newsfirstkannada.com

ಡಿಕೆ ಬ್ರದರ್ಸ್‌ ಭದ್ರಕೋಟೆಯಲ್ಲಿ ಒಬ್ಬರಲ್ಲ, ಇಬ್ಬರು ಡಾ.ಸಿ.ಎನ್ ಮಂಜುನಾಥ್ ಸ್ಪರ್ಧೆ; ಏನಿದರ ಪ್ಲಾನ್‌?

Share :

Published April 3, 2024 at 8:38pm

    ಬೆಂಗಳೂರು ಗ್ರಾಮಾಂತರದಲ್ಲಿ ರಂಗೇರಿದ ಲೋಕಸಭಾ ರಣಕಣ

    ಅಖಾಡಕ್ಕಿಳಿದ ಡಾ ಸಿ.ಎನ್ ಮಂಜುನಾಥ್ ಹೆಸರಿನ ಮತ್ತೊಬ್ಬ ಅಭ್ಯರ್ಥಿ

    ಬಹುಜನ ಭಾರತ ಪಾರ್ಟಿಯಿಂದ ಅಭ್ಯರ್ಥಿ ಆಗಿ ನಾಮಪತ್ರ ಸಲ್ಲಿಕೆ

ರಾಮನಗರ: ರಾಜ್ಯದಲ್ಲಿ  ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಈ ನಡುವೆ ಎಲೆಕ್ಷನ್‌ಗೆ ಸ್ಪರ್ಧಿಸುತ್ತಿರೋ ಅಭ್ಯರ್ಥಿಗಳು ಮತಪ್ರಚಾರದಲ್ಲಿ ಸಖತ್​ ಬ್ಯುಸಿಯಾಗಿದ್ದಾರೆ. ರಾಜ್ಯದ ಮೊದಲ ಹಂತದ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೇ ದಿನವಾಗಿದ್ದು, ಹೀಗಾಗಿ ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಎಷ್ಟು ಕೋಟಿಗೆ ಒಡತಿ; ಬಿಜೆಪಿ ಅಭ್ಯರ್ಥಿ ಆಸ್ತಿ ವಿವರ ಇಲ್ಲಿದೆ

ಡಾ ಸಿ.ಎನ್ ಮಂಜುನಾಥ್ ಅವರು ಬೆಂಗಳೂರ ಗ್ರಾಮಾಂತರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ. ಅವರು ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವುದಕ್ಕೂ ಮೊದಲೇ ಡಾ ಸಿ.ಎನ್ ಮಂಜುನಾಥ್ ಅವರ ಹೆಸರನ್ನು ಹೋಲುವ ಮತ್ತೊಬ್ಬ ಅಭ್ಯರ್ಥಿ ಡಾ ಸಿ.ಎನ್ ಮಂಜುನಾಥ್ ಸ್ಪರ್ಧೆಗೆ ಇಳಿದಿದ್ದಾರೆ. ಬಹುಜನ ಭಾರತ್ ಪಾರ್ಟಿ ಅಭ್ಯರ್ಥಿಯಾಗಿ ಡಾ ಸಿ.ಎನ್ ಮಂಜುನಾಥ್ ಇಂದು‌ ಚುನಾವಣಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್​ಗೆ ನಾಮಪತ್ರ ಸಲ್ಲಿಸಿದ್ದಾರೆ. ಬಹುಜನ ಭಾರತ್ ಪಾರ್ಟಿ ಅಭ್ಯರ್ಥಿಯಾಗಿರೋ ಡಾ ಸಿ.ಎನ್ ಮಂಜುನಾಥ್ ಅವರು ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನವರು.

ನಾಳೆ ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ಅವರು ನಾಮಪತ್ರ ಸಲ್ಲಿಸುತ್ತಿದ್ದಾರೆ. ಡಾ. ಸಿ.ಎನ್ ಮಂಜುನಾಥ್ ಉಮೇದುವಾರಿಕೆ ಸಲ್ಲಿಕೆ ವೇಳೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಸಚಿವ ಸಿ.ಟಿ. ರವಿ, ಸಿ.ಪಿ. ಯೋಗೇಶ್ವರ್, ಡಾ. ಸಿ.ಎನ್. ಅಶ್ವಥ್ ನಾರಾಯಣ, ಸುರೇಶ್ ಕುಮಾರ್ ಸೇರಿದಂತೆ ಹಲವು ನಾಯಕರು ಭಾಗಿಯಾಗುತ್ತಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಸಂಸದ ಡಿ.ಕೆ ಸುರೇಶ್ ಅವರ ಭದ್ರಕೋಟೆಯಾಗಿದೆ. ಈ ಕ್ಷೇತ್ರದಲ್ಲಿ ಡಿ.ಕೆ ಸುರೇಶ್ ಅವರ ಎದುರಾಳಿಯಾಗಿ ಒಬ್ಬರಲ್ಲ ಇಬ್ಬರು ಡಾ.ಸಿ.ಎನ್ ಮಂಜುನಾಥ್ ಸ್ಪರ್ಧಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಡಿಕೆ ಬ್ರದರ್ಸ್‌ ಭದ್ರಕೋಟೆಯಲ್ಲಿ ಒಬ್ಬರಲ್ಲ, ಇಬ್ಬರು ಡಾ.ಸಿ.ಎನ್ ಮಂಜುನಾಥ್ ಸ್ಪರ್ಧೆ; ಏನಿದರ ಪ್ಲಾನ್‌?

https://newsfirstlive.com/wp-content/uploads/2024/04/cn-manjunath1.jpg

Load More