ಮುಂದಿನ ತಿಂಗಳಿನಿಂದಲೇ ಅನ್ನಭಾಗ್ಯ ಯೋಜನೆ ಜಾರಿಗೆ ಮುಂದಾದ ಸರ್ಕಾರ
10 ಕೆಜಿ ಬದಲಿಗೆ 5 ಕೆಜಿ ಅಕ್ಕಿ ಜತೆಗೆ ಕುಟುಂಬದ ಪ್ರತಿಯೊಬ್ಬರಿಗೂ 170 ರೂ. ಜಮಾ
'ಹುಳ ಹಿಡಿದರೂ ಕನ್ನಡಿಗರಿಗೆ ಅಕ್ಕಿ ನೀಡದ ಮೋದಿ ಸರ್ಕಾರ'- ಡಿ.ಕೆ ಶಿವಕುಮಾರ್ ಕಿಡಿ
ಬೆಂಗಳೂರು: ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಸದ್ಯ ನೀಡಲಾಗುತ್ತಿರೋ 5 ಕೆಜಿ ಅಕ್ಕಿ ಜೊತೆಗೆ ಮಿಕ್ಕ ಐದು ಕೆಜಿ ಅಕ್ಕಿ ಬದಲಿಗೆ ಪ್ರತಿ ಕೆಜಿಗೆ 34 ರೂಪಾಯಿಗಳಂತೆ 170 ರೂ. ಬಿಪಿಎಲ್ ಕಾರ್ಡ್ ಹೊಂದಿದ ಕುಟುಂಬದ ಸದಸ್ಯರಿಗೆ ನೀಡಲು ಇಂದಿನ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.
ಈ ಸಂಬಂಧ ಟ್ವೀಟ್ ಮಾಡಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಹಣವನ್ನು ಬಿಪಿಎಲ್ ಕಾರ್ಡಿನಲ್ಲಿ ಮನೆಯ ಮುಖ್ಯಸ್ಥ ಎಂದು ನಮೂದಿಸಿದವರ ಬ್ಯಾಂಕ್ ಖಾತೆಗೆ ಜುಲೈ ತಿಂಗಳಿಂದಲೇ ವರ್ಗಾವಣೆ ಮಾಡಲಾಗುವುದು. ಹೆಚ್ಚುವರಿಯಾಗಿ ನೀಡಲು ತೀರ್ಮಾನಿಸಿದ್ದ 5 ಕೆಜಿ ಅಕ್ಕಿಯನ್ನು ಹೊಂದಿಸಲು ರಾಜ್ಯ ಸರ್ಕಾರಕ್ಕೆ ಇನ್ನಷ್ಟು ಸಮಯಬೇಕಾಗಿದೆ. ಈ ಹಿನ್ನೆಲೆಯಲ್ಲಿ ಅಕ್ಕಿ ಕೊಡುವವರೆಗೂ ಹಣವನ್ನು ನೀಡಲಾಗುತ್ತದೆ. ಅಕ್ಕಿ ಸಿಕ್ಕ ನಂತರ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿಯನ್ನೇ ನೀಡುತ್ತೇವೆ ಎಂದರು.
ಅನ್ನಭಾಗ್ಯ ಯೋಜನೆಯಡಿ ಸದ್ಯ ನೀಡಲಾಗುತ್ತಿರುವ 5ಕೆಜಿ ಅಕ್ಕಿಯ ಜೊತೆಗೆ ಮಿಕ್ಕ ಐದು ಕೆಜಿ ಅಕ್ಕಿಗೆ ಬದಲಾಗಿ ಪ್ರತೀ ಕೆಜಿಗೆ 34 ರೂಪಾಯಿಗಳಂತೆ 170 ರೂಪಾಯಿಗಳನ್ನು ಬಿಪಿಎಲ್ ಕುಟುಂಬದ ಪ್ರತೀ ಸದಸ್ಯರಿಗೆ ನೀಡಲು ಇಂದಿನ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಹಣವನ್ನು ಬಿಪಿಎಲ್ ಕಾರ್ಡಿನಲ್ಲಿ ಮನೆಯ ಮುಖ್ಯಸ್ಥ ಎಂದು ನಮೂದಿಸಿದವರ ಬ್ಯಾಂಕ್…
— DK Shivakumar (@DKShivakumar) June 28, 2023
ಕೇಂದ್ರ ಬಿಜೆಪಿ ಸರ್ಕಾರ ನಮ್ಮ ಗ್ಯಾರಂಟಿಗಳನ್ನು ವಿಫಲಗೊಳಿಸಲು ಸತತವಾಗಿ ಯತ್ನಿಸುತ್ತಿದೆ. ಕೇಂದ್ರದ ಗೋದಾಮುಗಳಲ್ಲಿ ಅಕ್ಕಿ ಹುಳ ಹಿಡಿಯುತ್ತಿದ್ದರೂ ಕನ್ನಡಿಗರಿಗೆ ನೀಡಲು ತಯಾರಿಲ್ಲ. ಆದರೆ ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿಗೆ ತಪ್ಪುವುದಿಲ್ಲ ಎಂದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ