ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಡಾ. ಸಿ.ಎನ್ ಮಂಜುನಾಥ್
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆದೇಶ..!
ಸರ್ಕಾರದ ಈ ನಿರ್ಧಾರಕ್ಕೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ
ಬೆಂಗಳೂರು: ಅತೀ ಕಡಿಮೆ ದರದಲ್ಲಿ ಅತ್ಯಂತ ಗುಣಮಟ್ಟದ ಹೃದ್ರೋಗ ಸಂಬಂಧಿ ಕಾಯಿಲೆಗಳಿಗೆ ಚಿಕಿತ್ಸೆ ನೀಡಿ ಪ್ರಸಿದ್ಧಿಯಾದವರು ಡಾ.ಸಿ.ಎನ್ ಮಂಜುನಾಥ್. ಇವರನ್ನೇ ಮುಂದಿನ ಆರು ತಿಂಗಳ ಕಾಲ ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕರಾಗಿ ಮುಂದುವರಿಸಲು ಸರ್ಕಾರ ತೀರ್ಮಾನಿಸಿದೆ.
ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕರಾಗಿ ಡಾ ಸಿಎನ್ ಮಂಜುನಾಥ್ ಮುಂದುವರಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಕಲಬುರಗಿಯಲ್ಲಿ ಜಯದೇವ ಆಸ್ಪತ್ರೆ ಕೆಲಸ ಮುಗಿಸಬೇಕಿದೆ. ಹೀಗಾಗಿ ಮುಂದಿನ 6 ತಿಂಗಳು ಸೇವಾವಧಿ ಮುಂದುವರೆಸುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ಆದೇಶ ಹೊರಡಿಸಿದೆ.
ಜುಲೈ 19ಕ್ಕೆ ಡಾ.ಸಿ.ಎನ್.ಮಂಜುನಾಥ್ ಸೇವಾವಧಿ ಮುಕ್ತಾಯ ಆಗಬೇಕಿತ್ತು. ಈ ಮುನ್ನವೇ ಸಿಎಂ ಸಿದ್ದರಾಮಯ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಈ ನಿರ್ಧಾರಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ