ನಂದಿಪರ್ವತ ಆಶ್ರಮದ ಜೈನಮುನಿ ಬದುಕನ್ನೇ ಸಮಾಜಕ್ಕೆ ಅರ್ಪಿಸಿದ್ದರು
ಬರ್ಬರವಾಗಿ ಹತ್ಯೆ ಮಾಡಿದ ಪರಮ ಪಾಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಒತ್ತಾಯ
ಧರ್ಮದ ಸೇವೆಯಲ್ಲಿರುವ ಸಾಧು ಸಂತರಿಗೆ ವಿಶೇಷ ರಕ್ಷಣೆ ಒದಗಿಸಬೇಕು
ನಂದಿಪರ್ವತ ಆಶ್ರಮದ ಜೈನಮುನಿ ಶ್ರೀ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಹಣ ಕೊಟ್ಟು ಹೆಣ ಪಡೆದಂತೆ ಆಯಿತು ಎಂದು ದಲಿತ, ಹಿಂದುಳಿದ ಮಠಾಧೀಶರ ಒಕ್ಕೂಟದ ಕಾರ್ಯದರ್ಶಿ ಡಾ. ಶ್ರೀ ಶಾಂತವೀರ ಮಹಾಸ್ವಾಮೀಜಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದ ಜೈನಮುನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವುದು ಅತ್ಯಂತ ಖಂಡನೀಯವಾದ ಸಂಗತಿಯಾಗಿದೆ. ಹೇಯ ಕೃತ್ಯವನ್ನು ದಲಿತ, ಹಿಂದುಳಿದ ಮಠಾಧೀಶರ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ ಎಂದು ಒಕ್ಕೂಟದ ಪರವಾಗಿ ಡಾ.ಶ್ರೀ ಶಾಂತವೀರ ಮಹಾಸ್ವಾಮೀಜಿ ತಿಳಿಸಿದ್ದಾರೆ.
ಇದನ್ನೂ ಓದಿ: ಕರೆಂಟ್ ಹರಿಸಿ, ತುಂಡು ತುಂಡಾಗಿ ಕತ್ತರಿಸಿದ್ರಂತೆ ಹಂತಕರು.. ಜೈನ ಮುನಿಯ ಕೊಲೆ ಸತ್ಯ ಬಿಚ್ಚಿಟ್ಟ ಭಕ್ತರು
ಜೈನಮುನಿ ಶ್ರೀ ಕಾಮಕುಮಾರ ನಂದಿ ಮಹಾರಾಜರು ಸಮಾಜದ ಅಭಿವೃದ್ಧಿಗಾಗಿ ತಮ್ಮ ಬದುಕನ್ನ ಸಮಾಜಕ್ಕೆ ಸಮರ್ಪಿಸಿದ್ದರು. ಸಮಾಜಕ್ಕಾಗಿಯೇ ಬದುಕಿರುವ ಸಾಧುಸಂತರ ಮೇಲೆ ದೌರ್ಜನ್ಯಗಳು ನಡೆಯುತ್ತಿರುವುದು ಕೃತ್ಯಗಳಾಗಿವೆ. ಅಹಿಂಸಾ ತತ್ವವನ್ನು ಪ್ರಧಾನವಾಗಿಸಿಕೊಂಡು ಧರ್ಮಬೋಧನೆಯಲ್ಲಿ ತೊಡಗಿದ್ದ ಜೈನ ಮುನಿಗಳನ್ನು ಬರ್ಬರವಾಗಿ ಹತ್ಯೆ ಮಾಡಿರುವುದು ಘೋರವಾದ ಅಪರಾಧವಾಗಿದೆ. ಸರ್ಕಾರ ಈ ಹತ್ಯೆ ಪ್ರಕರಣದಲ್ಲಿ ಸೂಕ್ತವಾಗಿ ತನಿಖೆ ನಡೆಸಿ ಅಪರಾಧಿಗಳ ವಿರುದ್ಧ ಕಠಿಣ ಶಿಕ್ಷೆ ವಿಧಿಸಬೇಕು ಎಂದು ದಲಿತ, ಹಿಂದುಳಿದ ಮಠಾಧೀಶರ ಒಕ್ಕೂಟ ಒತ್ತಾಯಿಸಿದೆ. ಇದರ ಜೊತೆಗೆ ಸಮಾಜ ಹಾಗೂ ಧರ್ಮದ ಸೇವೆಯಲ್ಲಿ ತೊಡಗಿಸಿಕೊಂಡಿರುವ ಸಾಧು ಸಂತರಿಗೆ ಸರ್ಕಾರ ವಿಶೇಷ ರಕ್ಷಣೆ ಒದಗಿಸಬೇಕೆಂದು ಆಗ್ರಹಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ