/newsfirstlive-kannada/media/post_attachments/wp-content/uploads/2024/10/Chennai-on-alert-for-heavy-rain.jpg)
ಬೆಂಗಳೂರು: ಕಳೆದೊಂದು ವಾರದಿಂದ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮಳೆ ಆಗುತ್ತಲೇ ಇದೆ. ಬುಧವಾರ ಕೂಡ ನಗರದ ಹಲವೆಡೆ ದಿಢೀರ್ ಮಳೆಯಾಗಿದೆ. ಬೆಳಗ್ಗೆಯಿಂದ ಬಿಸಿಲಿನ ವಾತಾವರಣ ಇತ್ತು. ಆದರೆ, ದಿಢೀರ್ ಬಿಸಿಲು ಮಾಯವಾಗಿ ಏಕಾಏಕಿ ಮಳೆ ಸುರಿದಿದೆ.
ಒಂದು ವಾರದ ಹಿಂದೆ ಇಡೀ ಬೆಂಗಳೂರು ಮಳೆಗೆ ತತ್ತರಿಸಿ ಹೋಗಿತ್ತು. ವರುಣನ ಆರ್ಭಟಕ್ಕೆ ಬೆಂಗಳೂರು ಮಂದಿ ನಡುಗಿ ಹೋಗಿದ್ರು. ಯಲಹಂಕ, ಸರ್ಜಾಪುರ ಸೇರಿ ಹಲವೆಡೆ ತಗ್ಗುಪ್ರದೇಶಗಳು ಕೆರೆಯಂತಾಗಿದ್ದವು. ಯಶವಂತಪುರ, ಮೆಜೆಸ್ಟಿಕ್, ರಾಜಾಜಿನಗರ, ಮಲ್ಲೇಶ್ವರಂ, ಆರ್.ಆರ್ ನಗರದಲ್ಲೂ ಭೀಕರ ಮಳೆ ಆಗಿತ್ತು.
ಇಡೀ ರಾಜ್ಯಾದ್ಯಂತ ಹಗುರ ಮಳೆ
ಕಳೆದ 24 ಗಂಟೆಯಲ್ಲಿ ಇಡೀ ರಾಜ್ಯಾದ್ಯಂತ ಹಗುರ ಮಳೆಯಾಗಿದೆ. ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಬಿದ್ದಿದೆ. ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲೂ ಮಳೆ ಇತ್ತು.
ನಾಲ್ಕು ದಿನಗಳ ಮಳೆ ಮುನ್ಸೂಚನೆ
ಬಂಗಾಳ ಕೊಲ್ಲಿಯಲ್ಲಿ ಸರ್ಕ್ಯುಲೇಷನ್ ಇದೆ. ಇದರ ಪರಿಣಾಮ ಇಡೀ ರಾಜ್ಯಾದ್ಯಂತ ಅಕ್ಟೋಬರ್ 31 ರಿಂದ ನವೆಂಬರ್ 4 ರವರೆಗೆ ಸಾಧಾರಣ ಮಳೆಯಾಗಲಿದೆ. ಉತ್ತರ ಉಳನಾಡಿನಲ್ಲೂ ಹಗುರ ಮಳೆ ಸಾಧ್ಯತೆ ಇದೆ. ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ, ತುಮಕೂರು, ಬೆಂಗಳೂರು ನಗರ, ಹಾಸನ, ಮಂಡ್ಯ, ಚಿಕ್ಕಮಗಳೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲೂ ಮಳೆ ಆಗಲಿದೆ.
ಇಂದು ಭರ್ಜರಿ ಮಳೆ
ಇಂದು ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜೋರು ಮಳೆ ಆಗಲಿದೆ. ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಮೈಸೂರು, ಚಿತ್ರದುರ್ಗ, ಹಾಸನದಲ್ಲೂ ಭರ್ಜರಿ ಮಳೆ ಸಾಧ್ಯತೆ ಇದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ