/newsfirstlive-kannada/media/post_attachments/wp-content/uploads/2024/07/B-Nagendra.png)
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಕೇಸ್ ಸಂಬಂಧ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ದಾಳಿ ಮಾಡಿದ್ದಾರೆ. ಪ್ರಕರಣದ ಎಲ್ಲಾ ಆರೋಪಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಬೆಳಗ್ಗೆ 6 ಗಂಟೆಯಿಂದ ದಾಳಿ ಆರಂಭವಾಗಿದ್ದು, ಬೆಂಗಳೂರು, ಬಳ್ಳಾರಿ, ರಾಯಚೂರು ಮತ್ತು ಹಾವೇರಿಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಾಜಿ ಸಚಿವ ನಾಗೇಂದ್ರ, ಬಸನಗೌಡ ದದ್ದಲ್, ಪದ್ಮನಾಭ, ಪರಶುರಾಮ ಮತ್ತು ಬ್ಯಾಂಕ್ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿದ್ದಾರೆ.
ಇದನ್ನೂ ಓದಿ: ಹುಯ್ಯೋ ಹುಯ್ಯೋ ಮಳೆರಾಯ.. ರೈತರಿಗಾಗಿ ಒಡಲು ತುಂಬಿಸುತ್ತಿದ್ದಾಳೆ ಕಾವೇರಿ.. ಇಂದು KRS ಡ್ಯಾಂ ನೀರಿನ ಮಟ್ಟ ಎಷ್ಟಿದೆ?
ಬರೋಬ್ಬರಿ 187 ಕೋಟಿಯ ಬಹುದೊಡ್ಡ ಹಗರಣ ಇದಾಗಿದ್ದು, ಅದರಲ್ಲಿ 94 ಕೋಟಿ ಹೈದ್ರಾಬಾದ್ ಗೆ ಟ್ರಾನ್ಸಫರ್ ಆಗಿದೆ. ನಕಲಿ ಕಂಪನಿಗಳಿಗೆ, ನಕಲಿ ಅಕೌಂಟ್ ಮೂಲಕ ಟ್ರಾನ್ಸಫರ್ ಮಾಡಲಾಗಿದೆ ಎನ್ನಲಾಗಿದೆ. ಲೆಕ್ಕವಿಲ್ಲದೇ ಅಕ್ರಮ ಹಣ ವರ್ಗಾವಣೆ ಹಿನ್ನಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಟ್ವಿಸ್ಟ್.. ಬೆಳ್ಳಂಬೆಳಗ್ಗೆ ಬಸನಗೌಡ ದದ್ದಲ್ ಮನೆ ಮೇಲೆ ED ದಾಳಿ..!
ಬಸನಗೌಡ ದದ್ದಲ್ ಮನೆ ಮೇಲೆ ದಾಳಿ
ರಾಯಚೂರು ನಗರದ ಆರ್ ಆರ್ ಕಾಲೋನಿಯಲ್ಲಿರುವ ಬಸನಗೌಡ ದದ್ದಲ್ ಮನೆ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಐವರು ಅಧಿಕಾರಿಗಳ ತಂಡದಿಂದ ಮನೆ ಮೇಲೆ ದಾಳಿ ನಡೆದಿದೆ. ಈ ವೇಳೆ ಅಧಿಕಾರಿಗಳು ಮನೆ ಸದಸ್ಯರ ಮೊಬೈಲ್ ಸೀಜ್ ಮಾಡಿದ್ದಾರೆ. ಒಬ್ಬರು ಮಹಿಳಾ ಅಧಿಕಾರಿ ಸೇರಿದಂತೆ ಒಟ್ಟು ಮೂವರು ಅಧಿಕಾರಿಗಳಿಂದ ರೇಡ್ ನಡೆದಿದೆ. ಇದರ ಜೊತೆಗೆ ಮಾಜಿ ಸಚಿವ ನಾಗೇಂದ್ರ ರ ಡಾಲಸ್ ಕಾಲೋನಿ ಅಪಾರ್ಟ್ ಮೆಂಟ್ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ