/newsfirstlive-kannada/media/post_attachments/wp-content/uploads/2024/07/ranganath.jpg)
ರಾಷ್ಟ್ರೀಯ ವೈದ್ಯಕೀಯ ಆಯೋಗದ ಮುಖ್ಯಸ್ಥರಾಗಿ ಕನ್ನಡಿಗ ಡಾ. ಬಿ.ಎನ್. ಗಂಗಾಧರ್ ನೇಮಕಗೊಂಡಿದ್ದಾರೆ. ಕೇಂದ್ರ ಸರ್ಕಾರ ಅವರನ್ನು ನೇಮಕ ಮಾಡಿದ್ದು, ಇದೀಗ ಈ ಸಂಗತಿ ಕನ್ನಡಿಗರಿಗೆ ಸಂತಸ ತಂದಿದೆ.
ಡಾ. ಬಿ.ಎನ್. ಗಂಗಾಧರ್ರವರು ಪದ್ಮಶ್ರೀ ಪುರಸ್ಕೃತರು ಹೌದು. ಇವರು ನಿಮ್ಹಾನ್ಸ್ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಇದೀಗ ರಾಷ್ಟ್ರಮಟ್ಟದ ಉನ್ನತ ವೈದ್ಯಕೀಯ ಆಯೋಗಕ್ಕೆ ಮುಖ್ಯಸ್ಥರಾಗಿ ಕೇಂದ್ರ ಸರ್ಕಾರದಿಂದ ನೇಮಕಗೊಂಡಿದ್ದಾರೆ.
ಪ್ರಸ್ತುತ ಡಾ. ಗಂಗಾಧರ್ ವೈದ್ಯಕೀಯ ಮೌಲ್ಯಮಾಪನ ಹಾಗೂ ರೇಟಿಂಗ್ ಮಂಡಳಿ ಅಧ್ಯಕ್ಷರಾಗಿದ್ದಾರೆ. ರಾಷ್ಟ್ರೀಯ ವೈದ್ಯಕೀಯ ಮಂಡಳಿ ಮುಖ್ಯಸ್ಥರಾಗಿದ್ದ ಡಾ.ಎಸ್.ಸಿ ಶರ್ಮಾ ಅಧಿಕಾರ ಅವಧಿ ಕಳೆದ ಸೆಫ್ಟಂಬರ್ ನಲ್ಲಿ ಮುಗಿದಿತ್ತು. ಇದೀಗ ಕನ್ನಡಿಗರ ಆ ಸ್ಥಾನವನ್ನು ಅಲಂಕರಿಸಿರುವುದು ಹೆಮ್ಮೆಯ ಸಂಹತಿಯಾಗಿದೆ.
ಡಾ.ಸಂಜಯ್ ಬಿಹಾರಿ ಅವರನ್ನು ವೈದ್ಯಕೀಯ ಮೌಲ್ಯಮಾಪನ ಮತ್ತು ರೇಟಿಂಗ್ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಅವರು ತಿರುವನಂತಪುರದ ಶ್ರೀ ಚಿತ್ರ ತಿರುನಾಳ ವೈದ್ಯಕೀಯ ವಿಜ್ಞಾನಗಳು ಮತ್ತು ತಂತ್ರಜ್ಞಾನ ಸಂಸ್ಥೆ ನಿರ್ದೇಶಕರಾಗಿದ್ದಾರೆ.
ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮಂಡಳಿ ಪೂರ್ಣಾವಧಿ ಸದಸ್ಯರನ್ನಾಗಿ ಡಾ.ಅನಿಲ್ ಡಿಕ್ರೂಜ್ ನೇಮಕವಾಗಿದೆ. ಇವರು ಮುಂಬೈನ ಅಪೊಲೊ ಆಸ್ಪತ್ರೆಯ ಕ್ಯಾನ್ಸರ್ ಚಿಕಿತ್ಸಾ ವಿಭಾಗದ ನಿರ್ದೇಶಕರಾಗಿದ್ದಾರೆ.
ಟಾಟಾ ಮೆಮೋರಿಯಲ್ ಸೆಂಟರ್‌ನ ವಿಶ್ರಾಂತ ಪ್ರಾಧ್ಯಾಪಕ ಡಾ.ರಾಜೇಂದ್ರ ಅಚ್ಯುತ ಬಡ್ಡೆಯವರು ಅರೆಕಾಲಿಕ ಸದಸ್ಯರನ್ನಾಗಿ ನೇಮಕಗೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ