಾರಿಗಳಿಂದ ತೀವ್ರ ಪರಿಶೀಲನೆ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment