/newsfirstlive-kannada/media/post_attachments/wp-content/uploads/2024/03/D-K-Shivakumar.jpg)
ರಾಮನಗರ ಜಿಲ್ಲೆ ಹಾಗೇ ಇರುತ್ತೆ, ಅದರ ಹೆಸರು ಮಾತ್ರ ಬದಲಾಗುತ್ತದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ನ್ಯೂಸ್​​ಫಸ್ಟ್​ಗೆ ಜೊತೆಗೆ ಮಾತನಾಡಿದ ಅವರು, ವಿಶ್ವವೇ ಬೆಂಗಳೂರನ್ನ ನೋಡುತ್ತಿದೆ. ಹೆಸರು ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಮನವಿ ಕೊಟ್ಟಿದ್ದೇವೆ. ಜಿಲ್ಲೆ ಹೆಸರು ಬದಲಾದ ನಂತರ ಅಭಿವೃದ್ಧಿ ಕೆಲಸಗಳು ಕೂಡ ಬೇಗ ಆಗಲಿವೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್​ ಪಕ್ಕದಲ್ಲೇ ಆಂಧ್ರಪ್ರದೇಶದ, ತಮಿಳುನಾಡು ಇದೆ. ಹಾಗಾಗಿ ಕೈಗಾರಿಕೆಗಳಿಗೂ ಅನುಕೂಲ ಆಗಲಿದೆ. ಬೆಂಗಳೂರು ಹೆಸರನ್ನ ಉಳಿಸಿಕೊಳ್ಳಲು ಪ್ರಯತ್ನಿಸಲಾಗ್ತಿದೆ ಎಂದಿದ್ದಾರೆ.
ಇದನ್ನೂ ಓದಿ: B.C ಪಾಟೀಲ್​ ಅಳಿಯ ಆತ್ಮಹತ್ಯೆ.. ಇಂದು ಮಧ್ಯಾಹ್ನ ವೀರಶೈವ ಸಂಪ್ರದಾಯದಂತೆ ಅಂತ್ಯಕ್ರಿಯೆ
ನನ್ನ ನೇತೃತ್ವದಲ್ಲಿ ಸಿಎಂ ಭೇಟಿ ಮಾಡಿದ್ದೆವು. ನಾವೆಲ್ಲಾ ಬೆಂಗಳೂರಿನವರೇ. ಮೊದಲು ಬೆಂಗಳೂರು ಜಿಲ್ಲೆಗೆ ರಾಮನಗರ ಸೇರಿತ್ತು. ನಂತರ ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಲಾಯಿತು. ಈಗ ರಾಮನಗರ ಬದಲಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಹೆಸರು ಬದಲಿಸುವಂತೆ ಕೋರಲಾಗಿದೆ. ಇದಕ್ಕೆ ಸಿಎಂ ಕೂಡ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಡಿಕೆಶಿ ಹೇಳಿದ್ದಾರೆ.
ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ಆಗಲಿದೆ. ಬಳಿಕ ಹೆಸರು ಬದಲಾವಣೆ ಆಗಲಿದೆ. ಈಗಿರುವ ರಾಮನಗರವೇ ಹೆಡ್ ಕ್ವಾಟ್ರಸ್ ಆಗಿರಲಿದೆ. ಮಾಗಡಿ, ಕನಕಪುರ, ಚನ್ನಪಟ್ಟಣ, ಹಾರೋಹಳ್ಳಿ ಬೆಂಗಳೂರು ದಕ್ಷಿಣ ವ್ಯಾಪ್ತಿಗೆ ಸೇರಲಿವೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ