ಪ್ರಯಾಗ್‌ ರಾಜ್‌ ಮಹಾಕುಂಭಮೇಳದಲ್ಲಿ ಡಿ.ಕೆ ಶಿವಕುಮಾರ್ ಪುಣ್ಯಸ್ನಾನ; ಟಾಪ್ 10 ಪೋಟೋಗಳು!

author-image
admin
Updated On
ಪ್ರಯಾಗ್‌ ರಾಜ್‌ ಮಹಾಕುಂಭಮೇಳದಲ್ಲಿ ಡಿ.ಕೆ ಶಿವಕುಮಾರ್ ಪುಣ್ಯಸ್ನಾನ; ಟಾಪ್ 10 ಪೋಟೋಗಳು!
Advertisment
  • ಪ್ರಯಾಗ್‌ ರಾಜ್‌ ಮಹಾಕುಂಭಮೇಳದಲ್ಲಿ ಡಿಕೆಶಿ ದಂಪತಿ ಭಾಗಿ
  • ಡಿ.ಕೆ ಶಿವಕುಮಾರ್, ಪತ್ನಿ ಉಷಾ ಅವರೊಂದಿಗೆ ಪುಣ್ಯಸ್ನಾನ
  • ಇಲ್ಲಿ ಪಾಲ್ಗೊಳ್ಳಲು ಅವಕಾಶ ಸಿಕ್ಕಿದ್ದು ನಿಜಕ್ಕೂ ಖುಷಿ ತಂದಿದೆ ಎಂದ ಡಿಕೆಶಿ

ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ವಿಶ್ವ ವಿಖ್ಯಾತ ಮಹಾಕುಂಭಮೇಳ ಭಕ್ತರನ್ನ ಸೂಜಿಗಲ್ಲಿನಂತೆ ಸೆಳೆಯುತ್ತಿದೆ. ದಿನ ಕಳೆದಂತೆ ಭಕ್ತ ಸಾಗರ ತ್ರಿವೇಣಿ ಸಂಗಮದಲ್ಲಿ ಮಿಂದು ಪುನೀತರಾಗುತ್ತಿದ್ದಾರೆ.

publive-image

ಈ ಬಾರಿಯ ಮಹಾಕುಂಭಮೇಳ 3 ಅಮೃತ ಸ್ನಾನಕ್ಕೆ ಸಾಕ್ಷಿಯಾಗಿದೆ. ಜನವರಿ 14ರ ಮಕರ ಸಂಕ್ರಾಂತಿ, ಜನವರಿ 29ರ ಮೌನಿ ಅಮಾವಾಸ್ಯೆ ಹಾಗೂ ಫೆಬ್ರವರಿ 3ರ ವಸಂತ್ ಪಂಚಮಿಯಂದು ಕೋಟ್ಯಾಂತರ ಭಕ್ತರು ಅಮೃತ ಸ್ನಾನದಲ್ಲಿ ಮಿಂದೆದ್ದಿದ್ದಾರೆ.

publive-image

ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಇಂದು ಕುಟುಂಬ ಸಮೇತ ಉತ್ತರ ಪ್ರದೇಶದ ಪ್ರಯಾಗ್ ರಾಜ್‌ಗೆ ಭೇಟಿ ನೀಡಿದ್ದಾರೆ.

publive-image

ಮಹಾ ಕುಂಭಮೇಳದಲ್ಲಿ ಸಂಚರಿಸಿದ ಡಿ.ಕೆ ಶಿವಕುಮಾರ್ ಅವರು ಪತ್ನಿ ಉಷಾ ಅವರೊಂದಿಗೆ ಪುಣ್ಯಸ್ನಾನ ಮಾಡಿದರು.

publive-image

ಹರ ಹರ ಮಹಾದೇವ ಎನ್ನುತ್ತಾ ತ್ರಿವೇಣಿ ಸಂಗಮದಲ್ಲಿ ಮುಳುಗಿದ ಡಿ.ಕೆ ಶಿವಕುಮಾರ್ ಅವರಿಗೆ ಸಾಧು, ಸಂತರು ಆಶೀರ್ವಾದ ಮಾಡಿದ್ದಾರೆ.

publive-image

ಈ ಬಗ್ಗೆ ಟ್ವೀಟ್ ಮಾಡಿರುವ ಡಿ.ಕೆ ಶಿವಕುಮಾರ್ ಅವರು 144 ವರ್ಷಗಳಿಗೊಮ್ಮೆ‌ ನಡೆಯುವ ಮಹಾ ಕುಂಭದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಕ್ಕಿದ್ದು ನಿಜಕ್ಕೂ ಖುಷಿ ತಂದಿದೆ ಎಂದಿದ್ದಾರೆ.

publive-image

ಈ ಬಾರಿಯ ಮಹಾಕುಂಭ ಮೇಳ ಕಾಂಗ್ರೆಸ್, ಬಿಜೆಪಿ ನಾಯಕರ ವಾಕ್ಸಮರಕ್ಕೂ ಸಾಕ್ಷಿಯಾಗಿತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗಂಗಾ ಸ್ನಾನದಿಂದ ಬಡತನ ನಿರ್ಮೂಲನೆ ಸಾಧ್ಯವೇ ಎಂದು ಪ್ರಶ್ನಿಸಿದ್ದರು.

publive-image

ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಈ ಹೇಳಿಕೆ ರಾಷ್ಟ್ರಾದ್ಯಂತ ಚರ್ಚೆಯಾಗಿದ್ದು, ಬಿಜೆಪಿಗರು ಕೆಂಡಕಾರಿದ್ದರು. ಕುಂಭಮೇಳದ ವಿಚಾರ ಕಾಂಗ್ರೆಸ್, ಬಿಜೆಪಿ ನಾಯಕರು ರಾಷ್ಟ್ರ ಮಟ್ಟದಲ್ಲಿ ಚರ್ಚೆ ನಡೆಸುತ್ತಿದ್ದಾರೆ.

publive-image

ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಚರ್ಚೆಯಲ್ಲಿರುವಾಗಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಮಹಾಕುಂಭಮೇಳದಲ್ಲಿ ಭಾಗಿಯಾಗಿ ತಮ್ಮ ಭಕ್ತಿ, ಭಾವದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

publive-image

publive-image

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment