newsfirstkannada.com

ಶೋಭಾ ಕರಂದ್ಲಾಜೆ ವಿವಾದಾತ್ಮಕ ಹೇಳಿಕೆಯೇ ಡಿಎಂಕೆಗೆ ಅಸ್ತ್ರ; ತಮಿಳುನಾಡಿನಲ್ಲಿ ಕೋಲಾಹಲ!

Share :

Published March 20, 2024 at 1:07pm

Update March 20, 2024 at 1:08pm

    ತಮಿಳಿಗರು ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್‌ ಕೇಸ್‌ಗೆ ಕಾರಣನಾ?

    ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತಿಗೆ ಕೆರಳಿ ಕೆಂಡವಾದ ಡಿಎಂಕೆ

    ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ವಿರುದ್ಧ ಡಿಎಂಕೆ ಪ್ರಚಾರ

ಚೆನ್ನೈ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ನೀಡಿರುವ ಒಂದು ವಿವಾದಾತ್ಮಕ ಹೇಳಿಕೆ ತಮಿಳುನಾಡು ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಬಿಜೆಪಿ ನಾಯಕಿಯ ಮಾತಿಗೆ ಕೆರಳಿ ಕೆಂಡವಾಗಿರುವ ಡಿಎಂಕೆ ಪಕ್ಷ ಕೇಂದ್ರ ಚುನಾವಣಾ ಆಯೋಗದ ಮೊರೆ ಹೋಗಿದೆ. ಅಷ್ಟೇ ಅಲ್ಲ ಶೋಭಾ ಕರಂದ್ಲಾಜೆ ಅವರ ಹೇಳಿಕೆಯಿಂದ ಬಿಜೆಪಿ ಪಕ್ಷವನ್ನು ಕಟ್ಟಿ ಹಾಕಲು ಮಾಸ್ಟರ್ ಪ್ಲಾನ್ ಮಾಡಿದೆ.

ಬೆಂಗಳೂರಿನ ನಗರ್ತ್‌ಪೇಟೆಯಲ್ಲಿ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಮಾಡಿದ ಘಟನೆ ಖಂಡಿಸಿ ಮೆರವಣಿಗೆ ಮಾಡಿದ್ದರು. ಈ ವೇಳೆ ಆಕ್ರೋಶಭರಿತವಾಗಿ ಮಾತನಾಡಿದ್ದ ಶೋಭಾ ಕರಂದ್ಲಾಜೆ ಅವರು ತಮಿಳಿಗರು ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಬ್ಲಾಸ್ಟ್‌ ಕೇಸ್‌ನ ಹಿಂದೆ ಇದ್ದಾರೆ ಎಂದಿದ್ದರು. ಶೋಭಾ ಕರಂದ್ಲಾಜೆ ಅವರ ಈ ಮಾತನ್ನ ಡಿಎಂಕೆ ನಾಯಕರು ಖಂಡಿಸಿದ್ದಾರೆ. ಇದನ್ನೇ ಲೋಕಸಭಾ ಚುನಾವಣೆಗೂ ಬ್ರಹ್ಮಾಸ್ತ್ರ ಮಾಡಿಕೊಳ್ಳಲು ಮುಂದಾಗಿದ್ದಾರೆ.

ಇದನ್ನೂ ಓದಿ: ಶೋಭಾ ಕರಂದ್ಲಾಜೆ ಹೇಳಿಕೆಗೆ CM ಸ್ಟಾಲಿನ್ ಸಿಡಿಮಿಡಿ; ತಮಿಳುನಾಡಿಗರ ಕ್ಷಮೆ ಕೇಳಿದ ಕೇಂದ್ರ ಸಚಿವೆ..!

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸಿರುವ ಡಿಎಂಕೆ ಇಂದು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಬಿಜೆಪಿ ಸಂಸದೆಯ ಮಾತು ಶಾಂತಿ, ಸಹಬಾಳ್ವೆ, ದೇಶದ ಏಕತೆಗೆ ಧಕ್ಕೆಯನ್ನು ಉಂಟುಮಾಡಿದೆ. ಹೀಗಾಗಿ ಕೂಡಲೇ ಶೋಭಾ ಕರಂದ್ಲಾಜೆ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.

ತಾವು ನೀಡಿದ ಹೇಳಿಕೆ ಕೋಲಾಹಲ ಸೃಷ್ಟಿಸಿದ ಮೇಲೆ ಶೋಭಾ ಕರಂದ್ಲಾಜೆ ಅವರು ಸೋಷಿಯಲ್ ಮೀಡಿಯಾದಲ್ಲಿ ತಮಿಳಿಗರ ಕ್ಷಮೆಯನ್ನು ಕೇಳಿದ್ದಾರೆ. ಆದರೆ ವಿವಾದಾತ್ಮಕ ಹೇಳಿಕೆಯನ್ನು ಚುನಾವಣಾ ಸಮಯದಲ್ಲಿ ಡಿಎಂಕೆ ಬಳಸಿಕೊಳ್ಳಲು ಮುಂದಾಗಿದೆ.

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 400 ಸೀಟ್ ಗೆಲ್ಲಲು ಪ್ರಧಾನಿ ಮೋದಿ ಹಾಗೂ ಬಿಜೆಪಿ ಪಕ್ಷ ವಿಶ್ವಾಸದಲ್ಲಿದೆ. ಈ 400ರ ಟಾರ್ಗೆಟ್ ಹಿನ್ನೆಲೆಯಲ್ಲಿ ಉತ್ತರ ಭಾರತಕ್ಕಿಂತ ಹೆಚ್ಚಾಗಿ ದಕ್ಷಿಣ ಭಾರತದಲ್ಲೇ ಪ್ರಧಾನಿ ಮೋದಿ ಹೆಚ್ಚು ಹೆಚ್ಚು ಪ್ರಚಾರ, ರೋಡ್ ಶೋಗಳನ್ನು ನಡೆಸುತ್ತಿದ್ದಾರೆ. ತಮಿಳುನಾಡಿನಲ್ಲಿ ಬಿಜೆಪಿ ಖಾತೆ ತೆರೆಯಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಅಣ್ಣಾಮಲೈ ಸೇರಿದಂತೆ ಹಲವು ನಾಯಕರು ತೀವ್ರ ಕಸರತ್ತು ನಡೆಸುತ್ತಿದ್ದಾರೆ. ಈ ಬೆಳವಣಿಗೆಯ ಮಧ್ಯೆ ಶೋಭಾ ಕರಂದ್ಲಾಜೆ ಅವರು ನೀಡಿರುವ ಹೇಳಿಕೆ ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಶೋಭಾ ಕರಂದ್ಲಾಜೆ ವಿವಾದಾತ್ಮಕ ಹೇಳಿಕೆಯೇ ಡಿಎಂಕೆಗೆ ಅಸ್ತ್ರ; ತಮಿಳುನಾಡಿನಲ್ಲಿ ಕೋಲಾಹಲ!

https://newsfirstlive.com/wp-content/uploads/2024/03/DMK-Shobha-Karandlaje.jpg

Load More