ಆಸ್ಟ್ರೇಲಿಯಾ, ಇಂಗ್ಲೆಂಡ್ ನಡುವೆ 5 ಪಂದ್ಯಗಳ ಟೆಸ್ಟ್ ಸರಣಿ
ಮೊದಲ 2 ಪಂದ್ಯಗಳಲ್ಲಿ ಇಂಗ್ಲೆಂಡ್ ತಂಡಕ್ಕೆ ಹೀನಾಯ ಸೋಲು
ಮೂರನೇ ಟೆಸ್ಟ್ಗೆ ಬಲಿಷ್ಠ ತಂಡ ಪ್ರಕಟಿಸಿದ ಇಂಗ್ಲೆಂಡ್ ಟೀಂ
ಸದ್ಯ ನಡೆಯುತ್ತಿರೋ ಐದು ಪಂದ್ಯಗಳ ಟೆಸ್ಟ್ ಕ್ರಿಕೆಟ್ ಸರಣಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ ಮೊದಲ 2 ಮ್ಯಾಚ್ಗಳು ಸೋತಿದೆ. ತವರಿನಲ್ಲೇ ಮೊದಲ 2 ಪಂದ್ಯಗಳಲ್ಲಿ ಹೀನಾಯ ಸೋಲು ಕಂಡ ಇಂಗ್ಲೆಂಡ್ ಸರಣಿ ಗೆಲ್ಲಬೇಕಾದರೆ ಮುಂದಿನ 3 ಮ್ಯಾಚ್ ಗೆಲ್ಲಲೇಬೇಕಿದೆ. ಹೀಗಾಗಿ ಮೂರನೇ ಪಂದ್ಯಕ್ಕೆ ಇಂಗ್ಲೆಂಡ್ ಬಲಿಷ್ಠ ಕ್ರಿಕೆಟ್ ತಂಡವನ್ನು ಪ್ರಕಟಿಸಿದೆ.
ಆಸ್ಟ್ರೇಲಿಯಾದ ವಿರುದ್ಧದ ಮೊದಲ 2 ಪಂದ್ಯಗಳಿಗೆ ಇಂಗ್ಲೆಂಡ್ ತಂಡವು ಯಾವುದೇ ಬದಲಾವಣೆ ಮಾಡಿಕೊಂಡಿರಲಿಲ್ಲ. 2ನೇ ಟೆಸ್ಟ್ನಲ್ಲಿ ಮೊಯೀನ್ ಅಲಿ ತೀವ್ರವಾಗಿ ಗಾಯಗೊಂಡಿದ್ದರು. ಹೀಗಾಗಿ ಇವರ ಬದಲಿಗೆ ಕವರ್ ಪ್ಲೇಯರ್ ಆಗಿ ರೆಹಾನ್ ಅಹ್ಮದ್ ಮತ್ತು ಮ್ಯಾಥ್ಯೂ ಪಾಟ್ಸ್ಗೆ ಅವಕಾಶ ನೀಡಲಾಗಿತ್ತು. ಈಗ ಇಬ್ಬರು 15 ಸದಸ್ಯರ ತಂಡದಿಂದ ಕೈಬಿಡಲಾಗಿದೆ.
ಇನ್ನು, ಮೂರನೇ ಟೆಸ್ಟ್ಗೆ ಜೇಮ್ಸ್ ಆಂಡರ್ಸನ್ ಮತ್ತು ಮೊಯಿನ್ ಅಲಿ ಸೇರಿದಂತೆ ಪ್ರಮುಖ ಆಟಗಾರರನ್ನು ಉಳಿಸಿಕೊಳ್ಳಲಾಗಿದೆ. ರೆಹಾನ್ ಅವರನ್ನು ಕೈಬಿಟ್ಟಿರುವ ಕಾರಣ ಮೊಯೀನ್ ಅಲಿ ಮೂರನೇ ಟೆಸ್ಟ್ ಆಡುವುದು ಬಹುತೇಕ ಖಚಿತವಾಗಿದೆ.
ಆಸ್ಟ್ರೇಲಿಯಾ ವಿರುದ್ಧ 3ನೇ ಪಂದ್ಯಕ್ಕೆ ಇಂಗ್ಲೆಂಡ್ ತಂಡ ಹೀಗಿದೆ..!
ಬೆನ್ ಸ್ಟೋಕ್ಸ್ (ನಾಯಕ), ಜೇಮ್ಸ್ ಆಂಡರ್ಸನ್, ಜಾನಿ ಬೈರ್ಸ್ಟೋವ್, ಸ್ಟುವರ್ಟ್ ಬ್ರಾಡ್, ಹ್ಯಾರಿ ಬ್ರೂಕ್, ಝಾಕ್ ಕ್ರಾಲಿ, ಬೆನ್ ಡಕೆಟ್, ಡಾನ್ ಲಾರೆನ್ಸ್, ಮೊಯೀನ್ ಅಲಿ, ಆಲಿ ಪೋಪ್, ಆಲಿ ರಾಬಿನ್ಸನ್, ಜೋ ರೂಟ್, ಜೋಶ್ ಟಂಗ್, ಕ್ರಿಸ್ ವೋಕ್ಸ್, ಮಾರ್ಕ್ ವುಡ್.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ