ಉತ್ತರ ಕನ್ನಡ, ಕೊಡಗು, ದಕ್ಷಿಣ ಕನ್ನಡದ ನದಿಗಳು ತುಂಬಿ ಹರಿಯುತ್ತಿವೆ
ಕೆಲ ಭಾಗಗಳಲ್ಲಿ 20 ಸೆ.ಮೀಗೂ ಹೆಚ್ಚಿನ ಮಳೆ ಸುರಿದಿದೆ
ಇಂದಿನಿಂದ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ
ಮಳೆಯಿಂದಾಗಿ ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ಉತ್ತರ ಕನ್ನಡ, ಕೊಡಗು, ದಕ್ಷಿಣ ಕನ್ನಡದ ನದಿಗಳು ತುಂಬಿ ಹರಿಯುತ್ತಿವೆ. ಸೋಮವಾರದಂದು ಉತ್ತರ ಕನ್ನಡದಲ್ಲಿ ಮತ್ತು ದಕ್ಷಿಣ ಕನ್ನಡದ ಕೆಲ ಭಾಗಗಳಲ್ಲಿ 20 ಸೆ.ಮೀಗೂ ಹೆಚ್ಚಿನ ಮಳೆ ಸುರಿದಿದೆ.
ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ
ಹವಾಮಾನ ಇಲಾಖೆ ಸೂಚಿಸಿದಂತೆ ಇಂದು ಮತ್ತೆ ನಾಳೆ ಮಳೆಯಬ್ಬರ ಕೊಂಚ ಕಡಿಮೆಯಾಗಲಿದ್ದು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಆರು ಜನರು ಸಾವು
ಮಳೆಯಿಂದಾಗಿ ರಾಜ್ಯದಾದ್ಯಂತ ಆರು ಜನರು ಸಾವನ್ನಪ್ಪಿದ್ದಾರೆ. ಕಲಬುರಗಿಯ ಜೇವರ್ಗಿಯಲ್ಲಿ ಮನೆ ಕುಸಿದು ಬಸಮ್ಮ (35) ಸಾವನ್ನಪ್ಪಿದ್ದರೆ, ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಳ್ಳಾಡಿಹರ್ಕಾಡಿಯಲ್ಲಿ ಗೋಕುಲದಾಸ್ ಪ್ರಭು (53) ಆಕಸ್ಮಿಕವಾಗಿ ಹಳ್ಳಕ್ಕೆ ಬಿದ್ದು ಮೃತರಾಗಿದ್ದಾರೆ.
ಅರಶಿನ ಗುಂಡಿ ಜಲಪಾತದಲ್ಲಿ ರೀಲ್ಸ್ ಮಾಡಲು ಹೋಗಿ ಭದ್ರಾವತಿಯ ಶರತ್ (23), ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ರಾಮತೀರ್ಥ ಕೆರೆಯಲ್ಲಿ ಮುಳುಗಿ ಮಣಿಕಂಠ ಮಂಜುನಾಥ ನಾಯ್ಕ (17) ಸಾವನ್ನಪ್ಪಿದ್ದಾರೆ. ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನಲ್ಲಿ ನದಿಯಲ್ಲಿ ಮುಳುಗಿ ಮಂಜುನಾಥ ಬಸವರಾಜ ಆನಂದಿ (27) ಎಂಬವರು ಅಸುನೀಗಿದ್ದಾರೆ.
ಒಟ್ಟಿನಲ್ಲಿ ರಾಜ್ಯದಲ್ಲಿ ಮಳೆಯ ಅವಾಂತರಕ್ಕೆ ಆರು ಜನರು ಸಾವನ್ನಪ್ಪಿದ್ದಾರೆ. ಇನ್ನು ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ