/newsfirstlive-kannada/media/post_attachments/wp-content/uploads/2025/06/TRUMP-9.jpg)
ಡೊನಾಲ್ಡ್ ಟ್ರಂಪ್ ಅವರ ಕದನ ವಿರಾಮ ಹೇಳಿಕೆಯನ್ನು ಇರಾನ್ ತಿರಸ್ಕರಿಸಿದೆ. ನಾವು ಕದನ ವಿರಾಮ ಘೋಷಿಸಿಲ್ಲ. ಟ್ರಂಪ್ ಹೇಳಿಕೆ ಸತ್ಯವಲ್ಲ ಅಂತಾ ಇರಾನ್ ವಿದೇಶಾಂಗ ಸಚಿವ ಮೊಹಮ್ಮದ್ ಅಗರ್ಚಿ ಸ್ಪಷ್ಟಪಡಿಸಿದ್ದಾರೆ.
ಕದನ ವಿರಾಮ ಪ್ರಸ್ತಾಪವನ್ನು ಇರಾನ್ ಸ್ವೀಕರಿಸಲು ನಿರಾಕರಿಸಿದೆ ಅಂತಾ ಅಮೆರಿಕದ ಮಾಧ್ಯಮಗಳೂ ವರದಿ ಮಾಡಿವೆ. ಟ್ರಂಪ್ ಘೋಷಣೆ ಬೆನ್ನಲ್ಲೇ ವ್ಯತಿರಿಕ್ತ ಹೇಳಿಕೆ ನೀಡಿರುವ ಇರಾನ್, ನಾವು ಪ್ರತೀಕಾರದ ದಾಳಿಯನ್ನು ತೀವ್ರಗೊಳಿಸುತ್ತೇವೆ ಎಂದಿದೆ.
ಅಮೆರಿಕಕ್ಕೆ ತಿರುಗೇಟು ನೀಡಿದ ಇರಾನ್..!
ಟ್ರಂಪ್ ಕದನ ವಿರಾಮ ಘೋಷಿಸುವ ಮುನ್ನವೇ ಇರಾನ್, ಸೋಮವಾರ ಅಮೆರಿಕದ ವಿರುದ್ಧ ಪ್ರತೀಕಾರ ತೀರಿಸಿಕೊಂಡಿದೆ. ಕತಾರ್ ಮತ್ತು ಇರಾಕ್‌ನಲ್ಲಿರುವ ಅಮೆರಿಕದ ನೆಲೆಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಅಮೆರಿಕ ನೆಲಗಳ ಮೇಲಿನ ದಾಳಿಯ ವಿಡಿಯೋ ಬಿಡುಗಡೆ ಮಾಡಿದೆ. ನಾವು ಅಮೆರಿಕಗೆ ಪ್ರತ್ಯುತ್ತರ ನೀಡಿದ್ದೇವೆ ಎಂದು ಅದು ಹೇಳಿಕೊಂಡಿದೆ.
ಇದನ್ನೂ ಓದಿ: ಬ್ಯಾಕ್ ಟು ಬ್ಯಾಕ್ ಸೆಂಚುರಿ.. ಕನ್ನಡಿಗ ಕೆ.ಎಲ್ ರಾಹುಲ್ ಬೆನ್ನಲ್ಲೇ ರಿಷಭ್ ಪಂತ್ ಶತಕ
ಟ್ರಂಪ್ ಹೇಳಿದ್ದೇನು..?
ಎಲ್ಲರಿಗೂ ಅಭಿನಂದನೆಗಳು! ಇಸ್ರೇಲ್ ಮತ್ತು ಇರಾನ್ ಸಂಪೂರ್ಣ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಇಸ್ರೇಲ್ ಮತ್ತು ಇರಾನ್ ತಮ್ಮ ಅಂತಿಮ ಕಾರ್ಯಾಚರಣೆಗಳನ್ನು ಮುಗಿಸಿದ ನಂತರ, ಸುಮಾರು 6 ಗಂಟೆಗಳಲ್ಲಿ ಕದನ ವಿರಾಮ ಪ್ರಾರಂಭವಾಗುತ್ತದೆ. 12 ಗಂಟೆಗಳ ಕಾಲ ಇದು ನಡೆಯುತ್ತದೆ. ನಂತರ ಯುದ್ಧವು ಮುಕ್ತಾಯವಾಗುತ್ತದೆ. ಇರಾನ್ ಮೊದಲು ಕದನ ವಿರಾಮವನ್ನು ಪ್ರಾರಂಭಿಸುತ್ತದೆ. 12 ಗಂಟೆಗಳ ನಂತರ ಇಸ್ರೇಲ್ ಕದನ ವಿರಾಮವನ್ನು ಪ್ರಾರಂಭಿಸುತ್ತದೆ. 24 ಗಂಟೆಗಳ ನಂತರ, 12 ದಿನಗಳ ಯುದ್ಧವು ಅಧಿಕೃತವಾಗಿ ಕೊನೆಗೊಳ್ಳುತ್ತದೆ. ಜಗತ್ತು ಇದನ್ನು ಸ್ವಾಗತಿಸುತ್ತದೆ. ಪ್ರತಿ ಕದನ ವಿರಾಮದ ಸಮಯದಲ್ಲಿ, ಎರಡೂ ಕಡೆಯವರು ಶಾಂತವಾಗಿ ಮತ್ತು ಗೌರವದಿಂದ ಇರುತ್ತಾರೆ.
ಎಲ್ಲವೂ ಸರಿಯಾಗಿ ನಡೆದರೆ, ಇಸ್ರೇಲ್ ಮತ್ತು ಇರಾನ್ ಎರಡೂ ದೇಶಗಳು ಈ ಯುದ್ಧವನ್ನು ಕೊನೆಗೊಳಿಸಲು ಧೈರ್ಯ ಮತ್ತು ಬುದ್ಧಿವಂತಿಕೆಯನ್ನು ತೋರಿಸಿವೆ. ಈ ಯುದ್ಧವು ವರ್ಷಗಳವರೆಗೆ ಮುಂದುವರಿಯಬಹುದಿತ್ತು. ಇಡೀ ಮಧ್ಯಪ್ರಾಚ್ಯವನ್ನು ನಾಶಮಾಡಬಹುದಿತ್ತು. ಆದರೆ ಅದು ಆಗಲಿಲ್ಲ. ಮುಂದೆ ಎಂದಿಗೂ ಆಗುವುದಿಲ್ಲ! ದೇವರು ಇಸ್ರೇಲ್ ಅನ್ನು ಆಶೀರ್ವದಿಸಲಿ, ದೇವರು ಇರಾನ್ ಅನ್ನು ಆಶೀರ್ವದಿಸಲಿ, ದೇವರು ಮಧ್ಯಪ್ರಾಚ್ಯವನ್ನು ಆಶೀರ್ವದಿಸಲಿ, ದೇವರು ಅಮೆರಿಕವನ್ನು ಆಶೀರ್ವದಿಸಲಿ, ಮತ್ತು ದೇವರು ಇಡೀ ಜಗತ್ತನ್ನು ಆಶೀರ್ವದಿಸಲಿ-- ಡೊನಾಲ್ಡ್ ಟ್ರಂಪ್, ಅಮೆರಿಕಾ ಅಧ್ಯಕ್ಷ
ಇದನ್ನೂ ಓದಿ: Breaking: 12 ದಿನಗಳ ಇಸ್ರೇಲ್, ಇರಾನ್ ಯುದ್ಧ ಅಂತ್ಯ- ಕದನ ವಿರಾಮ ಘೋಷಿಸಿದ ಟ್ರಂಪ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ