ಅಕ್ಕಿ ವಿಚಾರವಾಗಿ ನಾಳೆ ಕಾಂಗ್ರೆಸ್ ಜಿಲ್ಲೆ, ಜಿಲ್ಲೆಯಲ್ಲೂ ಹೋರಾಟ
ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಸಜ್ಜಾದ ಸರ್ಕಾರ
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಹೇಳಿಕೆ
ಮೈಸೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ನೀಡುವುದಾಗಿ ತಿಳಿಸಿತ್ತು. ಆ ನಂತರ ಕೊಡಲಾಗುವುದಿಲ್ಲ ಎಂದು ಹೇಳಿದೆ. ಈ ವಿಚಾರವಾಗಿ ಕೇಂದ್ರ ಸರ್ಕಾರದ ನಿಲುವನ್ನು ಖಂಡಿಸಿ ನಾಳೆ ರಾಜ್ಯದಾದ್ಯಂತ ಕಾಂಗ್ರೆಸ್ ಪ್ರತಿಭಟನೆಗೆ ಕರೆ ನೀಡಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಡಾ ಹೆಚ್ ಸಿ ಮಹದೇವಪ್ಪ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ನಾನು ನಾಳೆ ದೆಹಲಿಗೆ ಹೋಗುತ್ತಿದ್ದೇನೆ, ಪ್ರತಿಭಟನೆಯಲ್ಲಿ ಭಾಗಿಯಾಗುವುದಿಲ್ಲ.
ಹೀಗಾಗಿ ನಮ್ಮ ಜಿಲ್ಲೆಯ ಅಧ್ಯಕ್ಷರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಹೇಳಿದ್ದಾರೆ.
ನಾಳೆ ಕಾಂಗ್ರೆಸ್ ಸರ್ಕಾರ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆಗಿಳಿದರೆ, ಅತ್ತ ಬಿಜೆಪಿಯು ಕೂಡ ರಾಜ್ಯದ ಜನರಿಗೆ 10 ಕೆಜಿ ಅಕ್ಕಿ ಕೊಡದೇ ಹೋದರೆ ಪ್ರತಿಭಟನೆ ಮಾಡುವುದಾಗಿ ಹೇಳಿದೆ. ಮತ್ತೊಂದೆಡೆ ಈಗಾಗಲೇ ಕಾಂಗ್ರೆಸ್ ಸರ್ಕಾರ ರಿಲೀಸ್ ಮಾಡಿರುವ ಉಚಿತ ಯೋಜನೆಗಳ ಬಗ್ಗೆ ಬಿಜೆಪಿ ವ್ಯಂಗ್ಯ ಮಾಡುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ