newsfirstkannada.com

BREAKING: ‘ಸಿಂಗಾಪುರದಲ್ಲಿ ಸರ್ಕಾರ ಬೀಳಿಸೋ ಕೆಲಸ ನಡೀತಿದೆ’- ಡಿ.ಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

Share :

24-07-2023

  ಸಿಂಗಾಪುರದಲ್ಲಿ ಸರ್ಕಾರ ಬೀಳಿಸುವ ಕೆಲಸ ನಡೆಯುತ್ತಿದೆ

  ಬೆಂಗಳೂರಲ್ಲಿ ಆಪರೇಷನ್ ಮಾಡಿದ್ರೆ ಎಲ್ಲಾ ಗೊತ್ತಾಗುತ್ತೆ

  ಕುಮಾರಸ್ವಾಮಿ ವಿರುದ್ಧ ಡಿ.ಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

ಬೆಂಗಳೂರು: ಕಾಂಗ್ರೆಸ್ ವಿರುದ್ಧ ಬಿಜೆಪಿ ಹೋರಾಟಕ್ಕೆ ಜೆಡಿಎಸ್‌ ಬೆಂಬಲ ಘೋಷಿಸಿದ ಬಳಿಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೀತಿದೆ. ಸಿಂಗಾಪುರದಲ್ಲಿ ರಾಜ್ಯ ಸರ್ಕಾರ ಬೀಳಿಸೋ ಕೆಲಸ ನಡೆಯುತ್ತಿದೆ. ಇದೆಲ್ಲಾ ಒಂದು ತಂತ್ರ. ಇದರ ಬಗ್ಗೆ ನಮಗೂ ಮಾಹಿತಿ ಬಂದಿದೆ‌ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಬೆಂಗಳೂರಲ್ಲಿ ಆಪರೇಷನ್ ಮಾಡಿದ್ರೆ ಗೊತ್ತಾಗುತ್ತೆ ಅಂತಾ ಈಗ ಸಿಂಗಾಪುರದಲ್ಲಿ ಕೂತು ಆಪರೇಷನ್ ಮಾಡ್ತಿದ್ದಾರೆ. ಸರ್ಕಾರ ಅಭದ್ರಗೊಳಿಸ್ತಿರೋ ತಂತ್ರದ ಬಗ್ಗೆ ನಮಗೂ ಮಾಹಿತಿಯಿದೆ ಎಂದು ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ಕಳೆದ ವಾರ ನಡೆದ ವಿಧಾನಸಭಾ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್ ಜಂಟಿಯಾಗಿ ಹೋರಾಟ ನಡೆಸಿತ್ತು. ಸದನದಲ್ಲಿ ಸ್ಪೀಕರ್ ಯು.ಟಿ ಖಾದರ್ ಅಸಭ್ಯ ವರ್ತನೆ ತೋರಿದ ಆರೋಪದಲ್ಲಿ ಬಿಜೆಪಿ ಶಾಸಕರನ್ನು ಅಮಾನತು ಮಾಡಿದ್ದರು. ಈ ವೇಳೆ ಅಮಾನತುಗೊಂಡ ಶಾಸಕರನ್ನು ಸದನದಿಂದ ಹೊರ ಹಾಕುವಾಗ ಹೈಡ್ರಾಮಾ ನಡೆದಿತ್ತು. ಸ್ಪೀಕರ್ ವಿರುದ್ಧ ಹೋರಾಟ ನಡೆಸಿದ್ದ ಬಿಜೆಪಿಗೆ ಜೆಡಿಎಸ್‌ ಪಕ್ಷ ಕೂಡ ಬೆಂಬಲ ಸೂಚಿಸಿತ್ತು. ಕೊನೆಗೆ ಬಿಜೆಪಿ, ಜೆಡಿಎಸ್ ನಾಯಕರು ಒಟ್ಟಿಗೆ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದರು.

ಬಿಜೆಪಿ ಹೋರಾಟಕ್ಕೆ ಜೆಡಿಎಸ್ ಬೆಂಬಲ ಸೂಚಿಸಿದ ಬಳಿಕ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಸಿಂಗಾಪುರ ಪ್ರವಾಸ ಕೈಗೊಂಡಿದ್ದಾರೆ. ಹೆಚ್‌ಡಿಕೆ ಸಿಂಗಾಪುರದಲ್ಲಿರುವಾಗಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಈ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ‘ಸಿಂಗಾಪುರದಲ್ಲಿ ಸರ್ಕಾರ ಬೀಳಿಸೋ ಕೆಲಸ ನಡೀತಿದೆ’- ಡಿ.ಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

https://newsfirstlive.com/wp-content/uploads/2023/07/dk-shivakumr-2.jpg

Load More