/newsfirstlive-kannada/media/post_attachments/wp-content/uploads/2025/05/donald_trump.jpg)
ಅಮೆರಿಕದ ಪ್ರತಿಷ್ಠಿತ ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ವಿದೇಶಿ ವಿದ್ಯಾರ್ಥಿಗಳ ದಾಖಲಿಸುವುದನ್ನು (ಅಡ್ಮಿಷನ್​) ತಾತ್ಕಾಲಿಕವಾಗಿ ಡೊನಾಲ್ಡ್​ ಟ್ರಂಪ್ ಸರ್ಕಾರ ತಡೆ ನೀಡಿದೆ ಎಂದು ಹೇಳಲಾಗುತ್ತಿದೆ. ಈ ವಿಶ್ವವಿದ್ಯಾಲಯದಲ್ಲಿ 140ಕ್ಕೂ ಹೆಚ್ಚು ದೇಶಗಳ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.
ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಅವರ ಗೃಹ ಭದ್ರತಾ ಕಾರ್ಯದರ್ಶಿ ಕ್ರಿಸ್ಟಿ ನೋಯೆಮ್ ಅವರು ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್​ ಖಾತೆಯಲ್ಲಿ ಮಾಹಿತಿ ಶೇರ್ ಮಾಡಿದ್ದಾರೆ. ಈ ಕುರಿತು ಹಾರ್ವರ್ಡ್ ವಿಶ್ವವಿದ್ಯಾಲಯಕ್ಕೆ ಪತ್ರ ಬರೆದಿರುವುದನ್ನು ಕಾರ್ಯದರ್ಶಿ ಕ್ರಿಸ್ಟಿ ನೋಯೆಮ್ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: ಖಾಸಗಿ ಶಾಲೆಯಲ್ಲೂ ಹೆಣ್ಮಕ್ಕಳಿಗೆ ಮೀಸಲಾತಿ.. 50 ಪರ್ಸೆಂಟ್ ಮೀಸಲು ನಿಯಮ ಏನ್ ಹೇಳುತ್ತದೆ..?
/newsfirstlive-kannada/media/post_attachments/wp-content/uploads/2025/05/Harvard_University.jpg)
ವಿಶ್ವವಿದ್ಯಾಲಯದಲ್ಲಿ ಹಿಂಸಾಚಾರ, ವಿರೋಧಿತ್ವ ಹಾಗೂ ಚೀನೀ ಕಮ್ಯುನಿಸ್ಟ್ ಪಕ್ಷದೊಂದಿಗೆ ಸಮನ್ವಯ ಸಾಧಿಸುವುದು ನಡೆಯುತ್ತಿದೆ. ವಿಶ್ವವಿದ್ಯಾಲಯದ ಕ್ಯಾಂಪಸ್​ನಲ್ಲಿ ಈ ರೀತಿ ಮಾಡುವುದರ ಕುರಿತು ಮಾಹಿತಿ ಹಿನ್ನೆಲೆಯಲ್ಲಿ ಗೃಹ ಭದ್ರತಾ ಇಲಾಖೆಯು ತನಿಖೆ ನಡೆಸುತ್ತಿದೆ. ಇದರ ಆಧಾರದ ಮೇಲೆ ತಾತ್ಕಾಲಿಕವಾಗಿ ವಿದೇಶಿ ವಿದ್ಯಾರ್ಥಿಗಳು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ಅಡ್ಮಿಷನ್ ಆಗುವುದನ್ನು ತಡೆ ಹಿಡಿಯಲಾಗಿದೆ ಎಂದು ಹೇಳಲಾಗಿದೆ.
ಮುಂಬರುವ ಶೈಕ್ಷಣಿಕ ವರ್ಷದ ಮೊದಲು ಹಾರ್ವರ್ಡ್ ವಿದ್ಯಾರ್ಥಿ ಮತ್ತು ವಿನಿಮಯ ಸಂದರ್ಶಕರ ಕಾರ್ಯಕ್ರಮದ ಪ್ರಮಾಣೀಕರಣ (Exchange Visitor Program certification)ವನ್ನು ವಾಪಸ್​ ಪಡೆಯಬೇಕು ಎಂದರೆ ಅಂತಹ ವಿದ್ಯಾರ್ಥಿಗಳು 72 ಗಂಟೆಗಳು ಅಂದರೆ ಮೂರು ದಿನಗಳಗಳ ಒಳಗೆ ಅಗತ್ಯವಿರುವ ಮಾಹಿತಿಯನ್ನು ನೀಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇನ್ನು ಈಗಾಗಲೇ ಹಾರ್ವರ್ಡ್ ವಿಶ್ವವಿದ್ಯಾಲಯಕ್ಕೆ ದಾಖಲು ಆಗಿರುವ ವಿದ್ಯಾರ್ಥಿಗಳನ್ನು ಬೇರೆ ಕಾಲೇಜುಗಳಿಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ.
ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us