/newsfirstlive-kannada/media/post_attachments/wp-content/uploads/2024/12/SHINDHE.jpg)
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶ ನವೆಂಬರ್ 23 ರಂದು ಪ್ರಕಟಗೊಂಡಿದೆ. ಬಹುಮತ ಪಡೆದುಕೊಂಡಿರುವ ಮಹಾಯುತಿ (Mahayuti) ಸರ್ಕಾರ ರಚನೆ ಮಾಡಲು ಸರ್ಕಸ್ ನಡೆಸ್ತಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ತೀವ್ರ ಪೈಪೋಟಿ ಹಿನ್ನೆಲೆಯಲ್ಲಿ ಮಿತ್ರಪಕ್ಷಗಳಲ್ಲಿ ಹೊಂದಾಣಿಕೆ ಸರಿ ಆಗ್ತಿಲ್ಲ. ಈ ನಡುವೆ ಹಂಗಾಮಿ ಮುಖ್ಯಂತ್ರಿ ಏಕನಾಥ ಶಿಂಧೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ವರದಿಗಳ ಪ್ರಕಾರ, ಶಿಂಧೆ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದೆ. ಥಾಣೆಯ ಜುಪಿಟರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಗೆ ಹೋಗುವ ಮಾಧ್ಯಮಗಳು ಶಿಂಧೆಗೆ ಆರೋಗ್ಯದ ಬಗ್ಗೆ ಪ್ರಶ್ನೆ ಮಾಡಲಾಯಿತು. ಅದಕ್ಕೆ ಉತ್ತರಿಸಿದ ಅವರು, ‘ಇದು ಅದ್ಭುತ’ ಎಂದಿದ್ದಾರೆ. ವೈದ್ಯರು ಸಂಪೂರ್ಣ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಸೂಚಿಸಿದ್ದಾರೆ. WBC (ಬಿಳಿ ರಕ್ತ ಕಣಗಳು) ಕಡಿಮೆಯಾಗಿದೆ, ಡೆಂಗ್ಯೂ ಮತ್ತು ಮಲೇರಿಯಾ ಪರೀಕ್ಷೆ ನೆಗೆಟಿವ್ ಬಂದಿದೆ ಎಂಬ ಮಾಹಿತಿ ಸಿಕ್ಕಿದೆ.
ಇದನ್ನೂ ಓದಿ:ಬಸನಗೌಡ ಪಾಟೀಲ್ ಯತ್ನಾಳ್​ಗೆ ಬಿಗ್ ಶಾಕ್ ಕೊಟ್ಟ ಬಿಜೆಪಿ ಹೈಕಮಾಂಡ್..! ಏನಾಯ್ತು..?
ಚುನಾವಣೆ ಫಲಿತಾಂಶದ ಬಳಿಕ ಶಿಂಧೆ ಆರೋಗ್ಯ ಹದಗೆಟ್ಟಿದೆ. ಪರಿಣಾಮ ಅವರು ತಮ್ಮ ಗ್ರಾಮಕ್ಕೆ ಹೋಗಿದ್ದರು. ಮುಖ್ಯಮಂತ್ರಿ ಸ್ಥಾನದ ವಿಚಾರಕ್ಕೆ ನಡೆಯುತ್ತಿರುವ ಕಿತ್ತಾಟಕ್ಕೆ ಶಿಂಧೆ ಕೋಪಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಬಿಜೆಪಿ, ಶಿಂಧೆಯ ಶಿವಸೇನೆ ಹಾಗೂ ಅಜಿತ್ ಪವಾರ್​ ಅವರ ಎನ್​ಸಿಪಿ ಒಕ್ಕೂಟವು ಮಹಾರಾಷ್ಟ್ರದಲ್ಲಿ ಬಹುಮತ ಸಾಧಿಸಿವೆ. ಆದರೆ ಮುಖ್ಯಮಂತ್ರಿ ವಿಚಾರದಲ್ಲಿ ಶಿಂಧೆ ಹಾಗೂ ಫಡ್ನವಿಸ್ ಜಿದ್ದಿಗೆ ಬಿದ್ದಿದ್ದಾರೆ. ಹೀಗಾಗಿ ಪ್ರಮಾಣವಚನ ಕಾರ್ಯಕ್ರಮ ವಿಳಂಬ ಆಗ್ತಿದೆ. ಮುಖ್ಯಮಂತ್ರಿ ಯಾರು ಆಗಲಿದ್ದಾರೆ ಅನ್ನೋದು ಇನ್ನೂ ಅಧಿಕೃತವಾಗಿ ಘೋಷಣೆ ಆಗಿಲ್ಲ.
ಇದನ್ನೂ ಓದಿ:ಗಾಂಧಿ ಕುಟುಂಬಕ್ಕೆ ಲಾಯಲ್ ಆಗಿದ್ದೇನೆ, ಒಂದು ದಿನ ಫಲ ಸಿಗಲಿದೆ -CM ಆಗುವ ಆಸೆ ವ್ಯಕ್ತಪಡಿಸಿದ ಡಿಕೆ ಶಿವಕುಮಾರ್
ಸದ್ಯದ ಮಾಹಿತಿ ಪ್ರಕಾರ, ಡಿಸೆಂಬರ್ 5 ರಂದು ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ, ಇಬ್ಬರು ಡಿಸಿಎಂ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ. ಎನ್‌ಸಿಪಿಯ 11 ನಾಯಕರು ಸಚಿವರಾಗಬಹುದು ಎಂದು ಹೇಳಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us