/newsfirstlive-kannada/media/post_attachments/wp-content/uploads/2025/06/dk-suresh.jpg)
ಬೆಂಗಳೂರು: ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಂಚಿಸಿದ ಆರೋಪ ಹೊತ್ತ ಐಶ್ವರ್ಯ ಗೌಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಂಸದ ಡಿ.ಕೆ.ಸುರೇಶ್ ಅವರಿಗೆ ಇಡಿ ಸಮನ್ಸ್ ನೀಡಿದೆ.
ಇದನ್ನೂ ಓದಿ:ನಾಪತ್ತೆ ಆಗಿದ್ದ ಹರಿಯಾಣ ಮಾಡೆಲ್ ಪ್ರಕರಣಕ್ಕೆ ಟ್ವಿಸ್ಟ್.. ಮಾಜಿ ಸ್ನೇಹಿತನ ಮೇಲೆ ಗುಮಾನಿ..
ಕಾಂಗ್ರೆಸ್ ಮಾಜಿ ಸಂಸದ ಡಿ.ಕೆ.ಸುರೇಶ್ ಸಹೋದರಿ ಅಂತ ಹೇಳಿಕೊಂಡು ಐಶ್ವರ್ಯ ಗೌಡ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಂಚಿಸಿರುವ ಆರೋಪ ಕೇಳಿ ಬಂದಿತ್ತು. ಹೀಗಾಗಿ ಐಶ್ವರ್ಯ ಗೌಡ ಹೇಳಿಕೆ ಹಾಗೂ ಸಾಕ್ಷಿಗಳ ಆಧರಿಸಿ ಮಾಜಿ ಸಂಸದ ಡಿ.ಕೆ.ಸುರೇಶ್ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿದೆ.
ಗುರುವಾರ ವಿಚಾರಣೆಗೆ ಹಾಜರಾಗುವಂತೆ ಇಡಿ ತಿಳಿಸಿದೆ. ಐಶ್ವರ್ಯ ಗೌಡ ಜೊತೆಗೆ ಆರ್ಥಿಕ ವ್ಯವಹಾರಗಳ ಅನುಮಾನದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ