newsfirstkannada.com

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ದಾಖಲಿಸಿದ DMK..!

Share :

Published March 20, 2024 at 2:16pm

  ಚುನಾವಣೆ ವೇಳೆ ಯಡವಟ್ಟು ಮಾಡಿಕೊಂಡ ಕರಂದ್ಲಾಜೆ

  ಚುನಾವಣಾ ಗೆಲುವಿಗೆ ಮುಳುವಾಗುತ್ತಾ ಅವರ ಹೇಳಿಕೆ..?

  ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್​​ರಿಂದ ತೀವ್ರ ಖಂಡನೆ

ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಮೇಶ್ವರ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣಕ್ಕೆ ಸಂಬಂಧಿಸಿದಂತೆ, ತಮಿಳುನಾಡಿನಿಂದ ಬಂದವರು ಬಾಂಬ್​ ಇಟ್ಟರು ಎಂಬ ಹೇಳಿಕೆ ಭಾರೀ ಖಂಡನೆಗೆ ಕಾರಣವಾಗಿದೆ. ಕರಂದ್ಲಾಜೆ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದ, ಸಿಎಂ ಎಂಕೆ ಸ್ಟಾಲಿನ್ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದರು. ಇದೀಗ ಚುನಾವಣಾ ಆಯೋಗಕ್ಕೂ ದೂರು ನೀಡಲಾಗಿದೆ.

ತಮಿಳುನಾಡಿನ ಆಡಳಿತರೂಢ ಡಿಎಂಕೆ ಪಕ್ಷದಿಂದ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ರಾಮೇಶ್ವರಂ ಕೆಫೆ ಬಾಂಬ್ ಬಾಸ್ಟ್ ಹಿಂದೆ ತಮಿಳುಗರು ಇದ್ದಾರೆ ಎಂದಿದ್ದಾರೆ. ತಮಿಳುನಾಡಿನಲ್ಲಿ ಟ್ರೈನಿಂಗ್ ಪಡೆದು , ಬಾಂಬ್ ಇಡಲು ಬೆಂಗಳೂರಿಗೆ ರಾಮೇಶ್ವರಂ ಕೆಫೆಗೆ ಶಂಕಿತ ಬಂದಿದ್ದಾನೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: ಶೋಭಾ ಕರಂದ್ಲಾಜೆ ಹೇಳಿಕೆಗೆ CM ಸ್ಟಾಲಿನ್ ಸಿಡಿಮಿಡಿ; ತಮಿಳುನಾಡಿಗರ ಕ್ಷಮೆ ಕೇಳಿದ ಕೇಂದ್ರ ಸಚಿವೆ..!

ಆದರೆ ಎನ್ಐಎ ತನಿಖೆ ನಡೆಯುತ್ತಿರುವ ಸಂದರ್ಭದಲ್ಲಿ ಈ ರೀತಿ ಹೇಳಿಕೆ ನೀಡಿದ್ದರೂ ಯಾರೊಬ್ಬರ ಬಂಧನ ಕೂಡ ಆಗಿಲ್ಲ. ತಮಿಳುನಾಡು-ಕರ್ನಾಟಕದ ಜನರ ಮಧ್ಯೆ ಕೋಮು ದ್ವೇಷದ ಭಾಷಣ ಮಾಡಿದ್ದಾರೆ. ಹೀಗಾಗಿ ಚುನಾವಣಾ ಆಯೋಗವು ಅವರ ವಿರುದ್ಧ ಪ್ರಜಾಪತ್ರಿನಿಧಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ಜೊತೆಗೆ ಕ್ರಮ ತೆಗೆದುಕೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ದಾಖಲಿಸಿದ DMK..!

https://newsfirstlive.com/wp-content/uploads/2024/03/SHOBHA.jpg

Load More