newsfirstkannada.com

ಹಾಸನ ಅಶ್ಲೀಲ ವಿಡಿಯೋ ಕೇಸ್‌ನಿಂದ ಮುಜುಗರ.. ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ?

Share :

Published April 29, 2024 at 11:48am

    ಜೆಡಿಎಸ್ ಶಾಸಕರಿಂದಲೇ ಸಂಸದ ಪ್ರಜ್ವಲ್ ರೇವಣ್ಣ ವಜಾಗೆ ಪಟ್ಟು

    ‘ವೈರಲ್ ಆದ ಅಶ್ಲೀಲ ದೃಶ್ಯಗಳಲ್ಲಿ ಪ್ರಜ್ವಲ್​ ರೇವಣ್ಣ ಕಾಣಿಸಿಕೊಂಡಿದ್ದಾರೆ’

    ಶೀಘ್ರದಲ್ಲೇ ಹಿರಿಯ ನಾಯಕರ ಜೊತೆ ದೇವೇಗೌಡರಿಂದ ಮಹತ್ವದ ಸಭೆ

ಬೆಂಗಳೂರು: ಹಾಸನದಲ್ಲಿ ಹರಿದಾಡಿದ ಅಶ್ಲೀಲ ವಿಡಿಯೋ ಪ್ರಕರಣ ಜೆಡಿಎಸ್ ಪಕ್ಷದಲ್ಲಿ ಮುಜುಗರ ಹಾಗೂ ತೀವ್ರ ಸಂಚಲನ ಸೃಷ್ಟಿಸಿದೆ. ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಗಂಭೀರ ಆರೋಪ ಹಾಗೂ ಎಫ್‌ಐಆರ್ ದಾಖಲಾದ ಮೇಲೆ ಜೆಡಿಎಸ್ ನಾಯಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಜೆಡಿಎಸ್ ಶಾಸಕರಿಂದಲೇ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದಲೇ ವಜಾಗೊಳಿಸುವಂತೆ ಆಗ್ರಹಿಸಲಾಗಿದೆ.

ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅವರನ್ನು ವಜಾಗೊಳಿಸುವಂತೆ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅವರು ಒತ್ತಾಯಿಸಿದ್ದಾರೆ. ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಅವರಿಗೆ ಶಾಸಕ ಶರಣಗೌಡ ಕಂದಕೂರ ಅವರು ಪತ್ರ ಬರೆದಿದ್ದಾರೆ. ಅಶ್ಲೀಲ ವಿಡಿಯೋದಿಂದ ಜೆಡಿಎಸ್‌ ಪಕ್ಷಕ್ಕೆ ಮುಜುಗರ ಉಂಟಾಗಿದೆ. ವೈರಲ್ ಆದ ಅಶ್ಲೀಲ ದೃಶ್ಯಗಳಲ್ಲಿ ಪ್ರಜ್ವಲ್​ ರೇವಣ್ಣ ಕಾಣಿಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಮೇಲ್ನೋಟಕ್ಕೆ ತಪ್ಪಿತಸ್ಥರು ಎಂಬ ಭಾವನೆ ಮೂಡಿದೆ. ಕೂಡಲೇ ಪ್ರಜ್ವಲ್ ರೇವಣ್ಣ ಅವ​ರನ್ನ ಪಕ್ಷದಿಂದ ವಜಾ ಮಾಡಲು ಮನವಿ ಮಾಡಿದ್ದಾರೆ.

ಪ್ರಜ್ವಲ್​ ರೇವಣ್ಣ ವಜಾಗೆ ಶಾಸಕರ ಪತ್ರ!
ನಾನು ತುಂಬಾ ಕಿರಿಯ, ಅತ್ಯಂತ ಹಿರಿಯರಾದ ತಮಗೆ ಸಲಹೆ ಕೊಡುವಷ್ಟು ದೊಡ್ಡವನ್ನಲ್ಲ. ಆದರೆ ಪರಿಸ್ಥಿತಿ ಹಾಗೆ ಬಂದೊದಗಿದೆ. ಹೀಗಾಗಿ ತಮಗೆ ನಾನು ಪತ್ರ ಬರೆದು ನನ್ನ ಅಂತರಾಳದ ಅಭಿಪ್ರಾಯಗಳನ್ನು ಮುಕ್ತ ಮನಸ್ಸಿನಿಂದ ವ್ಯಕ್ತಪಡಿಸುತ್ತಿರುವೆ.

ಕೆಲ ದಿನಗಳಿಂದ ರಾಜ್ಯಾದ್ಯಂತ ಹರಿದಾಡುತ್ತಿರುವ ಅಶ್ಲೀಲ ವೀಡಿಯೋ ತುಣುಕುಗಳಿಂದ ಪಕ್ಷಕ್ಕೆ ತೀರಾ ಮುಜುಗರ ಉಂಟಾಗಿದೆ. ಸದರಿ ವಿಡಿಯೋ ದೃಶ್ಯಗಳಲ್ಲಿ ಸಂಸದರಾದ ಶ್ರೀ ಪ್ರಜ್ವಲ್ ರೇವಣ್ಣ ಅವರು ಕಾಣಿಸಿಕೊಂಡಿದ್ದಾರೆ. ಸದ್ಯ ಮೇಲ್ನೋಟಕ್ಕೆ ಅವರು ತಪ್ಪಿತಸ್ಥರೆಂದು ಭಾವನೆ ಉಂಟಾಗಿದೆ. ಅವರನ್ನು ಕೂಡಲೇ ಪಕ್ಷದಿಂದ ಅಮಾನತು ಮಾಡಲು ತಮ್ಮಲ್ಲಿ ಕೋರುತ್ತೇನೆ.

ತಾವು ಆರು ದಶಕಗಳಿಗೂ ಮೀರಿ ನಡೆಸಿಕೊಂಡು ಬರುತ್ತಿರುವ ರಾಜಕೀಯ ಜೀವನ ಇಡೀ ರಾಷ್ಟ್ರಕ್ಕೆ ಮಾದರಿಯಾಗಿದೆ. ತತ್ವ-ಸಿದ್ಧಾಂತಗಳ ಬುನಾದಿಯ ಮೇಲೆ ಪಕ್ಷವನ್ನು ಸಮರ್ಥವಾಗಿ ಕಟ್ಟಿ ಬೆಳೆಸಿದ್ದೀರಿ. ರಾಷ್ಟ್ರದ ಪ್ರಧಾನಿಯಾದ ಮೊದಲ ಕನ್ನಡಿಗ ಎಂಬ ಅಭಿದಾನ ತಮ್ಮದಾಗಿದೆ. ಮಣ್ಣಿನ ಮಗನಾಗಿ ರೈತ ಜನಾಂಗದ ಏಳಿಗೆಗಾಗಿ ಸದಾ ಮಿಡಿಯುವ ನೇತರಾರು ತಾವಾಗಿದ್ದೀರಿ. ಅದರಲ್ಲಿಯೂ ‘ಹೆಣ್ಣು ಸಾಕ್ಷಾತ್ ಕಪಿಲಸಿದ್ದ ಮಲ್ಲಿಕಾರ್ಜುನ’ ಎಂಬ ಶರಣರ ವಾಣಿಯಂತೆ ಹೆಣ್ಣು ಮಕ್ಕಳನ್ನು ಗೌರವಾದರಗಳಿಂದ ನೋಡಿಕೊಂಡು ಬಂದಿದ್ದೀರಿ.

ತಮ್ಮ ಪರಂಪರೆಯಲ್ಲಿ ಶ್ರೀ ಕುಮಾರಣ್ಣ ಅವರು ಮುಖ್ಯಮಂತ್ರಿಯಾದಾಗ ಲಾಟರಿ ನಿಷೇದ ಮಾಡಿ, ಕನ್ನಡ ನಾಡಿನ ಹೆಣ್ಣು ಮಕ್ಕಳ ಪುಣ್ಯಕ್ಕೆ ಪಾತ್ರರಾಗಿದ್ದಾರೆ. ಸೈಕಲ್ ಭಾಗ್ಯವನ್ನು ಕರುಣಿಸಿ ಹೆಣ್ಣು ಮಕ್ಕಳ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ.

ಜಾತ್ಯಾತೀತ ನೆಲೆಗಟ್ಟಿನ ಮೇಲೆ ಪಕ್ಷವನ್ನು ಕಟ್ಟಿದ್ದೀರಿ, ತಮ್ಮ ಪಕ್ಷದ ಚಿಹ್ನೆಯು ಭತ್ತ ಹೊತ್ತ ಮಹಿಳೆಯಾಗಿದ್ದು, ನಿಮಗೆ ಮಹಿಳೆಯರ ಮೇಲಿರುವ ಗೌರವವನ್ನು ಇದು ಪ್ರತಿನಿಧಿಸುತ್ತದೆಂದು ಎಲ್ಲರು ಭಾವಿಸಿದ್ದಾರೆ. ನಮ್ಮದು ಪ್ರಾದೇಶಿಕ ಪಕ್ಷ ತಾವು ರಾಷ್ಟ್ರ ಕಂಡ ಮಹಾ ಮುತ್ಸದ್ಧಿ, ಅಂತಯೇ ಬಿ.ಜೆ.ಪಿ ರಾಷ್ಟ್ರೀಯ ಪಕ್ಷವಾದರು ನಮ್ಮೊಂದಿಗೆ ಮೈತ್ರಿ ಮಾಡಿಕೊಂಡಿರುವುದು ನಿಮ್ಮ ಮಹತ್ವವನ್ನು ಎತ್ತಿತೋರಿಸುತ್ತದೆ. ಈ ಎಲ್ಲಾ ಹಿನ್ನಲೆ ಪರಂಪರೆಯನ್ನು ಹೊಂದಿರುವ ಪಕ್ಷಕ್ಕೆ ವೀಡಿಯೋ ಪ್ರಕರಣ ತೀವ್ರ ಮುಜುಗರ ತಂದಿರುವದಂತೂ ಸುಳ್ಳಲ್ಲ.

ಈಗಾಗಲೇ ಸರ್ಕಾರದವರು ಸದರಿ ಪ್ರಕರಣವನ್ನು ಎಸ್.ಐ.ಟಿ.ಗೆ ಒಪ್ಪಿಸಿದ್ದಾರೆ. ದಯವಿಟ್ಟು ತಾವು ಪಕ್ಷದ ಆಂತರಿಕ ಸಮಿತಿಯನ್ನು ರಚನೆ ಮಾಡಿ, ಆ ಸಮಿತಿ ವಿಡಿಯೋ ಪ್ರಕರಣದ ಸತ್ಯಾಸತ್ಯತೆಯನ್ನು ನಾಡಿನ ತಾಯಂದಿರಿಗೆ ಗೊತ್ತು ಮಾಡುವಂತಾಗಲಿ, ಅಲ್ಲಿಯವರೆಗೆ ಪಕ್ಷದ ಮುಜುಗರವನ್ನು ತಪ್ಪಿಸಲು ಮತ್ತು ಎರಡನೇ ಹಂತದ ಚುನಾವಣೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರದಿರಲು ಕೂಡಲೇ ಸಂಸದರಾದ ಶ್ರೀ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಲು ತಮ್ಮಲ್ಲಿ ಕೋರುತ್ತೇನೆ.

ಇದನ್ನೂ ಓದಿ: ಹಾಸನ ಅಶ್ಲೀಲ ವಿಡಿಯೋ ಕೇಸ್​​: ಯಾರೇ ತಪ್ಪು ಮಾಡಿದ್ರೂ ತಪ್ಪೇ, ನನ್ನ ಮಗ ಮಾಡಿದ್ರೂ ತಪ್ಪೇ; ಜಿ.ಟಿ.ದೇವೇಗೌಡ

ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಅವರು ನಿನ್ನೆ ಈ ಕುರಿತು ಮಾತನಾಡಿದ್ದರು. ನಾನು ತಪ್ಪು ಮಾಡಿಲ್ಲ ಅಂತ ವಾದ ಮಾಡಲ್ಲ. ಮುಚ್ಚು ಹಾಕುವ ಪ್ರಯತ್ನ ಮಾಡಲ್ಲ. ಪ್ರಜ್ವಲ್ ರೇವಣ್ಣರನ್ನ ಪಕ್ಷದಿಂದ ಉಚ್ಚಾಟನೆ ವಿಚಾರವಾಗಿ ಪಕ್ಷದ ಚೌಕಟ್ಟಿನಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡ್ತೀನಿ. ಎಲ್ಲವನ್ನೂ ನಮ್ಮ ಪಕ್ಷದಲ್ಲಿ ಹೈಕಮಾಂಡ್ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡ್ತೀವಿ ಎಂದು ಹೇಳಿದ್ದಾರೆ.

ಹೆಚ್‌.ಡಿ ದೇವೇಗೌಡರ ನಿರ್ಧಾರವೇನು?
ಹಾಸನ ವಿಡಿಯೋ ಕೇಸ್​ನಿಂದ ಪಕ್ಷಕ್ಕಾಗುತ್ತಿರುವ ಮುಜುಗರ ತಪ್ಪಿಸೋದಕ್ಕೆ ಏನು ಮಾಡ್ಬೇಕು ಎಂಬುದರ ಬಗ್ಗೆ ಶೀಘ್ರದಲ್ಲೇ ಹಿರಿಯ ನಾಯಕರ ಜೊತೆ ದೇವೇಗೌಡರು ಹೆಚ್.ಡಿ. ಕುಮಾರಸ್ವಾಮಿ, ಜಿ.ಟಿ. ದೇವೇಗೌಡರ ಜೊತೆ ಸಭೆ ನಡೆಸುವ ಸಾಧ್ಯತೆ ಇದೆ. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ವಿರುದ್ಧ ಕೇಸ್ ದಾಖಲಾಗಿದೆ. ಇದರಿಂದ ಜೆಡಿಎಸ್ ಪಕ್ಷಕ್ಕೆ ಭವಿಷ್ಯದಲ್ಲಿ ಹೆಚ್ಚು ಹಾನಿ ಆಗಲಿದೆ. ಹೀಗಾಗಿ ಜೆಡಿಎಸ್ ಪಕ್ಷದ ಮುಂದಿನ ನಡೆ ಯಾವ ರೀತಿ ಇರಬೇಕು. ಇಬ್ಬರೂ ನಾಯಕರ ವಿರುದ್ಧ ಈಗಲೇ ಕ್ರಮವನ್ನ ಕೈಗೊಳ್ಳಬೇಕಾ? ಅಥವಾ ವರದಿ ಬರೋವರೆಗೂ ಕಾಯಬೇಕಾ ಅನ್ನೋ ಬಗ್ಗೆ ಚರ್ಚೆ ಮಾಡಲಿದ್ದಾರೆ. ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಬೇಕಾ? ಬೇರೆ ಶಿಸ್ತು ಕ್ರಮದ ಬಗ್ಗೆಯೂ ಈ ಸಭೆಯಲ್ಲಿ ತೀರ್ಮಾನ ಮಾಡಲಾಗುತ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹಾಸನ ಅಶ್ಲೀಲ ವಿಡಿಯೋ ಕೇಸ್‌ನಿಂದ ಮುಜುಗರ.. ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ?

https://newsfirstlive.com/wp-content/uploads/2023/06/Hassan-Prajwal-Revanna.jpg

Load More