/newsfirstlive-kannada/media/post_attachments/wp-content/uploads/2025/05/DR_G_PARAMESHWARA.jpg)
ಬೆಂಗಳೂರು: ನಟಿ ರನ್ಯಾ ರಾವ್ ವಿದೇಶದಿಂದ ಗೋಲ್ಡ್​ ಸ್ಮಗ್ಲಿಂಗ್ ಕೇಸ್ ಸಂಬಂಧ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ಒಡೆತನದ ಕಾಲೇಜಿನ ಮೇಲೆ ಇಡಿ ದಾಳಿ ನಡೆಸಿದೆ.
ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ಒಡೆತನದ ಸಿದ್ಧಾರ್ಥ​ ಶಿಕ್ಷಣ ಸಂಸ್ಥೆಗಳ ಮೇಲೆ ಇಂದು ಬೆಳಗ್ಗೆ ಇಡಿ ದಾಳಿ ಮಾಡಿದೆ. ತುಮಕೂರಿನ ಹೆಗ್ಗೆರೆ ಬಳಿಯಿರುವ ಸಿದ್ಧಾರ್ಥ ಮೆಡಿಕಲ್ ಕಾಲೇಜು ಹಾಗೂ ಎಸ್​ಎಸ್​ಐಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ವಿದೇಶದಿಂದ ಅಕ್ರಮವಾಗಿ ಬಂಗಾರ ಸಾಗಿಸುತ್ತಿದ್ದ ನಟಿ ರನ್ಯಾ ರಾವ್ ಹಾಗೂ ಮೆಡಿಕಲ್ ಕಾಲೇಜಿನ ಮಧ್ಯೆ ಹಣ ವರ್ಗಾವಣೆ ಹಿನ್ನೆಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಕಾಲೇಜಿನ ಹಣದ ವ್ಯವಹಾರದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದಾರೆ.
ಇದನ್ನೂ ಓದಿ: ಹಾಸನದ ಕನ್ನಡ ಸಾಹಿತಿ ಬಾನು ಮುಷ್ತಾಕ್ ಅವರ ಕೃತಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ
/newsfirstlive-kannada/media/post_attachments/wp-content/uploads/2025/05/DR_G_PARAMESHWARA_1.jpg)
ಇಂದು ಬೆಳಗ್ಗೆ ಇಡಿ ಅಧಿಕಾರಿಗಳು 5 ಇನ್ನೋವ ಕಾರುಗಳಲ್ಲಿ ಆಗಮಿಸಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಿದ್ದಾರೆ. 3 ವರ್ಷಗಳ ಹಿಂದೆ ಐಟಿ ದಾಳಿ ಮಾಡಲಾಗಿತ್ತು. ಇದೀಗ ಪುನಃ ಇಡಿ ದಾಳಿಯನ್ನು ಮಾಡಲಾಗಿದೆ. ಕಾಲೇಜಿನ ಹಣದ ವ್ಯವಹಾರದ ಕುರಿತು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us