/newsfirstlive-kannada/media/post_attachments/wp-content/uploads/2024/08/ELECTIONS-1.jpg)
ನವದೆಹಲಿ: ಜಮ್ಮು-ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭೆ ಎಲೆಕ್ಷನ್ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯೋಗ ಚುನಾವಣೆ ವೇಳಾಪಟ್ಟಿ ಘೋಷಣೆ ಮಾಡಲಿದೆ.
ಕೇಂದ್ರ ಚುನಾವಣಾ ಆಯೋಗ ಮಧ್ಯಾಹ್ನ 3 ಗಂಟೆಗೆ ಮಾಧ್ಯಮಗೋಷ್ಠಿ ನಡೆಸಲಿದೆ. ಇದೇ ವೇಳೆ ಹರಿಯಾಣ ಹಾಗೂ ಜಮ್ಮುಕಾಶ್ಮೀರದ ವಿಧಾನಸಭೆ ಚುನಾವಣಾ ವೇಳಾಪಟ್ಟಿ ಪ್ರಕಟಿಸಲಿದೆ. ಈ ಎರಡು ರಾಜ್ಯಗಳ ಜೊತೆಗೆ ದೇಶದ ಹಲವು ಭಾಗಗಳಲ್ಲಿ ಮರು ಚುನಾವಣೆಯು ಘೋಷಣೆ ಮಾಡುವ ಸಾಧ್ಯತೆ ಇದೆ.
ಕರ್ನಾಟಕದಿಂದ ಚನ್ನಪ್ಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ. ಹೆಚ್.ಡಿ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಹಾಗೂ ಇ ತುಕಾರಾಂ ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರಿಂದ ತೆರವಾಗಿರುವ ಕ್ಷೇತ್ರಕ್ಕೆ ಬೈಎಲೆಕ್ಷನ್ ನಡೆಯಲಿದೆ.
ಇದನ್ನೂ ಓದಿ:ಬಿಗ್ಬಾಸ್ ಶೋಗೆ ಎಂಟ್ರಿ ಕೊಡಲಿದ್ದಾರೆ ಈ ಇಬ್ಬರು ನಟಿಯರು; ಯಾರಿವರು ಗೊತ್ತಾ?
ಈ ವರ್ಷದ ಅಂತ್ಯಕ್ಕೆ ಮಹಾರಾಷ್ಟ್ರ ಮತ್ತು ಜಾರ್ಖಂಡ್ ಚುನಾವಣೆ ಕೂಡ ಮುಗಿಯಬೇಕಿದೆ. ಹೀಗಾಗಿ ಇಂದೇ ಘೋಷಣೆ ಮಾಡೋ ಸಾಧ್ಯತೆ ಇದೆ. ಜೊತೆಗೆ ಜಮ್ಮುಕಾಶ್ಮೀರದಲ್ಲಿ ಒಟ್ಟು 5 ರಿಂದ 7 ಹಂತದಲ್ಲಿ ಚುನಾವಣೆ ನಡೆಯಬಹುದು. ಆರ್ಟಿಕಲ್ 370 ರದ್ದು ಆದ ಬಳಿಕ ಇದು ಮೊದಲ ಚುನಾವಣೆಯಾಗಿದೆ. 2019 ಅಗಸ್ಟ್ 5 ರಂದು ಆರ್ಟಿಕಲ್ 370 ಅನ್ನು ಕೇಂದ್ರ ಸರ್ಕಾರ ರದ್ದು ಮಾಡಿತ್ತು. ಇದಾದ ಬಳಿಕ ಲೋಕಸಭೆಯಲ್ಲಿ ಇದೇ ಮೊದಲ ಬಾರಿಗೆ ಜಮ್ಮು ಕಾಶ್ಮೀರದಲ್ಲಿ ಅತೀ ಹೆಚ್ಚಿನ ಮತದಾನ ನಡೆದಿತ್ತು. ಅಲ್ಲಿ ಶೇಕಡಾ 58 ರಷ್ಟು ಮತದಾನ ನಡೆದು ಹೊಸ ದಾಖಲೆ ಸೃಷ್ಟಿಯಾಗಿತ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ