/newsfirstlive-kannada/media/post_attachments/wp-content/uploads/2025/04/PANDYA_KOHLI.jpg)
ಭಾರತ-ಪಾಕಿಸ್ತಾನ ಗಡಿ ಉದ್ವಿಗ್ನತೆ ಹಿನ್ನೆಲೆಯಲ್ಲಿ ಐಪಿಎಲ್-2025 ತಕ್ಷಣದಿಂದ ಜಾರಿಗೆ ಬರುವಂತೆ ಒಂದು ವಾರದವರೆಗೆ ಸ್ಥಗಿತಗೊಳಿಸಲಾಗಿದೆ. ಬಿಸಿಸಿಐ ತನ್ನ ನಿರ್ಧಾರ ಪ್ರಕಟಿಸಿದ ಕೆಲವೇ ಗಂಟೆಗಳಲ್ಲಿ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಸಂಸ್ಥೆ (ECB) ಭಾರತಿಯ ಕ್ರಿಕೆಟ್ ನಿಯಂತ್ರಣ ಮಂಡಳಿಯನ್ನು ಸಂಪರ್ಕಿಸಿದೆ ಎಂದು ವರದಿಯಾಗಿದೆ.
ಐಪಿಎಲ್ನಲ್ಲಿ ಬಾಕಿ ಇರುವ ಪಂದ್ಯಗಳನ್ನು ನಾವು ಆಯೋಜನೆ ಮಾಡ್ತೀವಿ. ನಮಗೆ ಅವಕಾಶ ಮಾಡಿಕೊಡಿ ಎಂಬ ಆಫರ್ ಇಟ್ಟಿವೆ ಎಂದು ವರದಿಗಳು ಹೇಳಿವೆ. ಇದಕ್ಕೂ ಮುನ್ನವೇ ಇಂಗ್ಲೆಂಡ್ನ ಮಾಜಿ ಕ್ರಿಕೆಟಿಗ ಮೈಕಲ್ ವಾನ್ ಕೂಡ ಇದೇ ರೀತಿಯ ಆಲೋಚನೆ ಮುಂದಿಟ್ಟಿದ್ದರು. ಐಪಿಎಲ್ ಲಂಡನ್ನಲ್ಲಿ ಆಯೋಜಿಸುವುದರಿಂದ ಭಾರತಕ್ಕೆ ಲಾಭವಾಗಬಹುದು ಅಂತಾ ಎಕ್ಸ್ನಲ್ಲಿ ಬರೆದುಕೊಂಡಿದ್ದರು.
ಇದನ್ನೂ ಓದಿ: ಉದ್ವಿಗ್ನತೆ ಶಮನಗೊಳಿಸಲು ಪಾಕ್ಗೆ ಅಮೆರಿಕ ತಾಕೀತು.. ಮಧ್ಯಸ್ಥಿಕೆ ವಹಿಸುವುದಾಗಿ ಹೇಳಿದ US
ಮೊನ್ನೆ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ಪಂದ್ಯವನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿತ್ತು. ಭಾರತದ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಆಗಿರುವುದರಿಂದ ಐಪಿಎಲ್ ಪಂದ್ಯಗಳನ್ನು ಮುಂದೂಡುವ ನಿರ್ಧಾರ ಕೈಗೊಳ್ಳಲಾಗಿದೆ.
ಇಲ್ಲಿಯವರೆಗೆ 58 ಪಂದ್ಯಗಳು ನಡೆದಿವೆ. ಇನ್ನೂ ನಾಲ್ಕು ಪ್ಲೇ-ಆಫ್ ಪಂದ್ಯಗಳೂ ಸೇರಿ 16 ಮ್ಯಾಚ್ ಬಾಕಿಯಿವೆ. ಸದ್ಯ ಬಿಸಿಸಿಐ ಆಟಗಾರರು ಮತ್ತು ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಿದೆ. ಪರಿಸ್ಥಿತಿಯನ್ನು ಅವಲೋಕಿಸಿದ ನಂತರ ಹೊಸ ದಿನಾಂಕಗಳನ್ನು ಪ್ರಕಟಿಸಲಿದೆ ಎಂದು ಬಿಸಿಸಿಐ, ಐಪಿಎಲ್ ಮಂಡಳಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ: 36 ನಗರಗಳ ಗುರಿಯಾಗಿಸಿ ಡ್ರೋಣ್ ಮೂಲಕ ಸರಣಿ ದಾಳಿಗೆ ಪಾಕ್ ಯತ್ನ ಮಾಡಿದೆ -ಭಾರತೀಯ ಸೇನೆ
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ 'ರನ್ ಭೂಮಿ' ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್