/newsfirstlive-kannada/media/post_attachments/wp-content/uploads/2023/07/Heavy-Rain_Karnataka.jpg)
ಬೆಂಗಳೂರು: ಮುಂದಿನ 24 ಗಂಟೆಗಳು ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರು ಮಾತ್ರವಲ್ಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎರಡು ದಿನಗಳ ಗುಡುಗು ಸಮೇತ ಮಳೆ ಬೀಳಲಿದೆ ಎಂಬ ಮುನ್ಸೂಚನೆ ನೀಡಿದೆ.
ಚಾಮರಾಜನಗರ, ರಾಮನಗರ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ 24 ಗಂಟೆಗಳ ಕಾಲ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಜೋರು ಬೀಳುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಕಳೆದ ತಿಂಗಳು ಬೆಂಗಳೂರಲ್ಲಿ ಬರೋಬ್ಬರಿ 60 ಮಿಮೀ ಮಳೆಯಾಗಿತ್ತು. ಈ ತಿಂಗಳ ಕೊನೆಗೆ ದಾಖಲಿಕ ಮಳೆ ಆಗುವ ಸಾಧ್ಯತೆ ಇದೆ. ಒಂದು ವಾರದಿಂದ ಮಳೆ ಆಗಲಿದೆ ಎಂದು ಭವಿಷ್ಯ ನುಡಿಯಲಾಗಿತ್ತು. ಈಗ ಚಂಡಮಾರುತ ಪರಿಚಲನೆಯಿಂದಾಗಿ ಕರಾವಳಿ ರಾಜ್ಯಗಳಲ್ಲಿ ಮಳೆಯಾಗುವುದು ಖಚಿತವಾಗಿದೆ.
ಎಲ್ಲೆಲ್ಲಿ ಮಳೆ?
ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಹಾಸನ, ಕೊಡಗು, ಮಂಡ್ಯ, ತುಮಕೂರು, ವಿಜಯನಗರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿ ಜಿಲ್ಲೆಯಲ್ಲೂ ಭಾರೀ ಮಳೆ ನಿರೀಕ್ಷೆ ಇದೆ. ಈ ವರ್ಷ ರಾಜ್ಯದ ಹಲವು ಭಾಗಗಳಲ್ಲಿ ಹಿಂಗಾರು ಮತ್ತು ಮುಂಗಾರು ಮಳೆ ವಾಡಿಕೆಯಂತೆಯಾಗಿದೆ. ಅದರಲ್ಲೂ ಬೆಂಗಳೂರಲ್ಲಿ ಸತತವಾಗಿ ಮಳೆ ಸುರಿಯುತ್ತಲೇ ಇದೆ.
ಇದನ್ನೂ ಓದಿ: ಸ್ಟಾರ್ ಆಟಗಾರನಿಗೆ ಬಿಗ್ ಶಾಕ್; ಕ್ಯಾಪ್ಟನ್ಸಿ ವಿಚಾರದಲ್ಲಿ ಮುಂಬೈ ಇಂಡಿಯನ್ಸ್ ಅಚ್ಚರಿ ನಿರ್ಧಾರ!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ