/newsfirstlive-kannada/media/post_attachments/wp-content/uploads/2023/06/Vinay-Kulkarni.jpg)
ಬೆಂಗಳೂರು: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮನೆ ಮೇಲೆ ಇಂದು ED (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ದಾಳಿ ಮಾಡಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿರೋ ವಿನಯ್ ಕುಲಕರ್ಣಿ ನಿವಾಸ ಮೇಲೆ ದಾಳಿ ಮಾಡಿದ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಪಾಕ್ಗೆ ಹೋದವರು ಮೇ 1ರೊಳಗೆ ಬರ್ಬೇಕು; ಭಾರತದಲ್ಲಿರೋ ಪಾಕಿಸ್ತಾನಿಯರಿಗೆ ತೊಲಗಲು ಡೆಡ್ಲೈನ್..!
ಕೆಲ ದಿನಗಳ ಹಿಂದೆ ಚಿನ್ನ ಹಾಗೂ ಕೆಲ ವ್ಯವಹಾರದಲ್ಲಿ ಐಶ್ವರ್ಯಾ ಗೌಡ ಹಾಗೂ ಶಿಲ್ಪಾ ಗೌಡ ಎಂಬುವವರು ವಂಚನೆ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ತನಿಖೆ ವೇಳೆ ಕೋಟ್ಯಾಂತರ ರೂಪಾಯಿ ವ್ಯವಹಾರ ನಡೆಸಿರುವುದು ಪತ್ತೆಯಾಗಿತ್ತು.
ಚಿನ್ನ ವಂಚನೆ ಪ್ರಕರಣದಲ್ಲಿ ಕೋಟ್ಯಾಂತರ ರೂಪಾಯಿ ಬೇನಾಮಿ ವ್ಯವಹಾರ ನಡೆಸಿದ್ದಾರೆ ಎಂದು ಪೊಲೀಸರು EDಗೆ (ಜಾರಿ ನಿರ್ದೇಶನಾಲಯ) ಮಾಹಿತಿ ನೀಡಿದ್ದರು. ಈ ಪೊಲೀಸರ ಮಾಹಿತಿ ಆಧರಿಸಿ ಇಸಿಐಆರ್ ದಾಖಲಿಸಿಕೊಂಡಿದ್ದ ಇಡಿ ಇಂದು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಹಲವರ ಮನೆಯ ಮೇಲೆ ಇಡಿ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ