ವೈದ್ಯರ ಈ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು
ಶಸ್ತ್ರ ಚಿಕಿತ್ಸೆಗೆಂದು ಆಸ್ಪತ್ರೆಗೆ ಆಗಮಿಸಿದ ಕುಟುಂಬಸ್ಥರಿಗೆ ಶಾಕ್
ಮೌಡಾ ತಾಲೂಕಿನ ಖಾತ್ನಲ್ಲಿರುವ ಆರೋಗ್ಯ ಕೇಂದ್ರದಲ್ಲಿ ಘಟನೆ
ನಾಗ್ಪುರ: ಚಹಾ ಎಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ. ಮಳೆ, ಚಳಿ, ಬಿಸಿಲಿರಲಿ ಏನೇ ಆದರೂ ಕೆಲವರಂತು ಚಹಾ ಕುಡಿಯುವುದನ್ನು ಬಿಡುವುದಿಲ್ಲ. ಪ್ರತಿಯೊಬ್ಬರ ಮನೆಯಲ್ಲೂ ದಿನ ಶುರುವಾಗುವುದು ಬೆಳಗ್ಗಿನ ಚಹಾದಿಂದ. ಕೆಲವರಿಗೆ ಚಹಾ ಅಭ್ಯಾಸವಾಗಿದ್ದರೆ ಇನ್ನೂ ಕೆಲವರಿಗೆ ಇದೊಂದು ರೀತಿಯ ಮನೆಮದ್ದಾಗಿದೆ.
ಇನ್ನೂ ಕೆಲವರು ಚಹಾ ಕುಡಿದು ಮುಂದಿನ ಎಲ್ಲಾ ಕೆಲಸವನ್ನು ಮಾಡುತ್ತಾರೆ. ಆದರೆ ಇಲ್ಲೊಬ್ಬ ವೈದ್ಯರು ಚಹಾಗಾಗಿ ಶಸ್ತ್ರಚಿಕಿತ್ಸೆಯನ್ನೇ ಅರ್ಧದಲ್ಲಿ ನಿಲ್ಲಿಸಿರೋ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮೌಡಾ ತಾಲೂಕಿನ ಖಾತ್ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಘಟನೆ ನಡೆದಿದೆ. ಶಸ್ತ್ರ ಚಿಕಿತ್ಸೆಗೆಂದು ಮಹಿಳೆ ಆಸ್ಪತ್ರೆಗೆ ಆಗಮಿಸಿದ್ದರು. ಆ ಮಹಿಳೆಗೆ ವೈದ್ಯರು ಅರವಳಿಕೆ ಚುಚ್ಚುಮದ್ದು ನೀಡಿದ್ದಾರೆ. ಕೂಡಲೇ ಮಹಿಳೆ ಪ್ರಜ್ಞೆತಪ್ಪಿದ್ದಾರೆ. ಇನ್ನೇನು ಶಸ್ತ್ರ ಚಿಕಿತ್ಸೆ ಮಾಡಬೇಕು ತಯಾರಾಗಿದ್ದ ವೈದ್ಯರಿಗೆ ಚಹಾ ನೆನಪಿಗೆ ಬಂದಿದೆ. ಶಸ್ತ್ರ ಚಿಕಿತ್ಸೆಗೂ ಮುನ್ನ ಚಹಾ ಹಾಗೂ ಬಿಸ್ಕತ್ತು ಸಿಗಲಿಲ್ಲ ಎಂಬ ಕಾರಣಕ್ಕೆ ವೈದ್ಯರಾದ ಭಾಲವಿ ಶಸ್ತ್ರ ಚಿಕಿತ್ಸೆಯನ್ನು ಮಾಡುವುದಿಲ್ಲ ಎಂದು ಆಸ್ಪತ್ರೆಯಿಂದ ಹೊರ ಬಂದಿದ್ದಾರೆ. ಹೀಗಾಗಿ ಮಹಿಳೆಯರ ಸಂಬಂಧಿಕರು ಈ ಬಗ್ಗೆ ಗಲಾಟೆ ಮಾಡಿದ್ದಾರೆ. ಇನ್ನೂ ವೈದ್ಯರ ಈ ರೀತಿಯ ನಡೆಗೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೂ ಪ್ರಕರಣದ ಗಂಭೀರತೆ ಪಡೆದುಕೊಳ್ಳುತ್ತಿದ್ದಂತೆ ಸ್ಥಳಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಅಜಯ್ ದಾವ್ಲೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಮಾತಾಡಿದ ವೈದ್ಯರಾದ ಭಾಲವಿ ನನಗೆ ಮಧುಮೇಹವಿದೆ. ಸಮಯಕ್ಕೆ ಸರಿಯಾಗಿ ಚಹಾ ಮತ್ತು ಬಿಸ್ಕತ್ ಬೇಕಾಗುತ್ತದೆ. ಇದರಿಂದ ನಮ್ಮ ರಕ್ತದಲ್ಲಿರುವ ಸಕ್ಕರೆ ಮಟ್ಟವು ಕಡಿಮೆಯಾಗುತ್ತದೆ. ಹಾಗಾಗಿ ಆಸ್ಪತ್ರೆಯಿಂದ ಹೊರನಡೆಯಬೇಕಾಯಿತು ಎಂದು ತಿಳಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ