/newsfirstlive-kannada/media/post_attachments/wp-content/uploads/2023/11/death-5.jpg)
ಕೋಲಾರ: ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿ ಮೃತಪಟ್ಟಿರೋ ಘಟನೆ ಮಿಲ್ಲತ್ ನಗರದಲ್ಲಿ ನಡೆದಿದೆ. ಮಾಹೇನೂರ್ ( 22) ಮೃತ ಮಹಿಳೆ.
ವರದಕ್ಷಿಣೆ ಕಿರುಕುಳ ಹಿನ್ನೆಲೆಯಲ್ಲಿ ಗಂಡ ಸಯ್ಯದ್ ಶುಹೇಬ್ ಎಂಬಾತ ಪತ್ನಿಯ ಕತ್ತುಹಿಸುಕಿ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಕಳೆದ ಎರಡು ವರ್ಷಗಳ ಹಿಂದೆ ಇಬ್ಬರು ಮದುವೆಯಾಗಿದ್ದರು. ವರದಕ್ಷಿಣೆಗಾಗಿ ಪತ್ನಿಗೆ ಪತಿ ಸಯ್ಯದ್ ಶುಹೇಬ್ ಆಗಾಗ ಕಿರುಕುಳ ನೀಡುತ್ತಿದ್ದನಂತೆ.
/newsfirstlive-kannada/media/post_attachments/wp-content/uploads/2023/11/death-6.jpg)
ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಗಲ್ ಪೇಟೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us