newsfirstkannada.com

BREAKING: ಚುನಾವಣಾ ರಾಜಕೀಯಕ್ಕೆ ಮಾಜಿ ಸಿಎಂ ಡಿ.ವಿ ಸದಾನಂದ ಗೌಡ ನಿವೃತ್ತಿ ಘೋಷಣೆ

Share :

08-11-2023

  ಕರ್ನಾಟಕ ರಾಜ್ಯ ಬಿಜೆಪಿಗೆ ಬಿಗ್​ ಶಾಕ್​ ಕೊಟ್ಟ ಮಾಜಿ ಸಿಎಂ

  ಚುನಾವಣೆ ರಾಜಕೀಯಕ್ಕೆ ಮಾಜಿ ಸಿಎಂ ನಿವೃತ್ತಿ ಘೋಷಣೆ!

  ಈ ಬಗ್ಗೆ ಮಾಜಿ ಸಿಎಂ ಡಿ.ವಿ ಸದಾನಂದ ಗೌಡ ಹೇಳಿದ್ದೇನು..?

ಹಾಸನ: ನಾನು ಚುನಾವಣಾ ರಾಜಕಾರಣದಲ್ಲಿ ಮುಂದುವರಿಯಬಾರದು ಅಂತಾ ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಸಿಎಂ ಡಿ.ವಿ ಸದಾನಂದ ಗೌಡ ಹೇಳಿದ್ದಾರೆ. ಈ ಮೂಲಕ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಈ ಸಂಬಂಧ ಮಾತಾಡಿದ ಡಿ.ವಿ ಸದಾನಂದ ಗೌಡರು, ಬಿಜೆಪಿ ನನಗೆ ಸಾಕಷ್ಟು ನೀಡಿದೆ. ನಾನು ನನ್ನ ಪಕ್ಷದಿಂದ ಲಾಭ ಪಡೆದುಕೊಂಡಿದ್ದೇನೆ. ಈಗ ಹೆಚ್ಚೇನು ಆಸೆ ಇಲ್ಲ. ಹೀಗಾಗಿ ಚುನಾವಣಾ ರಾಜಕೀಯದಲ್ಲಿ ಮುಂದುವರಿಯಬಾರದು ಎಂದು ತೀರ್ಮಾನಿಸಿದ್ದೇನೆ ಎಂದರು.

ಕರ್ನಾಟಕ ಸಿಎಂ ಆದೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕೇಂದ್ರ ಸಚಿವರಾಗಿ ಕೆಲಸ ಮಾಡಿದೆ. 10 ವರ್ಷ ಶಾಸಕ, 20 ವರ್ಷ ಸಂಸದನಾಗಿ ಕಾರ್ಯ ನಿರ್ವಹಿಸಿದ್ದೇನೆ. ಯಡಿಯೂರಪ್ಪ ಬಿಟ್ಟರೆ ನಮ್ಮ ಪಕ್ಷದಲ್ಲಿ ನಾನೇ ನಂಬರ್ ಒನ್ ಫಲಾನುಭವಿ ಎಂದರು.

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

BREAKING: ಚುನಾವಣಾ ರಾಜಕೀಯಕ್ಕೆ ಮಾಜಿ ಸಿಎಂ ಡಿ.ವಿ ಸದಾನಂದ ಗೌಡ ನಿವೃತ್ತಿ ಘೋಷಣೆ

https://newsfirstlive.com/wp-content/uploads/2023/11/DV-Sadanand-Gowda.jpg

Load More