/newsfirstlive-kannada/media/post_attachments/wp-content/uploads/2025/05/dcm-dk-shivakumar3.jpg)
ಬೆಂಗಳೂರು: ಭಾರತ-ಪಾಕಿಸ್ತಾನ ಗಡಿಯಲ್ಲಿ ಯುದ್ಧದ ಕಾರ್ಮೋಡ ಸೃಷ್ಠಿಯಾಗಿದೆ. ಇತ್ತ ಯುದ್ಧದ ಕಾರ್ಮೋಡದ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಹುಬ್ಬಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ ಎಂದಿದ್ದಾರೆ. ಜೊತೆಗೆ ಅಭಿಮಾನಿಗಳ ಬಳಿ ಸಂಭ್ರಮಾಚರಣೆ, ಫ್ಲೆಕ್ಸ್, ಬ್ಯಾನರ್ ಕಟ್ಟೋದು ಬೇಡ ಅಂತಲೂ ಮನವಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಕರಾಚಿ ಮೇಲೆ ಭಾರತ ಕ್ಷಿಪಣಿ, ಡ್ರೋಣ್ ಅಟ್ಯಾಕ್.. ಖತಂ ಆಗ್ತಾನಾ ದಾವೂದ್ ಇಬ್ರಾಹಿಂ..?
ಇದೇ ಮೇ 15ರಂದು ಡಿಸಿಎಂ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬ. ಹೀಗಾಗಿ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಡಿಕೆ ಶಿವಕುಮಾರ್ ಅವರ ಹುಟ್ಟು ಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಬೇಕು ಅಂತ ಸಕಲ ಸಿದ್ಧತೆ ನಡೆಸಿಕೊಳ್ಳುತ್ತಿದ್ದರು.
ಈಗ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಹೋರಾಡುತ್ತಿರುವಾಗ ನನ್ನ ಜನ್ಮದಿನಾಚರಣೆ ಬೇಡ ಅಂತ ಮನವಿ ಮಾಡಿಕೊಂಡಿದ್ದಾರೆ. ಅದರಂತೆ ಅವರ ಅಭಿಮಾನಿಗಳ ಬಳಿ ಯಾವುದೇ ಸಂಭ್ರಮಾಚರಣೆ ಮಾಡದಂತೆ. ಜನ್ಮದಿನದ ಶುಭ ಕೋರುವ ಫ್ಲೆಕ್ಸ್, ಬ್ಯಾನರ್ ಗಳನ್ನು ಹಾಕುವುದಾಗಲಿ, ಜಾಹೀರಾತುಗಳನ್ನು ನೀಡುವುದಾಗಲಿ ಮಾಡಬಾರದು ಎಂದಿದ್ದಾರೆ.
ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ನಾನು ಹುಟ್ಟುಹಬ್ಬವನ್ನ ಆಚರಿಸಿಕೊಳ್ಳುವುದು ಇಲ್ಲ. ಅಂದು ನಾನು ಊರಿನಲ್ಲಿ ಇರುವುದಿಲ್ಲ. ನನ್ನನ್ನು ಭೇಟಿ ಮಾಡಲು ಯಾರೂ ನನ್ನ ನಿವಾಸವಾಗಲಿ, ಕಚೇರಿಗೆ ಬರುವುದು ಬೇಡ. ದೇಶದ ಐಕ್ಯತೆ, ಸಾರ್ವಭೌಮತೆ ರಕ್ಷಣೆಗೆ ನಾವು ಯೋಧರ ಜತೆ ನಿಲ್ಲಬೇಕು ಅಂತ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರ ಬಳಿ ಮನವಿ ಮಾಡಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ