/newsfirstlive-kannada/media/post_attachments/wp-content/uploads/2024/12/PARAM.jpg)
ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಒಪ್ಪಂದದ ಹೇಳಿಕೆಗೆ ಗೃಹ ಸಚಿವ ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ಯಾವ ಒಪ್ಪಂದ ಆಗಿದ್ದೂ ನಮಗೆ ಗೊತ್ತಿಲ್ಲ. ನಾನು ಕೆಲವರ ಬಳಿ ಒಪ್ಪಂದದ ಬಗ್ಗೆ ಕೇಳಿದ್ದೆ, ಒಪ್ಪಂದ ಆಗಿದೆ ಎಂದು ಯಾರೂ ಹೇಳಿಲ್ಲ ಎಂದಿದ್ದಾರೆ.
ಶಿವಕುಮಾರ್ ಯಾವ ಅರ್ಥದಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ. ಸಿದ್ದರಾಮಯ್ಯ ಯಾವುದೇ ಒಪ್ಪಂದ ಆಗಿಲ್ಲ ಅಂತ ಸ್ಪಷ್ಟವಾಗಿ ಹೇಳಿದ್ದಾರೆ. ಒಪ್ಪಂದ ಆಗಿದೆ ಅಂತಾದ್ರೆ ನಾವೆಲ್ಲ ಯಾಕೆ ಇರಬೇಕು? ಅವರಿಬ್ಬರೇ ರಾಜಕಾರಣ ಮಾಡಿ, ಅವರಿಬ್ಬರೇ ನಡೆಸಿಬಿಡಲಿ. ಬೇರೆ ಅವರು ಇರೋದೇ ಬೇಡವಾ? ಅದೆಲ್ಲ ಆ ರೀತಿ ಆಗೋಕೆ ಸಾಧ್ಯವಿಲ್ಲ.
ಇದನ್ನೂ ಓದಿ:ದೇವೇಂದ್ರಗೆ ಇಂದು ಪಟ್ಟಾಭಿಷೇಕ.. ಮಹಾರಾಷ್ಟ್ರದ ನೂತನ ಸಿಎಂ ಆಗಿ ಅಧಿಕಾರ
ಹೈಕಮಾಂಡ್ ಬಿಟ್ಟು ನಾವು ಹೋಗೋರಲ್ಲ. ಹೈಕಮಾಂಡ್ ತೀರ್ಮಾನ ಒಪ್ಪಿಕೊಳ್ಳುತ್ತೇವೆ. ಒಪ್ಪಂದ ಬಗ್ಗೆ ನಮಗೆ ಗೊತ್ತಿಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ. ಇತ್ತೀಚೆಗೆ ರಾಷ್ಟ್ರೀಯ ಮಾಧ್ಯವೊಂದು ಡಿಕೆ ಶಿವಕುಮಾರ್ ಅವರನ್ನು ಸಂದರ್ಶನ ಮಾಡಿತ್ತು. ಪಕ್ಷಕ್ಕಾಗಿ ಹಣಬಲ, ತೋಳ್ಬಲ ಎರಡರ ಮೂಲಕವೂ ದುಡಿದರೂ ಸಿಎಂ ಮಾಡಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ನನ್ನ ಬಲ ಮತ್ತು ವಿಕ್ನೆಸ್ ಎರಡು ಗೊತ್ತಿದೆ. ನನ್ನ ಶಕ್ತಿಯಿಂದಲೇ ಕೊಟ್ಟಿರುವ ಕೆಲಸ ಮಾಡಿ ಮುಗಿಸಿದ್ದೇನೆ. ನನ್ನ ವೀಕ್ನೆಸ್ ಏನಂದ್ರೆ ನಾನು ಯಾವತ್ತು ಹೈಕಮಾಂಡ್​ಗೆ ಬ್ಲಾಕ್ ಮೇಲ್ ಮಾಡಿಲ್ಲ. ನಾನು ಪಕ್ಷದ ನಿರ್ಧಾರಕ್ಕೆ ಬದ್ಧವಾಗಿರುತ್ತೇನೆ, ಯಾವತ್ತೂ ಹೈಕಮಾಂಡ್ ವಿರುದ್ಧ ಹೋಗುವುದಿಲ್ಲ.
ನನಗೆ ಗಾಂಧಿ ಕುಟುಂಬದ ಮೇಲೆ ಪ್ರೀತಿ ಇದೆ. ಗಾಂಧಿ ಕುಟುಂಬಕ್ಕೆ ನಾನು ಲಾಯಲ್ ಆಗಿದ್ದೇನೆ. ಒಂದು ದಿನ ಅದಕ್ಕೆ ಫಲ ಸಿಗಲಿದೆ. ನಾನು ಅದಕ್ಕಾಗಿ ಕಾಯುತ್ತಿದ್ದೇನೆ. ಸಿಎಂ ಸ್ಥಾನದ ವಿಚಾರದಲ್ಲಿ ನಾವು ಕೆಲ ಒಪ್ಪಂದದ ಮೇಲಿದ್ದೇವೆ, ಅದನ್ನು ಹೇಳಲ್ಲ. ಆ ದಿನ ಬರಲಿ ನೋಡೋಣ ಎಂದಿದ್ದರು. ಡಿಕೆಶಿ ಅವರ ಒಪ್ಪಂದದ ಕುರಿತ ಹೇಳಿಕೆ ಕಾಂಗ್ರೆಸ್​ನಲ್ಲಿ ಸಂಚಲನ ಮೂಡಿಸಿದೆ.
ಇದನ್ನೂ ಓದಿ:ದೇವೇಂದ್ರಗೆ ಇಂದು ಪಟ್ಟಾಭಿಷೇಕ.. ಮಹಾರಾಷ್ಟ್ರದ ನೂತನ ಸಿಎಂ ಆಗಿ ಅಧಿಕಾರ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us