newsfirstkannada.com

ಟಿಕೆಟ್ ಸಿಕ್ಕಿಲ್ಲ ಎಂದು ಮಾತ್ರೆ ಸೇವಿಸಿದ್ದ ಹಾಲಿ ಸಂಸದ ಚಿಕಿತ್ಸೆ ಫಲಿಸದೇ ಸಾವು

Share :

Published March 28, 2024 at 7:38am

    ಚುನಾವಣೆ ಹೊತ್ತದಲ್ಲಿ ದೇಶದಲ್ಲಿ ಆಘಾತಕಾರಿ ಬೆಳವಣಿಗೆ

    ಮಾರ್ಚ್​ 24 ರಂದು ಆತ್ಮಹತ್ಯೆಗೆ ಯತ್ನಿಸಿದ್ದ ಸಂಸದ ಗಣೇಶಮೂರ್ತಿ

    ಇಂದು ಬೆಳಗ್ಗೆ ಚಿಕಿತ್ಸೆ ಫಲಿಸದೇ 5 ಗಂಟೆಗೆ ನಿಧನರಾಗಿದ್ದಾರೆ

ಲೋಕಸಭೆ ಚುನಾವಣೆ ಹೊತ್ತಿನಲ್ಲಿ ತಮಿಳುನಾಡಿನಿಂದ ಆಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದೆ. ಮಾರ್ಚ್ 24 ರಂದು ಆತ್ಮಹತ್ಯೆಗೆ ಯತ್ನಿಸಿದ್ದ ಈರೋಡ್ (Erode) ಸಂಸದ ಗಣೇಶಮೂರ್ತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಅವರು ಕೊಯಮತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಇದನ್ನೂ ಓದಿ: ಮಂಡ್ಯ ಎಲೆಕ್ಷನ್​​​​ ಗೆಲ್ಲಲು ಮೈತ್ರಿ ತಂತ್ರಗಾರಿಕೆ; ಭಾರೀ ನಿರೀಕ್ಷೆ ಹುಟ್ಟುಹಾಕಿದೆ ಸುಮಲತಾರ ಇವತ್ತಿನ ನಡೆ..!

ಗಣೇಶ್ ಮೂರ್ತಿ ಅವರು ಎಂಡಿಎಂಕೆ (Marumalarchi Dravida Munnetra Kazhagam) ಪಕ್ಷದ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದರು. 2019ರ ಲೋಕಸಭೆ ಚುನಾವಣೆಯಲ್ಲಿ ಈರೋಡೆ ಕ್ಷೇತ್ರದಲ್ಲಿ ಡಿಎಂಕೆ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂಸದರಾಗಿದ್ದರು.

2024ರ ಸಂಸತ್ ಚುನಾವಣೆಯಲ್ಲಿ ತಮಗೆ ಮತ್ತೊಮ್ಮೆ ಸೀಟು ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದರು. ಈ ಬಾರಿ ಡಿಎಂಕೆ ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳದೇ ಸ್ವತಂತ್ರವಾಗಿ ಸ್ಪರ್ಧೆ ಮಾಡ್ತಿದೆ. ಸೀಟು ಸಿಗದಿರೋದಕ್ಕೆ ಹತಾಸೆಗೊಂಡು ಮಾರ್ಚ್​ 24ರಂದು ಆತ್ಮಹತ್ಯೆಗೆ ಯತ್ನಿಸಿದ್ದರು.

ಮಾತ್ರ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿತ್ತು. ನಂತರ ಇವರ ಕುಟುಂಬ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದರು. ಇಂದು ಮುಂಜಾನೆ 5 ಗಂಟೆಗೆ ಹಠಾತ್ ಹೃದಯಾಘಾತವಾಗಿ ಗಣೇಶಮೂರ್ತಿ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಟಿಕೆಟ್ ಸಿಕ್ಕಿಲ್ಲ ಎಂದು ಮಾತ್ರೆ ಸೇವಿಸಿದ್ದ ಹಾಲಿ ಸಂಸದ ಚಿಕಿತ್ಸೆ ಫಲಿಸದೇ ಸಾವು

https://newsfirstlive.com/wp-content/uploads/2024/03/GANESHMOORTHY.jpg

Load More