Advertisment

ಮುನಿರತ್ನ ತಲೆಗೆ ಮೊಟ್ಟೆ ಎಸೆತ.. R.R ನಗರದಲ್ಲಿ ಮತ್ತೊಂದು ರಣರಂಗ; ಅಸಲಿಗೆ ಆಗಿದ್ದೇನು?

author-image
admin
Updated On
ಮುನಿರತ್ನ ತಲೆಗೆ ಮೊಟ್ಟೆ ಎಸೆತ.. R.R ನಗರದಲ್ಲಿ ಮತ್ತೊಂದು ರಣರಂಗ; ಅಸಲಿಗೆ ಆಗಿದ್ದೇನು?
Advertisment
  • ಮುನಿರತ್ನ ಅವರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ
  • ಮೊಟ್ಟೆ ಎಸೆಯುತ್ತಿದ್ದಂತೆ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತ ನಡುವೆ ಗಲಾಟೆ
  • ಡಿ.ಕೆ ಶಿವಕುಮಾರ್, ಡಿ.ಕೆ ಸುರೇಶ್, ಕುಸುಮಾ ಮೇಲೆ ಮುನಿರತ್ನ ಆಕ್ರೋಶ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಮತ್ತೊಂದು ರಣರಂಗ ಸೃಷ್ಟಿಯಾಗಿದೆ. ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ಮೊಟ್ಟೆ ಎಸೆಯಲಾಗಿದೆ. ಮುನಿರತ್ನ ಅವರ ತಲೆಗೆ ಮೊಟ್ಟೆ ಹೊಡೆದ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಮೊಟ್ಟೆ ಎಸೆದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisment

publive-image

ಆರ್‌.ಆರ್ ನಗರ ವ್ಯಾಪ್ತಿಯ ಲಗ್ಗೆರೆ ಸಮೀಪದ ಲಕ್ಷ್ಮಿದೇವಿನಗರದಲ್ಲಿ ಈ ಘಟನೆ ನಡೆದಿದೆ. ಸುಶಾಸನ ದಿನಾಚರಣೆಗೆಂದು ಶಾಸಕ ಮುನಿರತ್ನ ಅವರು ಆಗಮಿಸಿದ್ದರು. ಈ ವೇಳೆ ಮುನಿರತ್ನ ಅವರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಮುನಿರತ್ನ ಅವರು ಕಾರ್ಯಕ್ರಮಕ್ಕೆ ಬಂದ ಕೂಡಲೇ ಅವರ ಕಾರಿನತ್ತ ಮೊಟ್ಟೆ ಎಸೆದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ‌ ವ್ಯಕ್ತಪಡಿಸಿದ್ದಾರೆ.

publive-image

ಮುನಿರತ್ನ ಅವರು ಆಗಮಿಸುತ್ತಿದ್ದಂತೆ ತಲೆ ಮೇಲೆ ಮೊಟ್ಟೆ ಎಸೆದು, ಕಾರಿನ ಮೇಲೂ ಮೊಟ್ಟೆ ಹೊಡೆದು ಆಕ್ರೋಶ ವ್ಯಕ್ತಪಡಿಸಲಾಗಿದೆ. ಈ ವೇಳೆ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ತೀವ್ರ ಜಟಾಪಟಿ ನಡೆದಿದೆ. ಮುನಿರತ್ನ ತಲೆ ಮೇಲೆ ಮೊಟ್ಟೆ ಎಸೆದ ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.

publive-image

ಇದನ್ನೂ ಓದಿ: ಮಾಜಿ ಸಚಿವ ಮುನಿರತ್ನ ತಲೆಗೆ ಮೊಟ್ಟೆ ಹೊಡೆತ.. ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ! 

Advertisment

ಮೊಟ್ಟೆ ಎಸೆಯುತ್ತಿದ್ದಂತೆ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತ ನಡುವೆ ಗಲಾಟೆ ನಡೆದಿದ್ದು, ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಇದಾದ ಬಳಿಕ ಶಾಸಕ ಮುನಿರತ್ನ ಅವರು ಕಂಠೀರವ ಸ್ಟುಡಿಯೋ ಬಳಿ ಪ್ರತಿಭಟನೆ ಕುಳಿತಿದ್ದರು. ಹಲ್ಲೆ ವಿರೋಧಿಸಿ ಪ್ರತಿಭಟನೆಗೆ ಕುಳಿತ ಶಾಸಕ ಮುನಿರತ್ನ ಅವರು ಡಿಸಿಎಂ ಡಿ.ಕೆ ಶಿವಕುಮಾರ್, ಅವರ ಸಹೋದರ ಡಿ.ಕೆ ಸುರೇಶ್ ಹಾಗೂ ಕಾಂಗ್ರೆಸ್ ಆರ್‌.ಆರ್‌ ನಗರ ಪರಾಜಿತ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಅವರ ಮೇಲೆ ಆರೋಪ ಮಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment