/newsfirstlive-kannada/media/post_attachments/wp-content/uploads/2025/06/KARUN_NAIR_KL_RAHUL.jpg)
ಐದು ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ನಾಯಕ ಬೆನ್ಸ್ಟೋಕ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇದರಿಂದ ಟೀಮ್ ಇಂಡಿಯಾ ಫೀಲ್ಡಿಂಗ್ಗೆ ಆಗಮಿಸಲಿದೆ.
ಲಂಡನ್ನ ಲಾರ್ಡ್ಸ್ನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 3ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ನಾಯಕ ಬೆನ್ಸ್ಟೋಕ್ಸ್ ಟಾಸ್ ಗೆದ್ದು ಮೊದಲ ಬ್ಯಾಟಿಂಗ್ ಆಯ್ಕೆ ಮಾಡಿದ್ದರಿಂದ ಶುಭಮನ್ ಗಿಲ್ ನೇತೃತ್ವದ ಟೀಮ್ ಇಂಡಿಯಾ ಫೀಲ್ಡಿಂಗ್ ಮಾಡಲಿದೆ. ಈಗಾಗಲೇ ಈ ಸರಣಿಯಲ್ಲಿ ಎರಡು ಪಂದ್ಯಗಳು ಮುಗಿದಿದ್ದು ಇದರಲ್ಲಿ ತಲಾ ಒಂದೊಂದು ಪಂದ್ಯವನ್ನು ಗೆದ್ದುಕೊಂಡಿವೆ.
ಇದನ್ನೂ ಓದಿ:ಕ್ರಿಕೆಟ್ ಕಾಶಿಯಲ್ಲಿ ಇವತ್ತಿನಿಂದ ಬಿಗ್ ಫೈಟ್! ಲಾರ್ಡ್ಸ್ ಪಿಚ್ ತುಂಬಾನೇ ಡಿಫರೆಂಟ್, ಯಾರಿಗೆ ಫೇವರ್..
ಭಾರತ ತಂಡದಲ್ಲಿ ಯಶಸ್ವಿ ಜೈಸ್ವಾಲ್ ಹಾಗೂ ಕೆ.ಎಲ್ ರಾಹುಲ್ ಅವರು ಎಂದಿನಂತೆ ಓಪನರ್ ಬ್ಯಾಟಿಂಗ್ಗೆ ಆಗಮಿಸಬಹುದು. ಕಳೆದ ಎರಡು ಪಂದ್ಯಗಳಲ್ಲಿ ಬ್ಯಾಟಿಂಗ್ನಲ್ಲಿ ವಿಫಲವಾಗಿದ್ದರೂ ಕರುಣ್ ನಾಯರ್ ಅವರಿಗೆ ಮತ್ತೆ ಅವಕಾಶ ನೀಡಲಾಗಿದೆ. ಕರುಣ್ ಕೂಡ ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕಿದೆ. ಎರಡು ಪಂದ್ಯಗಳಲ್ಲಿ ಸೆಂಚುರಿ ಸಿಡಿಸಿದ್ದ ಕ್ಯಾಪ್ಟನ್ ಗಿಲ್ ಅವರು ಉತ್ತಮ ಪರ್ಫಾಮೆನ್ಸ್ನಲ್ಲಿ ಇದ್ದಾರೆ. ವಿಕೆಟ್ ಕೀಪರ್ ರಿಷಭ್ ಪಂತ್ ತಂಡಕ್ಕೆ ಬೆನ್ನೆಲುಬು ಆಗಿ ಎರಡು ಕೆಲಸಗಳನ್ನು ಕಟ್ಟುನಿಟ್ಟಾಗಿ ನಿರ್ವಹಿಸಬೇಕಿದೆ.
ನಿತೀಶ್ ಕುಮಾರ್ ಅವರು ಈ ಬಾರಿಯಾದರೂ ಬ್ಯಾಟಿಂಗ್ ಟ್ರ್ಯಾಕ್ಗೆ ಮರಳಬೇಕಿದೆ. ಇನ್ನು ಆಲ್ರೌಂಡರ್ಗಳಾಗಿ ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್ ಉತ್ತಮ ಬ್ಯಾಟಿಂಗ್ ಮಾಡುತ್ತಿದ್ದು, ಬೌಲಿಂಗ್ನಲ್ಲಿ ಸುಧಾರಣೆ ಕಂಡುಕೊಳ್ಳಬೇಕಿದೆ. ಕಳೆದ ಪಂದ್ಯಗಳಲ್ಲಿ ಆಂಗ್ಲರ ಬೆನ್ನೆಲುಬು ಮುರಿದಿದ್ದ ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತೆ ಅಬ್ಬರಿಸುವ ಮುನ್ಸೂಚನೆ ಇದೆ.
ಟೀಮ್ ಇಂಡಿಯಾದ ಪ್ಲೇಯಿಂಗ್- 11
ಯಶಸ್ವಿ ಜೈಸ್ವಾಲ್, ಕೆ.ಎಲ್ ರಾಹುಲ್, ಕರುಣ್ ನಾಯರ್, ಶುಭಮನ್ ಗಿಲ್ (ಕ್ಯಾಪ್ಟನ್), ರಿಷಭ್ ಪಂತ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ