200 ಯೂನಿಟ್ ಕರೆಂಟ್ ಫ್ರೀ ಯೋಜನೆಗೆ ಏನು ಮಾಡಬೇಕು?
ಗೃಹಜ್ಯೋತಿ ಪಡೆಯಲು ಯಾವ್ಯಾವ ದಾಖಲೆ ಸಲ್ಲಿಸಬೇಕು?
ಅಪಾರ್ಟ್‌ಮೆಂಟ್ ಮಾಲೀಕನು ಅರ್ಜಿ ಸಲ್ಲಿಸಬಹುದೇ?
ಬೆಂಗಳೂರು: ಗೃಹಜ್ಯೋತಿ ಯೋಜನೆಯಡಿ ರಾಜ್ಯ ಸರ್ಕಾರ 200 ಯೂನಿಟ್ ಕರೆಂಟ್ ಫ್ರೀ ಎಂದು ಘೋಷಣೆ ಮಾಡಿದೆ. ಆದರೆ ಈ ಗ್ಯಾರಂಟಿ ಯೋಜನೆಯ ಮಾರ್ಗಸೂಚಿಗಳು ಆರಂಭದಲ್ಲಿ ಗೊಂದಲ ಸೃಷ್ಟಿಸಿತ್ತು. ಬಾಡಿಗೆ ಮನೆಯವರು ಕರೆಂಟ್ ಬಿಲ್ ಕಟ್ಟಬೇಕಾ? ಮನೆ ಮಾಲೀಕರಿಗೆ ಫ್ರೀ ಕರೆಂಟ್ ಸಿಗುತ್ತಾ? ಅನ್ನೋ ಹಲವಾರು ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿತ್ತು. ಆದ್ರೀಗ ಸರ್ಕಾರವೇ ಈ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದೆ. ಗೃಹಜ್ಯೋತಿ ಯೋಜನೆಯ ಯಾವುದೇ ಗೊಂದಲಗಳಿದ್ರೆ ನೀವು ಈ ಸ್ಟೋರಿಯನ್ನ ಕಂಪ್ಲೀಟ್ ಆಗಿ ಓದಿ.
1. ನಾನು ಈ ಯೋಜನೆಗೆ ಅರ್ಹನೇ?
ಕರ್ನಾಟಕ ರಾಜ್ಯದ ಎಲ್ಲಾ ಗೃಹ ಬಳಕೆ ಗ್ರಾಹಕರು ಈ ಯೋಜನೆಗೆ ಅರ್ಹರಾಗಿರುತ್ತಾರೆ.
2. ಗೃಹ ಜ್ಯೋತಿ ಯೋಜನೆ ಎಂದರೇನು?
ಗೃಹ ಜ್ಯೋತಿ ಕರ್ನಾಟಕ ಸರ್ಕಾರದ ಪ್ರಮುಖ ಯೋಜನೆ. ಇದು ಕರ್ನಾಟಕದ ಪ್ರತಿ ಗೃಹ ಬಳಕೆದಾರರಿಗೆ 200 ಯೂನಿಟ್ ಉಚಿತ ವಿದ್ಯುತ್ ಅನ್ನು ಒದಗಿಸುತ್ತದೆ.
3. ಗೃಹ ಜ್ಯೋತಿ ಯೋಜನೆ ಪಡೆಯಲು ಏನು ಮಾಡಬೇಕು?
ಈ ಯೋಜನೆಯನ್ನು ಪಡೆಯಲು ಪ್ರತಿ ಗೃಹ ಬಳಕೆ ಗ್ರಾಹಕರು ಸೇವಾ ಸಿಂಧು ವೆಬ್‌ಸೈಟ್‌ನಲ್ಲಿ ನೊಂದಾಯಿಸಿಕೊಳ್ಳಬೇಕು. ಇದರ ಲಿಂಕ್ ಅನ್ನು ಶೀಘ್ರದಲ್ಲೇ ಹಂಚಿಕೊಳ್ಳಲಾಗುವುದು.
4. ಈ ಯೋಜನೆಯು ಯಾವಾಗಿನಿಂದ ಜಾರಿಗೆ ತರಲಾಗುತ್ತದೆ?
ಜುಲೈ 2023ರಲ್ಲಿ ಬಳಸಿದ ವಿದ್ಯುತ್ ಬಳಕೆಯನ್ನು ಆಗಸ್ಟ್ 2023ರಲ್ಲಿ ನೀಡುವ ಬಿಲ್ಲಿಗೆ ಅನ್ವಯವಾಗುವಂತೆ ಯೋಜನೆಯನ್ನು ಜಾರಿಗೊಳಿಸಲಾಗುವುದು.
5. ಈ ಯೋಜನೆಯನ್ನು ಆಫ್‌ಲೈನ್ ಮೂಲಕ ಪಡೆಯಬಹುದೇ?
ಎಲ್ಲಾ ಗೃಹ ಬಳಕೆ ಗ್ರಾಹಕರು ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು.
6. ಈ ಯೋಜನೆ ಪಡೆಯಲು ಯಾವ್ಯಾವ ದಾಖಲೆಗಳನ್ನು ಸಲ್ಲಿಸಬೇಕು?
7. ಅರ್ಜಿ ಸಲ್ಲಿಸುವಾಗ ನಾನು ಶುಲ್ಕ ಪಾವತಿಸಬೇಕೆ?
ಈ ಯೋಜನೆಯಡಿಯಲ್ಲಿ ಯಾವುದೇ ಶುಲ್ಕವನ್ನು ಸೇವಾಸಿಂಧು ಪೋರ್ಟಲ್‌ನಲ್ಲಿ ಪಾವತಿಸ ಬೇಕಿಲ್ಲ.
8. ನಾನು ಜೂನ್ ತಿಂಗಳ ವಿದ್ಯುತ್ ಬಿಲ್ ಅನ್ನು ಪಾವತಿಸಬೇಕೆ?
ಹೌದು. ಈ ಯೋಜನೆಯು ಜುಲೈ 2023 ತಿಂಗಳ ವಿದ್ಯುತ್ ಬಳಕೆಗೆ ಅನ್ವಯಿಸಲಿದ್ದು, 1ನೇ ಆಗಸ್ಟ್ 2023 ಹಾಗೂ ನಂತರದ ಮಾಪಕ ಓದುವ ದಿನಾಂಕದಿಂದ ಅನ್ವಯಿಸುತ್ತದೆ.
9. ನನಗೆ ಒಂದಕ್ಕಿಂತ ಹೆಚ್ಚು ವಿದ್ಯುತ್ ಮಾಪಕಗಳಿದ್ದರೆ ನಾನು ಈ ಯೋಜನೆಗೆ ಅರ್ಹನೇ?
ಇಲ್ಲ. ಪ್ರತಿ ಗ್ರಾಹಕರು ಒಂದು ಮೀಟರ್‌ಗೆ ಮಾತ್ರ ಯೋಜನೆಗೆ ಅರ್ಹರಾಗಿರುತ್ತಾರೆ.
10. ಅರ್ಜಿ ಸಲ್ಲಿಸಿದ ನಂತರ ನಾನು ಯಾವುದೇ ಸ್ವೀಕೃತಿಯನ್ನು ಪಡೆಯುತ್ತೇನೆಯೇ?
ಹೌದು, ಸೇವಾ ಸಿಂಧುವಿನಿಂದ ಸ್ವೀಕೃತಿ ಸಂದೇಶವನ್ನು ನೋಂದಾಯಿತ ಗ್ರಾಹಕರಿಗೆ ಇಮೇಲ್/SMS ಮೂಲಕ ಕಳುಹಿಸಲಾಗುತ್ತದೆ.
11. ನಾನು ಈಗಾಗಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿದ್ದೇನೆ. ಯೋಜನೆಯ ಲಾಭವು ಯಾವಾಗ ನನ್ನ ಖಾತೆಗೆ ಸೇರಲು ಪ್ರಾರಂಭವಾಗುತ್ತದೆ?
ಜುಲೈ 2023ರಲ್ಲಿ ನೀಡಿದ ಬಿಲ್ ಅನ್ನು ಯೋಜನೆಯ ಲಾಭ ಇಲ್ಲದೆ ಪಾವತಿಸಬೇಕಾಗುತ್ತದೆ. ಯೋಜನೆಯ ಪ್ರಯೋಜನಗಳು ಮೀಟರ್ ಓದುವ ದಿನಾಂಕದಿಂದ ಅಂದರೆ 1ನೇ ಆಗಸ್ಟ್ 2023ರಂದು ಅಥವಾ ನಂತರದಲ್ಲಿ ಅನ್ವಯಿಸುತ್ತದೆ.
12. ನಾನು ಅಪಾರ್ಟ್‌ಮೆಂಟ್ ಮಾಲೀಕನಾಗಿದ್ದೇನೆ. ನಾನು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದೇ?
ಹೌದು. ಪ್ರತ್ಯೇಕ ವಿದ್ಯುತ್ ಮೀಟರ್‌ಗಳು ಲಭ್ಯವಿದ್ದರೆ/ಸ್ಥಾಪಿಸಿದ್ದರೆ ಯೋಜನೆಗೆ ಅರ್ಜಿ ಸಲ್ಲಿಸಬಹುದು.
13. ನಾನು ಬಾಡಿಗೆದಾರ, ಬಿಲ್ ಮಾಲೀಕರ ಹೆಸರಿನಲ್ಲಿದೆ. ನನಗೂ ಯೋಜನೆ ಅನ್ವಯವಾಗುವುದೇ?
ಹೌದು. ಆಧಾರ್ ಸಂಖ್ಯೆ, ಬಿಲ್‌ನಲ್ಲಿ ನಮೂದಿಸಲಾಗಿರುವ ಗ್ರಾಹಕರ ಸಂಖ್ಯೆ/ಖಾತೆ ಸಂಖ್ಯೆ, ಬಾಡಿಗೆ/ಭೋಗ್ಯದ ಕರಾರು ಪತ್ರ ಸಲ್ಲಿಸುವುದು ಅಥವಾ ಸಂಬಂಧಿತ ವಿಳಾಸವನ್ನು ಸೂಚಿಸುವ ವೋಟರ್ ಐಡಿ ಸಲ್ಲಿಸಿ ಯೋಜನೆಯ ಲಾಭ ಪಡೆಯಬಹುದು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ