ಮಾದಕವಸ್ತು ನಶೆಯಲ್ಲಿ ಆಸ್ಪತ್ರೆ ವೈದ್ಯರು, ಸಿಬ್ಬಂದಿ ಮೇಲೆ ಹಲ್ಲೆ
ರಸ್ತೆಗಳಲ್ಲಿ ಸಿಕ್ಕ ಸಿಕ್ಕವರ ಮೇಲೆ ಚೇಷ್ಟೆ ಮಾಡುತ್ತಿದ್ದ ಆರೋಪಿ
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು, ವ್ಯಕ್ತಿ ವಶಕ್ಕೆ
ಬೆಂಗಳೂರು: ಮಾದಕವಸ್ತುವಿನ ನಶೆಯಲ್ಲಿದ್ದ ವ್ಯಕ್ತಿಯೊಬ್ಬ ವೈದ್ಯರಿಗೆ ಕಚ್ಚಿ, ನರ್ಸ್ಗಳ ಮೇಲೆ ಹಲ್ಲೆ ಮಾಡಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯ ಬೆಟ್ಟದಾಸನಪುರದ ಸಾಯಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಡೆದಿದೆ. ಸದ್ಯ ಇದರಿಂದ ಆಸ್ಪತ್ರೆ ಆಡಳಿತ ಮಂಡಳಿ ಆತಂಕ ವ್ಯಕ್ತಪಡಿಸಿದೆ.
ಇದನ್ನೂ ಓದಿ: KL ರಾಹುಲ್ಗೆ ಮೋಸವಾಗುತ್ತಾ..? ಪಾಂಡ್ಯ ಖರೀದಿಗೆ ಕೋಟಿ ಕೋಟಿ ಹಣ ಸುರಿಯಲು ಮುಂದಾದ RCB
ಡ್ರಗ್ಸ್ ನಶೆಯಲ್ಲಿದ್ದ ವ್ಯಕ್ತಿಯು ರಸ್ತೆಗಳಲ್ಲಿ ಸಿಕ್ಕ ಸಿಕ್ಕವರ ಮೇಲೆ ಚೇಷ್ಟೆ ಮಾಡುತ್ತಿದ್ದನು. ಹೀಗಾಗಿ ಸಾರ್ವಜನಿಕರು ವ್ಯಕ್ತಿಗೆ ಥಳಿಸಿ ಬೆಟ್ಟದಾಸನಪುರದ ಸಾಯಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆದರೆ ಆಸ್ಪತ್ರೆಗೆ ಬಂದ ಮೇಲೆ ಆಸಾಮಿಯು ಏಕಾಏಕಿ ಡಾಕ್ಟರ್ಗಳ ಮೇಲೆ ಹಲ್ಲೆ ಮಾಡಿದ್ದಲ್ಲದೇ ಅವರಿಗೆ ಕಚ್ಚಲು ಹೋಗಿದ್ದಾನೆ. ನರ್ಸ್ಗಳ ಮೇಲೂ ಹಲ್ಲೆ ಮಾಡಿದ್ದಾನೆ.
ಇದರಿಂದ ಆತಂಕಗೊಂಡ ವೈದ್ಯರು ತಕ್ಷಣ ಮಾಹಿತಿಯನ್ನು ಪೊಲೀಸರಿಗೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದು ಮಾದಕವಸ್ತು ತೆಗೆದುಕೊಂಡಿರುವ ಕುರಿತು ವಿಚಾರಣೆ ನಡೆಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ