/newsfirstlive-kannada/media/post_attachments/wp-content/uploads/2024/07/mANGALURU.jpg)
ಮಂಗಳೂರು: ಮಳೆಯಿಂದ ಮಣ್ಣು ಕುಸಿದು ಮಣ್ಣಿನಡಿ ಕಟ್ಟಡ ಕಾರ್ಮಿಕರು ಸಿಲುಕಿರುವ ಘಟನೆ ನಡೆದಿದೆ. ಮಂಗಳೂರಿನ ಬಲ್ಮಠ ರೋಡ್ ಸಮೀಪದ ರೋಹನ್ ಕಾರ್ಪೋರೇಶನ್ ಗೆ ಸೇರಿದ ಕಟ್ಟಡ ನಿರ್ಮಾಣ ವೇಳೆ ಈ ಅವಘಡ ಸಂಭವಿಸಿದೆ.
ಈಗಾಗಲೇ ಕಾರ್ಮಿಕರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, ಮಣ್ಣಿನಡಿ ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಚರಣೆ ಮುಂದುವರೆದಿದೆ. ಇಬ್ಬರು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅದರಲ್ಲಿ ಓರ್ವನನ್ನು ರಕ್ಷಿಸಲಾಗಿದೆ.
/newsfirstlive-kannada/media/post_attachments/wp-content/uploads/2024/07/mANGALURU-1.jpg)
ಸದ್ಯ ಮಣ್ಣಿನಡಿಯಲ್ಲಿ ಮತ್ತೋರ್ವ ಕಾರ್ಮಿಕರು ಕಾಣುತ್ತಿದ್ದು, ಕಾರ್ಮಿಕರ ಜೊತೆಗೆ ರಕ್ಷಣಾ ತಂಡದ ಸಿಬ್ಬಂದಿಗಳು ಸಂಪರ್ಕ ಸಾಧಿಸಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿಗಳು ಸ್ಟ್ರೆಚ್ಚರ್ ಜೊತೆ ಆಗಮಿಸಿದ್ದು, ಮಣ್ಣಿನಡಿಯಲ್ಲಿ ಸಿಲುಕಿರುವ ಕಾರ್ಮಿಕನನ್ನು ರಕ್ಷಿಸುವ ಕಾರ್ಯಚರಣೆ ನಡೆಯುತ್ತಿದೆ.
/newsfirstlive-kannada/media/post_attachments/wp-content/uploads/2024/07/mANGALURU-2.jpg)
ಕಳೆದ ಮೂರು ದಿನದ ಹಿಂದೆ ಸುರಿದ ಮಳೆಯಿಂದ ಕಟ್ಟಡದ ಬದಿಯಲ್ಲಿದ್ದ ಮಣ್ಣಿನ ದಿಬ್ಬ ಸಡಿಲಗೊಂಡಿತ್ತು. ಇದೀಗ ಕಟ್ಟಡ ಕಾಮಗಾರಿ ವೇಳೆ ಒಂದು ಭಾಗದ ಮಣ್ಣು ಏಕಾಏಕಿ ಕುಸಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us