/newsfirstlive-kannada/media/post_attachments/wp-content/uploads/2024/09/CM_SIDDARAMAIAH_MUDA.jpg)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್​ಗೆ ಬಿಗ್​ ಟ್ವಿಸ್ಟ್​ ಸಿಕ್ಕಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಅಕ್ರಮ ಹಂಚಿಕೆ ಹಗರಣ ಕೇಸಲ್ಲಿ ಜಾರಿ ನಿರ್ದೇಶನಾಲಯ ಸುಮಾರು 300 ಕೋಟಿ ರೂ. ಮೌಲ್ಯದ 142 ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡಿದೆ.
ಇಡಿ ಟ್ವೀಟ್​​ ಮಾಡಿದ್ದೇನು?
ಈ ಸಂಬಂಧ ಟ್ವೀಟ್​ ಮಾಡಿರೋ ಇಡಿ, ಸಿಎಂ ಸಿದ್ದರಾಮಯ್ಯ ಮತ್ತಿತ್ತರ ವಿರುದ್ಧದ ಕೇಸಲ್ಲಿ 2002ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ನಿಬಂಧನೆಗಳ ಅಡಿ 300 ಕೋಟಿ ಮೌಲ್ಯದ 142 ಸ್ಥಿರ ಆಸ್ತಿಗಳನ್ನು ತಾತ್ಕಾಲಿಕ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದೆ. ಈ ಆಸ್ತಿಗಳನ್ನು ರಿಯಲ್ ಎಸ್ಟೇಟ್ ಉದ್ಯಮಿ ಮತ್ತು ಏಜೆಂಟ್‌ಗಳಾಗಿ ಕೆಲಸ ಮಾಡುತ್ತಿರುವ ಹಲವರ ಹೆಸರಿನಲ್ಲಿ ರಿಜಿಸ್ಟರ್​ ಮಾಡಲಾಗಿದೆ ಎಂದು ಹೇಳಿದೆ.
ಏನಿದು ಕೇಸ್​?
ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ಮುಡಾ ಸೈಟ್ ಹಗರಣ ಸಂಬಂಧ ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸ್ನೇಹಮಯಿ ಕೃಷ್ಣ ನೀಡಿದ ದೂರಿನ ಆಧಾರದ ಮೇರೆಗೆ ಇಡಿ ಅಧಿಕಾರಿಗಳು ಕೇಸ್​ ಸಂಬಂಧ 300 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ್ದಾರೆ. ಮುಡಾ ಸ್ವಾಧೀನಪಡಿಸಿಕೊಂಡ 3 ಎಕರೆ 16 ಗುಂಟೆ ಭೂಮಿಗೆ ಬದಲಿಗೆ 14 ನಿವೇಶನಗಳ ಪರಿಹಾರವನ್ನು ಪಡೆಯಲು ಸಿಎಂ ಸಿದ್ದರಾಮಯ್ಯ ತಮ್ಮ ರಾಜಕೀಯ ಪ್ರಭಾವ ಬಳಸಿದ್ದಾರೆ ಎನ್ನುವ ಆರೋಪ ಇದೆ.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us