ಕೇರಳದ ಪ್ರಾರ್ಥನಾ ಮಂದಿರದಲ್ಲಿ ಸಂಭವಿಸಿರೋ ಸರಣಿ ಸ್ಫೋಟ
ರಾಜ್ಯದಲ್ಲಿ ಇಂತಹ ಘಟನೆ ನಡೆಯಲು ಬಿಡೋದಿಲ್ಲ ಎಂದ ಗೃಹ ಸಚಿವರು
ಎಲ್ಲಾ ಜಿಲ್ಲೆಗಳಲ್ಲೂ ಕಟ್ಟೆಚ್ಚರ ವಹಿಸುವಂತೆ ಪರಮೇಶ್ವರ್ ಖಡಕ್ ಸೂಚನೆ
ಉಡುಪಿ: ಕೇರಳದ ಪ್ರಾರ್ಥನಾ ಮಂದಿರದಲ್ಲಿ ಸಂಭವಿಸಿರೋ ಸರಣಿ ಸ್ಫೋಟ ಇಡೀ ದೇಶಕ್ಕೆ ಆತಂಕದ ಕಾರ್ಮೋಡ ಆವರಿಸುವಂತೆ ಮಾಡಿದೆ. ಸರಣಿ ಸ್ಫೋಟಕ್ಕೆ ಭಯೋತ್ಪಾದನೆ ಸುಳಿವು ಸಿಕ್ಕಿದ್ದು, ಇಡೀ ದೇಶದ್ಯಾಂತ ಹೈ ಅಲರ್ಟ್ ಘೋಷಣೆಯಾಗಿದೆ. ಕೇರಳ ಸರಣಿ ಬ್ಲಾಸ್ಟ್ ಬಳಿಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕಟ್ಟೆಚ್ಚರ ವಹಿಸುವಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಸೂಚನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳ ಅಧಿಕಾರಿಗಳಿಗೆ ಸೂಕ್ಷ್ಮವಾದ ಸೂಚನೆಗಳನ್ನು ನೀಡಲಾಗಿದೆ. ಈ ಸಂದರ್ಭದಲ್ಲಿ ಕೆಲ ಸಂಘಟನೆಗಳು ಸಕ್ರಿಯ ಆಗಬಹುದು ಅಥವಾ ಆಗದೇ ಇರಬಹುದು. ಯಾವುದಕ್ಕೂ ಎಚ್ಚರಿಕೆಯಿಂದ ಇರಲು ಎಲ್ಲಾ ಎಸ್‌ಪಿಗಳಿಗೆ ಸೂಚನೆ ನೀಡಲಾಗಿದೆ. ಕರಾವಳಿ ಭಾಗ ಮತ್ತು ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಪ್ರಾರ್ಥನೆ ಮಧ್ಯೆ ಅಟ್ಟಹಾಸ.. ಕೇರಳಕ್ಕೆ NIA, NSG ಅಧಿಕಾರಿಗಳ ದೌಡು; ಶಂಕಿತ ವ್ಯಕ್ತಿಯ ಬಂಧನ
ಇನ್ನು, ರಾಜ್ಯದಲ್ಲಿ ಇಂತಹ ಘಟನೆ ನಡೆಯಲು ಬಿಡೋದಿಲ್ಲ. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತೇವೆ. ಗುಪ್ತಚರ ಇಲಾಖೆಗೆ ತೀವ್ರ ನಿಗಾವಹಿಸುವಂತೆ ಸೂಚಿಸಲಾಗಿದೆ. ಯಾವುದೇ ವ್ಯಕ್ತಿ ಅಥವಾ ಸಂಘಟನೆಯ ಮೇಲೆ ಅನುಮಾನ ಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ಅವರು ತಿಳಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ