/newsfirstlive-kannada/media/post_attachments/wp-content/uploads/2025/06/Dkshi-RCB-Team.jpg)
IPL ಸೀಸನ್ 18ರಲ್ಲಿ ಬೆಂಗಳೂರು ರಾಯಲ್ ಚಾಲೆಂಜರ್ಸ್ ಕಪ್ ಗೆದ್ದ ಮೇಲೆ RCB ಫ್ರಾಂಚೈಸಿ ಮಾರಾಟದ ವಿಷಯ ಮುನ್ನೆಲೆಗೆ ಬಂದಿದೆ. IPL ಚಾಂಪಿಯನ್ ತಂಡವನ್ನ ದಾಖಲೆಯ ಮೊತ್ತಕ್ಕೆ ಮಾರಾಟ ಮಾಡುವ ಸುದ್ದಿಗಳು ಹರಿದಾಡಿತ್ತು. ಆದರೆ RCB ಫ್ರಾಂಚೈಸಿ ಇದರ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಪ್ರಕಟಿಸಿಲ್ಲ.
RCB ಫ್ರಾಂಚೈಸಿ ಮಾರಾಟದ ಚರ್ಚೆಯ ಮಧ್ಯೆ ಕೊಂಡುಕೊಳ್ಳುವ ಕುಬೇರರ ಪಟ್ಟಿಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಹೆಸರು ಕೇಳಿ ಬಂದಿದೆ. ಈ ಬಗ್ಗೆ ದೆಹಲಿಯಲ್ಲಿ ಡಿಸಿಎಂ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.
ದಿಲ್ಲಿಯಲ್ಲಿ ಡಿ.ಕೆ ಶಿವಕುಮಾರ್ ಏನಂದ್ರು?
ನಾನು ರಾಯಲ್ ಚಾಲೆಂಜ್ ವಿಸ್ಕಿಯನ್ನು ಕುಡಿಯಲ್ಲ. ನಾನು ಹುಚ್ಚನೂ ಅಲ್ಲ. ನನಗೇಕೆ RCB ಟೀಮ್ ಬೇಕು? RCB ಟೀಮ್ ಅನ್ನು ನಾನು ಖರೀದಿಸುತ್ತಿಲ್ಲ ಎಂದು ಡಿಕೆಶಿ ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: ಗಾಯಕಿ ಮಂಗ್ಲಿಗೆ ಬಿಗ್ ಶಾಕ್.. ಬರ್ತ್ ಡೇ ಪಾರ್ಟಿಗೆ ಬಂದವರು ಯಾರು? ಪೊಲೀಸರಿಗೆ ಸಿಕ್ಕಿದ್ದೇನು?
ನಾನು KSCA (ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ) ಸದಸ್ಯ ಮಾತ್ರ. ಈ ಹಿಂದೆ ನನಗೆ ಕೆಎಸ್‌ಸಿಎ ಮ್ಯಾನೇಜ್‌ಮೆಂಟ್‌ಗೆ ಸೇರುವ ಆಫರ್ ಬಂದಿತ್ತು. ಆದರೆ ನನಗೆ ಸಮಯವಿಲ್ಲ. ನನ್ನ ಎಜುಕೇಷನ್ ಇನ್ಸ್‌ಟಿಟ್ಯೂಷನ್ ಅನ್ನು ನೋಡಿಕೊಳ್ಳಲು ನಮ್ಮ ಕುಟುಂಬದ ಬೇರೆ ಸದಸ್ಯರಿಗೆ ಬಿಟ್ಟಿದ್ದೇನೆ. ನನಗೆ ಸಮಯವಿಲ್ಲದ ಕಾರಣ ತಾನು ಆರ್‌ಸಿಬಿ ಟೀಮ್ ಖರೀದಿಸುತ್ತಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ