/newsfirstlive-kannada/media/post_attachments/wp-content/uploads/2025/06/BNG_Old_couple.jpg)
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು ವೃದ್ಧಾಶ್ರಮ ಸೇರಿಸಿದ್ದಕ್ಕೆ ನೊಂದು ವೃದ್ಧ ದಂಪತಿ ಜೀವ ಕಳೆದುಕೊಂಡಿದ್ದಾರೆ. ಜೆಪಿ ನಗರದ 8ನೇ ಹಂತದ ವೃದ್ಧಾಶ್ರಮದಲ್ಲಿ ಈ ಘಟನೆ ನಡೆದಿದೆ.
ಕೃಷ್ಣ ಮೂರ್ತಿ (81) ಇವರ ಪತ್ನಿ ರಾಧ (74) ನೇಣು ಬಿಗಿದುಕೊಂಡು ಸಾವಿಗೆ ಶರಣಾದ ದಂಪತಿ. ತಂದೆ, ತಾಯಿಯನ್ನು ಕಳೆದ 1 ತಿಂಗಳ ಹಿಂದೆಯಷ್ಟೇ ಮಗ ವೃದ್ಧಾಶ್ರಮಕ್ಕೆ ಸೇರಿಸಿದ್ದನು. ಮನೆಯಲ್ಲಿ ಸೊಸೆ ಮಾಡಿದ ಅಡುಗೆ ಚೆನ್ನಾಗಿರಲ್ಲ ಅನ್ನೊ ವಿಚಾರಕ್ಕೆ ಗಲಾಟೆ ನಡೆಯುತ್ತಿತ್ತು. ಹೀಗಾಗಿ ತಂದೆ, ತಾಯಿ ಇಬ್ಬರನ್ನು ಮಗ ವೃದ್ಧಾಶ್ರಮಕ್ಕೆ ಸೇರಿಸಿದ್ದನು.
ಮೊನ್ನೆ ರಾತ್ರಿಯೇ ಇಬ್ಬರೂ ನೇಣಿಗೆ ಶರಣಾಗಿದ್ದಾರೆ. ಆದರೆ ನಿನ್ನೆ ಬೆಳಗಿನ ಜಾವ ಬಾಗಿಲು ತೆಗೆದಿರಲಿಲ್ಲ. ಇದರಿಂದ ಅನುಮಾನಗೊಂಡ ಆಶ್ರಮದವರು ಬಾಗಿಲು ತೆಗೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ:ಕೇರಳದ PFI ಹಿಟ್ ಲಿಸ್ಟ್ ಭಯಾನಕ.. ಜಡ್ಜ್ಗಳು, ಕಾರ್ಯಕರ್ತರು ಸೇರಿ 977 ವ್ಯಕ್ತಿಗಳ ಟಾರ್ಗೆಟ್!
ಈ ವೃದ್ಧ ದಂಪತಿ ಸೊಸೆ ಜೊತೆ ಹೊಂದಾಣಿಕೆ ಇರದ ಕಾರಣ ಬೇರೆ ಮನೆ ಮಾಡಿಕೊಡಲು ಮಗನಿಗೆ ಕೇಳಿದ್ದರು. ಈ ಹಿನ್ನೆಲೆಯಲ್ಲಿ 2021ರಲ್ಲಿ ಬ್ಯಾಟರಾಯನಪುರ ವೃದ್ಧಾಶ್ರಮಕ್ಕೆ ತಂದೆ ತಾಯಿಯನ್ನು ಸೇರಿಸಿದ್ದನು. ಬಳಿಕ 2023ರಲ್ಲಿ ವಾಪಸ್ ಮನೆಗೆ ತಂದೆ, ತಾಯಿಯನ್ನು ಕರೆದುಕೊಂಡು ಬರಲಾಗಿತ್ತು. ಆದರೆ ಮತ್ತೆ ಮನೆಯಲ್ಲಿ ಹೊಂದಾಣಿಕೆ ಆಗಲಿಲ್ಲ. ಹೀಗಾಗಿ ಕಳೆದ ತಿಂಗಳು ಮತ್ತೆ ಬನಶಂಕರಿ ವೃದ್ಧಾಶ್ರಮಕ್ಕೆ ಸೇರಿಸಲಾಗಿತ್ತು.
ಆದರೆ ಮೊನ್ನೆ ರಾತ್ರಿ ಇಬ್ಬರೂ ಊಟ ಮಾಡಿ ಮಲಗಲು ಹೋಗಿದ್ದರು. ಬೆಳಗ್ಗೆ ವೃದ್ಧ ದಂಪತಿ ನೇಣು ಬಿಗಿದು ಸಾವಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಘಟನೆ ಬಗ್ಗೆ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ದಾಖಲಾಗಿದೆ. ಸದ್ಯ ಟಿವಿ ನೋಡುವ ವಿಚಾರಕ್ಕೆ ಇಬ್ಬರಿಗೂ ಮನಸ್ತಾಪ ಆಗಿತ್ತು ಎಂದು ವೃದ್ಧಾಶ್ರಮದವರ ಮಾಹಿತಿ ನೀಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ