ತಮಿಳುನಾಡಿಗೆ ಕಾವೇರಿ ನೀರು ಬಿಟ್ಟ ಕಾಂಗ್ರೆಸ್ ಸರ್ಕಾರ
ಕಾಂಗ್ರೆಸ್ ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟನೆ..!
ಈ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು ಗೊತ್ತಾ?
ಹಾಸನ: ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿದ್ದೇವೆ ಎಂದು ಡಿಸಿಎಂ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಕಾವೇರಿ ನೀರು ಬಿಡುಗಡೆ ವಿರೋಧಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆ ಕುರಿತು ಮಾತಾಡುವಾಗ ಡಿ.ಕೆ ಶಿವಕುಮಾರ್ ಹೀಗೆಂದರು.
ರಾಜಕೀಯ ಪ್ರೇರಿತವಾಗಿ ಪ್ರತಿಭಟನೆ ಮಾಡಲಾಗುತ್ತಿದೆ. ಇದು ಅವರ ಅಸ್ತಿತ್ವದ ಪ್ರಶ್ನೆ. ಅವರಿಗೆ ಸಮಸ್ಯೆ ಆಗಿದೆ ಎಂದೇ ತಮಿಳುನಾಡಿನವರು ಸುಪ್ರೀಂಕೋರ್ಟ್ಗೆ ಹೋಗಿದ್ದಾರೆ. ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಕಾವೇರಿ ನೀರು ಬಿಡುಗಡೆ ಮಾಡಿದ್ದೇವೆ ಎಂದು ನಾನು ಈಗಾಗಲೇ ರೈತರಿಗೆ ಹೇಳಿದ್ದೇನೆ ಎಂದರು.
ತಮಿಳುನಾಡಿಗೆ ಸಮಸ್ಯೆಯಾಗಿದೆ, ಅದಕ್ಕೆ ನೀರು ಬಿಟ್ಟಿದ್ದೇವೆ. ನಾಳೆ ಈ ಬಗ್ಗೆ ಚರ್ಚಿಸಲು ಸರ್ವಪಕ್ಷ ಸಭೆ ಕರೆದಿದ್ದೇವೆ. ಎಲ್ಲರೂ ಸಹಕಾರ ನೀಡಲಿದ್ದಾರೆ ಅನ್ನೋ ಭರವಸೆ ಇದೆ ಎಂದರು.
ಜೆಡಿಎಸ್ ಶಾಸಕರಿಗೆ ಬೆದರಿಕೆ ಆರೋಪ
ಹಾಗೆಯೇ ನಮ್ಮ ಶಾಸಕರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂಬ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಉತ್ತರ ನೀಡಿದ್ರು. ನಾನು ಬೆದರಿಕೆ ಹಾಕಿದ್ರೆ, ಪೊಲೀಸ್ ಕಂಪ್ಲೈಂಟ್ ಕೊಡಲಿ ಎಂದರು.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ