ಸನಾತನ ಧರ್ಮದ ಕುರಿತು ಉದಯನಿಧಿ ಸ್ಟಾಲಿನ್ ಹೇಳಿಕೆ ವೈರಲ್
‘ಅಂಬೇಡ್ಕರ್, ಪೆರಿಯಾರ್ ಸಿದ್ಧಾಂತಕ್ಕೆ ನಾವು ಬದ್ಧವಾಗಿದ್ದೇವೆ’
ಸನಾತನ ಧರ್ಮದ ವಿರುದ್ಧ ನಾಳೆಯೂ ಮಾತನಾಡುತ್ತೇವೆ; ಉದಯನಿಧಿ
ಚೆನ್ನೈ: ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಪುತ್ರ ಹಾಗೂ ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಹಾಗೂ ಬಿಜೆಪಿ ನಾಯಕರ ಮಧ್ಯೆ ಸನಾತನ ಯುದ್ಧ ಘೋಷಣೆಯಾಗಿದೆ. ಸನಾತನ ಧರ್ಮದ ಕುರಿತು ಉದಯನಿಧಿ ಸ್ಟಾಲಿನ್ ಆಡಿರೋ ಮಾತು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಿಜೆಪಿ ಐಟಿ ಸೆಲ್ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ಅವರು ಈ ಬಗ್ಗೆ ತೀಕ್ಷ್ಮ ಪ್ರತಿಕ್ರಿಯೆ ನೀಡಿದ್ದು, ಉದಯನಿಧಿ ಸ್ಟಾಲಿನ್ ಅವರೂ ಕೂಡ ತಿರುಗೇಟು ಕೊಟ್ಟಿದ್ದಾರೆ.
ಪ್ರಗತಿಪರ ಲೇಖಕರು ಆಯೋಜಿಸಿದ್ದ ‘ಸನಾತನ ನಿರ್ಮೂಲನಾ ಸಮ್ಮೇಳನ’ದಲ್ಲಿ ಉದಯನಿಧಿ ಸ್ಟಾಲಿನ್ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು, ಈ ಕಾರ್ಯಕ್ರಮದಲ್ಲಿ ಮಾತನಾಡಲು ನನಗೆ ಅವಕಾಶ ನೀಡಿದ್ದಕ್ಕೆ ಧನ್ಯವಾದಗಳು. ನೀವು ಈ ಕಾರ್ಯಕ್ರಮವನ್ನು ಸನಾತನ ವಿರೋಧಿ ಸಮ್ಮೇಳನ ಎನ್ನುವ ಬದಲು ಸನಾತನ ನಿರ್ಮೂಲನಾ ಸಮ್ಮೇಳನ ಎಂದು ಆಯೋಜಿಸಿದ್ದೀರಿ. ಇದಕ್ಕೆ ನನಗೆ ಬಹಳ ಇಷ್ಟವಾಯಿತು. ಕೆಲವು ವಿಚಾರಗಳನ್ನು ನಾವು ವಿರೋಧಿಸುವ ಬದಲು ಅವುಗಳನ್ನು ನಿರ್ಮೂಲನೆ ಮಾಡುವುದೇ ಸರಿ. ಸನಾತನ ಧರ್ಮವನ್ನೂ ನಾವು ವಿರೋಧಿಸುವ ಬದಲು ನಿರ್ಮೂಲನೆ ಮಾಡಬೇಕು ಎಂದು ಉದಯನಿಧಿ ಸ್ಟಾಲಿನ್ ಹೇಳಿದರು.
ಮುಂದುವರಿದು ಮಾತನಾಡಿರುವ ಉದಯನಿಧಿ ಅವರು ಸನಾತನ ಧರ್ಮವು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ. ಕೆಲವು ವಿಷಯಗಳನ್ನು ನಾವು ವಿರೋಧಿಸಲು ಸಾಧ್ಯವಿಲ್ಲ, ಅದನ್ನು ರದ್ದುಗೊಳಿಸಬೇಕು. ನಾವು ಡೆಂಗ್ಯೂ, ಮಲೇರಿಯಾ ಅಥವಾ ಕೊವಿಡ್-19 ಅನ್ನು ವಿರೋಧಿಸಲು ಸಾಧ್ಯವಿಲ್ಲ. ಆದ್ರೆ ಇದನ್ನು ನಿರ್ಮೂಲನೆ ಮಾಡಬೇಕು ಎಂದು ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ. ಉದಯನಿಧಿ ಅವರು ಮಾತನಾಡಿರೋ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡಿದೆ.
Udhayanidhi Stalin, son of Tamilnadu CM MK Stalin, and a minister in the DMK Govt, has linked Sanatana Dharma to malaria and dengue… He is of the opinion that it must be eradicated and not merely opposed. In short, he is calling for genocide of 80% population of Bharat, who… pic.twitter.com/4G8TmdheFo
— Amit Malviya (@amitmalviya) September 2, 2023
ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾಗೆ ಹೋಲಿಸಿರೋದನ್ನ ಬಿಜೆಪಿ ಖಂಡಿಸಿದೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣ Xನಲ್ಲಿ ಹಂಚಿಕೊಂಡಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಕಿಡಿಕಾರಿದ್ದಾರೆ. ಉದಯನಿಧಿ ಸ್ಟಾಲಿನ್ ಅವರು ವಿರೋಧಿಸುವ ಬದಲು ಅಭಿಪ್ರಾಯವನ್ನೇ ನಿರ್ಮೂಲನೆ ಮಾಡಬೇಕು ಎಂದಿದ್ದಾರೆ. ಈ ಮೂಲಕ ಸನಾತನ ಧರ್ಮವನ್ನು ಅನುಸರಿಸುವ ದೇಶದ ಶೇಕಡಾ 80ರಷ್ಟು ಜನರ ನರಮೇಧಕ್ಕೆ ಕರೆ ನೀಡಿದ್ದಾರೆ. ಡಿಎಂಕೆ ಕಾಂಗ್ರೆಸ್ ಮಿತ್ರಕೂಟದ ಪಕ್ಷವಾಗಿದೆ. ಮುಂಬೈನಲ್ಲಿ ನಡೆದ ಇಂಡಿಯಾ ಮಿತ್ರಕೂಟದ ಸಭೆಯಲ್ಲಿ ಇದೇ ಅಭಿಪ್ರಾಯ ಕೇಳಿ ಬಂತೇ ಎಂದು ಪ್ರಶ್ನಿಸಿದ್ದಾರೆ.
ಸನಾತನ ಯುದ್ಧಕ್ಕೆ ಉದಯನಿಧಿ ಆಹ್ವಾನ!
ಬಿಜೆಪಿ ನಾಯಕ ಅಮಿತ್ ಮಾಳವೀಯ ಆರೋಪಕ್ಕೆ ಸಚಿವ ಉದಯನಿಧಿ ಸ್ಟಾಲಿನ್ ಕೂಡ ತಿರುಗೇಟು ನೀಡಿದ್ದಾರೆ. ನಾನು ನನ್ನ ಭಾಷಣದಲ್ಲಿ ಎಲ್ಲಿಯೂ ಸನಾತನ ಧರ್ಮ ಪಾಲಿಸುವವರ ನರಮೇಧ ಮಾಡಿ ಎಂದು ಹೇಳಿಲ್ಲ. ಕೇಸರಿ ಪಡೆಯ ಇಂತಹ ಬೆದರಿಕೆಗಳಿಗೆಲ್ಲಾ ನಾವು ಮಣಿಯೋದಿಲ್ಲ. ಅಂಬೇಡ್ಕರ್, ಪೆರಿಯಾರ್ ಸಿದ್ಧಾಂತಕ್ಕೆ ನಾವು ಬದ್ಧವಾಗಿದ್ದೇವೆ. ಯಾವುದು ಕಾನೂನು ರೀತಿಯ ಹೋರಾಟಕ್ಕೂ ನಾವು ಸಿದ್ಧ. ಸನಾತನ ಧರ್ಮ ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ ಎಂದು ನಾಳೆಯೂ ಹೇಳುತ್ತೇವೆ ಎಂದು ಸವಾಲು ಹಾಕಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ