newsfirstkannada.com

ಉದಯನಿಧಿ ಬಳಿಕ ಮತ್ತೊಂದು ಸ್ಫೋಟಕ ಹೇಳಿಕೆ ಕೊಟ್ಟ DMK ನಾಯಕ; ‘ಇಂಡಿಯಾ’ ಮೈತ್ರಿಕೂಟಕ್ಕೆ ಮುಜುಗರ

Share :

12-09-2023

    ಸನಾತನ ಧರ್ಮ ಡೆಂಗ್ಯೂ, ಮಲೇರಿಯಾಕ್ಕೆ ಹೋಲಿಸಿದ್ದ ಉದಯನಿಧಿ

    ಬಿಜೆಪಿ ನಾಯಕರು, ಪ್ರಧಾನಿ ನರೇಂದ್ರ ಮೋದಿ ಕೂಡ ತೀಕ್ಷ್ಣ ಪ್ರತಿಕ್ರಿಯೆ

    ಉದಯನಿಧಿ ಸ್ಟಾಲಿನ್ ಬಳಿಕ ಶಿಕ್ಷಣ ಸಚಿವ ತಿರು ಪೊನ್ನುಮುಡಿ ಹೇಳಿಕೆ

ಚೆನ್ನೈ: ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಪುತ್ರ ಸಚಿವ ಉದಯನಿಧಿ ಸ್ಟಾಲಿನ್‌ ಅವರು ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾಕ್ಕೆ ಹೋಲಿಸಿದ್ದರು. ಸನಾತನ ಧರ್ಮವನ್ನು ವಿರೋಧಿಸಿದರೆ ಸಾಲಲ್ಲ ಅದನ್ನು ನಿರ್ಮೂಲನೆ ಮಾಡಬೇಕು ಎಂದು ಕರೆ ಕೊಟ್ಟಿದ್ದರು. ಡಿಎಂಕೆ ನಾಯಕನ ಈ ವಿವಾದಾತ್ಮಕ ಹೇಳಿಕೆ ದೇಶಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದೆ.

ಸನಾತನ ಧರ್ಮದ ಕುರಿತು ಉದಯನಿಧಿ ಸ್ಟಾಲಿನ್‌ ಹೇಳಿಕೆಗೆ ಹಿಂದೂ ಸಂಘಟನೆಗಳು, ಬಿಜೆಪಿ ನಾಯಕರು, ಪ್ರಧಾನಿ ನರೇಂದ್ರ ಮೋದಿ ಕೂಡ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಈ ಸನಾತನ ಧರ್ಮದ ಹೇಳಿಕೆ ವಿವಾದ ಜೀವಂತವಾಗಿರುವಾಗಲೇ ಡಿಎಂಕೆಯ ಮತ್ತೊಬ್ಬ ನಾಯಕ, ಶಿಕ್ಷಣ ಸಚಿವ ತಿರು ಪೊನ್ನಮುಡಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ವಿಷಕಾರಿ ಹಾವು.. ಸನಾತನ ಧರ್ಮದ ಬಳಿಕ ಬಿಜೆಪಿ, ಮೋದಿ ವಿರುದ್ಧ ಉದಯನಿಧಿ ವಿವಾದಾತ್ಮಕ ಹೇಳಿಕೆ

ಇಂಡಿಯಾ ಮೈತ್ರಿಕೂಟವು ಸನಾತನ ಧರ್ಮ ನಿರ್ಮೂಲನೆಗಾಗಿಯೇ ರಚನೆಯಾಗಿದೆ. ಇಂಡಿಯಾ ಮೈತ್ರಿಕೂಟದಲ್ಲಿರುವ ಎಲ್ಲಾ ಪಕ್ಷಗಳ ನಿಲುವು ಒಂದೇ ಆಗಿದೆ. ಇಂಡಿಯಾ ಮೈತ್ರಿಕೂಟದ 26 ಪಕ್ಷಗಳು ಒಂದೇ ಅಜೆಂಡಾ ಹೊಂದಿವೆ ಎಂದ ಸಚಿವ ಪೊನ್ನುಮುಡಿ ಹೇಳಿದ್ದಾರೆ. ಉದಯನಿಧಿ ಸ್ಟಾಲಿನ್ ಬಳಿಕ ಶಿಕ್ಷಣ ಸಚಿವ ತಿರು ಪೊನ್ನುಮುಡಿ ನೀಡಿರುವ ಹೇಳಿಕೆ ಮತ್ತೆ ಬಿಜೆಪಿ ನಾಯಕರನ್ನು ಕೆರಳಿಸಿದೆ. ತಮಿಳುನಾಡು ಬಿಜೆಪಿ ಘಟಕ ತಿರು ಪೊನ್ನುಮುಡಿ ಹೇಳಿಕೆಯನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.

ಸನಾತನ ಧರ್ಮದ ಕುರಿತು ಉದಯನಿಧಿ ಹೇಳಿಕೆ ನೀಡಿದ ಬಳಿಕ ಇಂಡಿಯಾ ಮೈತ್ರಿಕೂಟದಲ್ಲಿ ಅಪಸ್ವರ ಕೇಳಿ ಬಂದಿತ್ತು. ಕಾಂಗ್ರೆಸ್, ಟಿಎಂಸಿ ಸೇರಿದಂತೆ ಮಿತ್ರಪಕ್ಷಗಳು ಡಿಎಂಕೆ ನಾಯಕರ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದ್ದವು. ನಮಗೆ ಎಲ್ಲಾ ಧರ್ಮಗಳ ಮೇಲೆ ಗೌರವವಿದೆ ಎಂಬ ಹೇಳಿಕೆ ನೀಡಿದ್ದರು. ಇಂಡಿಯಾ ಮೈತ್ರಿಕೂಟದಲ್ಲಿ ಭಿನ್ನಾಭಿಪ್ರಾಯ ಕೇಳಿ ಬಂದ ಮೇಲೂ ಡಿಎಂಕೆ ನಾಯಕರು ಸನಾತನ ಧರ್ಮದ ನಿರ್ಮೂಲನೆಯ ಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇದರ ಮಧ್ಯೆ ಇಂಡಿಯಾ ಮೈತ್ರಿಕೂಟವು ಸನಾತನ ಧರ್ಮ ನಿರ್ಮೂಲನೆಗಾಗಿಯೇ ರಚನೆಯಾಗಿದೆ ಎಂದು ಹೇಳಿಕೆ ನೀಡಿದ್ದಾರೆ.

ಪದೇ ಪದೆ ಡಿಎಂಕೆ ನಾಯಕರು ವಿವಾದಾತ್ಮಕ ಹೇಳಿಕೆ ನೀಡುತ್ತಿರೋದು ಇಂಡಿಯಾ ಮೈತ್ರಿಕೂಟದ ನಾಯಕರಿಗೆ ಮುಜುಗರವನ್ನು ತಂದಿದೆ. ಡಿಎಂಕೆ ನಾಯಕರ ಹೇಳಿಕೆಯನ್ನೇ ಅಸ್ತ್ರವಾಗಿಸಿಕೊಂಡಿರುವ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಇಂಡಿಯಾ ಮೈತ್ರಿಕೂಟದ ಮುಖವಾಡ ಬಯಲಾಗಿದೆ ಎಂದು ಕಿಡಿಕಾರಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

ಉದಯನಿಧಿ ಬಳಿಕ ಮತ್ತೊಂದು ಸ್ಫೋಟಕ ಹೇಳಿಕೆ ಕೊಟ್ಟ DMK ನಾಯಕ; ‘ಇಂಡಿಯಾ’ ಮೈತ್ರಿಕೂಟಕ್ಕೆ ಮುಜುಗರ

https://newsfirstlive.com/wp-content/uploads/2023/09/DMK-Leader-On-Sanatana-Dharma.jpg

Load More