ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ, ವ್ಯಕ್ತಿಗೆ ಗಂಭೀರ ಗಾಯ
ಗಾಯಗೊಂಡು ನರಳಾಡುತ್ತಿದ್ದ ವ್ಯಕ್ತಿಗೆ ಸಚಿವ ಈಶ್ವರ ಖಂಡ್ರೆ ಸಹಾಯ ಹಸ್ತ
ಸರ್ಕಾರಿ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಈಶ್ವರ ಖಂಡ್ರೆ
ಬೀದರ್: ಇತ್ತೀಚಿನ ದಿನಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿದೆ. ಆ್ಯಕ್ಸಿಂಡೆಟ್ ಆದ ಬಳಿಕ ಆಸ್ಪತ್ರೆ ಸೇರಿ ತಮ್ಮ ಜೀವವನ್ನು ಉಳಿಸಿಕೊಂಡು ಬದುಕಿದವರು ತುಂಬಾ ವಿರಳ. ಕಾರಣ ಅಪಘಾತ ಸ್ಥಳದಲ್ಲಿ ಗಾಯಾಳು ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದರು ಜನ ಸಹಾಯಕ್ಕೆ ಬಾರದಿರುವುದು. ಬದಲಿಗೆ ಅಪಘಾತ ದೃಶ್ಯವನ್ನು ಮೊಬೈಲ್ನಲ್ಲಿ ಸೆರೆ ಹಿಡಿದು ವಿಕೃತಿ ಮೆರೆಯುವುದು. ಹೀಗೆ ಸಹಾಯ ಮಾಡದೆ ವಿಡಿಯೋ ಮಾಡಿ ವಿಕೃತಿ ತೋರುವ ಕೆಟ್ಟ ಜನರೇ ತುಂಬಿರೋ ಈ ಕಾಲದಲ್ಲಿ ಅಪರೂಪದ ಘಟನೆಯೊಂದು ನಡೆದಿದೆ. ತಮ್ಮ ಬಿಡುವಿಲ್ಲದ ಕೆಲಸದ ಮಧ್ಯೆಯೂ ರಾಜ್ಯ ಅರಣ್ಯ ಸಚಿವ ಈಶ್ವರ್ ಖಂಡ್ರೆ ಭೀಕರ ಅಪಘಾತಕ್ಕೀಡಾಗಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಯುವಕನನ್ನು ಆಸ್ಪತ್ರೆಗೆ ಸಾಗಿಸಿ ಪ್ರಾಣ ಉಳಿಸಿದ್ದಾರೆ. ಇವರ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ಜಿಲ್ಲೆಯ ಔರಾದ್ ತಾಲೂಕಿನ ಸಂಗಮ್ ಕ್ರಾಸ್ ಬಳಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬಸ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕ ಗಂಭೀರವಾಗಿ ಗಾಯಗೊಂಡು ಒದ್ದಾಡುತ್ತಿದ್ದ. ಅದೇ ಮಾರ್ಗದಲ್ಲಿ ಸಾಗುತ್ತಿದ್ದ ಸಚಿವ ಈಶ್ವರ ಖಂಡ್ರೆಯವರು ತಮ್ಮ ಸಮಯ ಪ್ರಜ್ಞೆಯಿಂದ ಯುವಕನ ಪ್ರಾಣ ಉಳಿಸಿದ್ದಾರೆ. ತಮ್ಮ ಸರ್ಕಾರಿ ವಾಹನದಲ್ಲಿ ಕಮಲನಗರ ತಾಲೂಕು ಆಸ್ಪತ್ರೆ ದಾಖಲಿಸಿ ಯುವಕನಿಗೆ ಚಿಕಿತ್ಸೆ ಕೊಡಿಸಿದ್ದಾರೆ.
ಇಂದು ಔರಾದ ಗೆ ತೆರಳುತ್ತಿರುವ ಸಂದರ್ಭದಲ್ಲಿ ಮಾರ್ಗಮಧ್ಯೆ ದ್ವಿಚಕ್ರ ವಾಹನ ಅಪಘಾತದಿಂದ ಗಾಯಗೊಂಡು ನರಳಾಡುತಿದ್ದ ಯುವಕನನ್ನು ನಮ್ಮದೇ ಗಾಡಿಯಲ್ಲಿ ಆಸ್ಪತ್ರೆಗೆ ಬಿಟ್ಟು ಯುವಕನಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಕಮಲನಗರ್ ಆಸ್ಪತ್ರೆಯ ವೈದ್ಯಾಧಿಕಾರಿಗೆ ಸೂಚನೆ ನೀಡಿದ್ದೇನೆ. pic.twitter.com/d1ma7enIq1
— Eshwar Khandre (@eshwar_khandre) June 22, 2023
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ