ವೋಟಿಂಗ್ ದಿನವೇ BJP ಸಂಸದ ತೇಜಸ್ವಿ ಸೂರ್ಯಗೆ ಬಿಸಿ ಮುಟ್ಟಿಸಿದ ಚುನಾವಣಾ ಆಯೋಗ; ಆಗಿದ್ದೇನು?

author-image
admin
Updated On
ವೋಟಿಂಗ್ ದಿನವೇ BJP ಸಂಸದ ತೇಜಸ್ವಿ ಸೂರ್ಯಗೆ ಬಿಸಿ ಮುಟ್ಟಿಸಿದ ಚುನಾವಣಾ ಆಯೋಗ; ಆಗಿದ್ದೇನು?
Advertisment
  • ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಡವಟ್ಟು
  • ಮತದಾನದ ದಿನವೇ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯ ಕೇಸ್ ದಾಖಲು
  • ಬಿಜೆಪಿ ಚುನಾವಣಾ ನೀತಿ ನಿಯಮಗಳನ್ನು ಗಾಳಿಗೆ ತೂರಿದೆ ಎಂದು ಕಾಂಗ್ರೆಸ್‌ ಕಿಡಿ

ಬೆಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆಯ ಮತದಾನ ಮುಕ್ತಾಯವಾಗಿದೆ. ಈಗ ಕಾಂಗ್ರೆಸ್, ಬಿಜೆಪಿ, ಜೆಡಿಎಸ್‌ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಮತಯಂತ್ರಗಳಲ್ಲಿ ಭದ್ರವಾಗಿದೆ. ಮತದಾನದ ದಿನವೂ ಬಿರುಸಿನ ರಾಜಕೀಯ ಬೆಳವಣಿಗೆಗಳು ನಡೆದಿದ್ದು, ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ವಿರುದ್ಧ ಕೇಸ್ ದಾಖಲಾಗಿದೆ.

ವೋಟಿಂಗ್ ದಿನವೇ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ಮೇಲೆ ಗಂಭೀರ ಆರೋಪ ಕೇಳಿ ಬಂದಿದೆ. ಧರ್ಮದ ಹೆಸರಲ್ಲಿ ಮತಯಾಚನೆ ಮಾಡಿದ ಆರೋಪದಲ್ಲಿ ಚುನಾವಣಾ ಆಯೋಗ ಸಂಸದ ತೇಜಸ್ವಿ ಸೂರ್ಯ ಅವರ ಮೇಲೆ ಕೇಸ್ ದಾಖಲು ಮಾಡಿದೆ.


">April 26, 2024

ಚುನಾವಣೆಯಲ್ಲಿ ಯಾವುದೇ ಒಂದು ಧರ್ಮದ ಹೆಸರಲ್ಲಿ ಮತಯಾಚನೆ ಮಾಡುವುದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಆಗುತ್ತದೆ. ಅದರಲ್ಲಿ ಸೋಷಿಯಲ್ ಮೀಡಿಯಾ Xನಲ್ಲಿ ಧರ್ಮದ ಆಧಾರದಲ್ಲಿ ಮತ ನೀಡುವಂತೆ ವಿಡಿಯೋ ಮಾಡಿರುವುದು ಅಪರಾಧವಾಗಿದೆ. ಧರ್ಮದ ಆಧಾರದಲ್ಲಿ ಮತ ಕೇಳಿದ್ದಕ್ಕೆ ತೇಜಸ್ವಿ ಸೂರ್ಯ ಅವರ ಮೇಲೆ ಚುನಾವಣಾ ಆಯೋಗ ಪ್ರಕರಣ ದಾಖಲಿಸಿ ಸೋಷಿಯಲ್ ಮೀಡಿಯಾದಲ್ಲಿ ಪ್ರಕಟ ಮಾಡಿದೆ.

ಇದನ್ನೂ ಓದಿ: ಮಂಡ್ಯದಲ್ಲಿ ಈ ಬಾರಿಯೂ ಭರ್ಜರಿ ಮತದಾನ.. ದಕ್ಷಿಣ ಕನ್ನಡದಲ್ಲಿ ಹೊಸ ದಾಖಲೆ; ಎಲ್ಲಿ ಹೆಚ್ಚು? ಎಲ್ಲಿ ಕಡಿಮೆ? 

ಸಂಸದ ತೇಜಸ್ವಿ ಸೂರ್ಯ ಅವರ ಮೇಲೆ ಪ್ರಕರಣ ದಾಖಲಿಸಿರುವುದಕ್ಕೆ ಬಿಜೆಪಿ ವಿರುದ್ಧ ಕಾಂಗ್ರೆಸ್ ಪಕ್ಷ ಕಿಡಿಕಾರಿದೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಚುನಾವಣಾ ನೀತಿ ನಿಯಮಗಳನ್ನು ಗಾಳಿಗೆ ತೂರುವುದೆಂದರೆ ಬಿಜೆಪಿಯವರಿಗೆ ಎಲ್ಲಿಲ್ಲದ ಉತ್ಸಾಹ. ನೀತಿ ಸಂಹಿತೆಯನ್ನು ಉಲ್ಲಂಘಿಸಿದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಸೋಲಿನ ಭೀತಿಯಲ್ಲಿರುವ ತೇಜಸ್ವಿ ಸೂರ್ಯ ಅಕ್ರಮ ನಡೆಸಿಯಾದರೂ ಸರಿ ಚುನಾವಣೆ ಗೆಲ್ಲಬೇಕು ಎನ್ನುವ ಬಂಡತನಕ್ಕೆ ಬಿದ್ದಿರುವಂತಿದೆ. ಆದರೆ ಕನ್ನಡಿಗರು ನಾಡದ್ರೋಹಿ, ಜನವಿರೋಧಿ ಬಿಜೆಪಿಗರನ್ನು ಮನೆಗೆ ಕಳಿಸಿ ಜನಹಿತ ಕಾಪಾಡುವ ಕಾಂಗ್ರೆಸ್ ಅಭ್ಯರ್ಥಿಗಳ ಕೈ ಹಿಡಿಯುವುದು ನಿಶ್ಚಿತ ಎಂದು ಪೋಸ್ಟ್ ಮಾಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment