Breaking News: ಲೋಕಸಭೆ ಚುನಾವಣೆ ಗೆದ್ದರೆ ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ -ಡಾ.ಯತೀಂದ್ರ

author-image
Ganesh
Updated On
Breaking News: ಲೋಕಸಭೆ ಚುನಾವಣೆ ಗೆದ್ದರೆ ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ -ಡಾ.ಯತೀಂದ್ರ
Advertisment
  • ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಸ್ಫೋಟಕ‌ ಹೇಳಿಕೆ
  • ಸಿದ್ದರಾಮಯ್ಯ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತೆ
  • ಅಡೆತಡೆ ಇಲ್ಲದೆ 5 ವರ್ಷ ಸಿಎಂ ಆಗಿರುತ್ತಾರೆ ಎಂದ ಯತೀಂದ್ರ

ಹಾಸನ: ಮುಂದಿನ ಐದು ವರ್ಷಗಳ ಕಾಲ.. ಇದೇ ಗ್ಯಾರಂಟಿ ಸ್ಕೀಮ್​ಗಳನ್ನು ಮುಂದುವರಿಸಿ ಅವರು ಮುಖ್ಯಮಂತ್ರಿಯಾಗಿ ಯಾವುದೇ ಅಡೆ-ತಡೆ ಇಲ್ಲದೇ ಮುಂದುವರಿಯಲು ಸಾಧ್ಯವಾಗುತ್ತದೆ. ಅದಕ್ಕೆ ನಿಮ್ಮ ಬೆಂಬಲ ಮತ್ತು ಆಶೀರ್ವಾದ ಇರಲಿ ಎಂದು ಡಾ.ಯತೀಂದ್ರ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ.

ಸಂಗೊಳ್ಳಿ ರಾಯಣ್ಣ ಪ್ರತಿಮೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು.. ಸಿದ್ದರಾಮಯ್ಯರವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತದೆ. ಹೆಚ್ಚು ಸ್ಥಾನ ಗೆದ್ದರೆ ಯಾವುದೇ ಅಡೆತಡೆ ಇಲ್ಲದೆ ಐದು ವರ್ಷ ಸಿಎಂ ಆಗಿರುತ್ತಾರೆ. ಸರ್ಕಾರಕ್ಕೆ ಒಂದು ವರ್ಷ ತುಂಬುವ ಮೊದಲೇ ಸಿಧ್ದರಾಮಯ್ಯ ಅವರು ಐದು ಗ್ಯಾರಂಟಿ ಜಾರಿ ಮಾಡಿದ್ದಾರೆ. ಮತ್ತೊಮ್ಮೆ ನುಡಿದಂತೆ ನಡೆಯುವುದಾಗಿ ಸಾಬೀತು ಮಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆದ್ದರೆ ನೈತಿಕವಾಗಿ ಅವರಿಗೆ ಮತ್ತಷ್ಟು ಬೆಂಬಲ ಸಿಗುತ್ತದೆ ಎಂದಿದ್ದಾರೆ.

ಗ್ಯಾರೆಂಟಿ ಯೋಜನೆಗೆ ವರ್ಷಕ್ಕೆ 56 ಸಾವಿರ ಕೋಟಿ ಖರ್ಚು ಮಾಡಲಾಗುತ್ತಿದೆ. ಇಷ್ಟೊಂದು ಹಣ ಖರ್ಚು ಮಾಡುತ್ತಿರುವಾಗ ಜನರ ಬೆಂಬಲ ಬೇಕು. ಅವರು ಮುಖ್ಯಮಂತ್ರಿಯಾಗಿ ಯಾವುದೇ ಅಡೆತಡೆ ಇಲ್ಲದೆ ಮುಂದುವರೆಯಲು ಸಾಧ್ಯವಾಗುತ್ತದೆ. ಹಾಗಾಗಿ ನಿಮ್ಮ ಬೆಂಬಲ ಆಶೀರ್ವಾದ ಅವರ ಮೇಲೆ ಇರಲಿ ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಈ ನಡುವೆ ಮುಂದಿನ ಪ್ರದಾನಿ ಸಿದ್ದರಾಮಯ್ಯ ಎಂದು ಅಭಿಮಾನಿಗಳು ಘೋಷಣೆ ಕೂಗಿದ್ದಾರೆ. ನೀವು ಸಿದ್ದರಾಮಯ್ಯ ಅವರನ್ನು ಬೆಂಬಲಿಸಿದ್ದರಿಂದ ಅವರು ಎರಡನೇ ಬಾರಿ ಸಿಎಂ ಆದರು ಎಂದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment