newsfirstkannada.com

ಅಂಧರಿಗೆ ಗುಡ್​ನ್ಯೂಸ್​​.. ಕಣ್ಣು ಕಾಣದಿದ್ರೂ ಮೋದಿ ಸಾಧನೆಗಳ ಬಗ್ಗೆ ಓದಬಹುದು! ಹೇಗೆ?

Share :

Published January 30, 2024 at 8:57pm

Update January 30, 2024 at 9:05pm

    ಬ್ರೈಲ್ ಲಿಪಿಯ ವಿಶೇಷ ಪುಸ್ತಕ ಬಿಡುಗಡೆ ಮಾಡಿದ ಅಮಿತ್ ಶಾ

    ಹುಬ್ಬಳ್ಳಿ ಮೂಲದ ಟೀಮ್ ಸೆನ್ಸ್ ಎಸೆನ್ಸ್ ಸಂಸ್ಥೆಯ ಸಾಹಸಕ್ಕೆ ಮೆಚ್ಚುಗೆ

    ಮೋದಿಯವರ ಜೀವನ, ಕಾರ್ಯ, ಮಾಡಿದ ಸಾಧನೆಗಳ ಬಗ್ಗೆ ಮಾಹಿತಿ

ನವದೆಹಲಿ: ದೇಶದ 7 ಕೋಟಿ ಅಂಧರು ಪ್ರಧಾನಿ ನರೇಂದ್ರ ಮೋದಿಯವರ ಜೀವನ, ಕಾರ್ಯ ಮತ್ತು ನಾಯಕತ್ವದ ಬಗ್ಗೆ ತಿಳಿದುಕೊಳ್ಳಬೇಕು. ಈ ಮಹತ್ವದ ಉದ್ದೇಶದಿಂದ ಹುಬ್ಬಳ್ಳಿ ಮೂಲದ ಟೀಮ್ ಸೆನ್ಸ್ ಎಸೆನ್ಸ್ ಸಂಸ್ಥೆಯು ಬ್ರೈಲ್ ಲಿಪಿಯಲ್ಲಿ ಸಿದ್ಧಪಡಿಸಿದ ‘ಎ ಪ್ರಾಮೀಸ್ಡ್ ನೇಷನ್ ಹಾನರೇಬಲ್ ಶ್ರೀ ನರೇಂದ್ರ ಮೋದಿ- ದ ಮೇಕರ್ ನ್ಯೂ ಇಂಡಿಯಾ’ ಎಂಬ ಪುಸ್ತಕವನ್ನು ಕೇಂದ್ರ ಗೃಹ ಸಚಿವ ಅಮಿತ್ ಷಾ ಲೋಕಾರ್ಪಣೆಗೊಳಿಸಿದರು. ವಿಆರ್‌ಎಲ್ ಸಮೂಹ ಸಂಸ್ಥೆಯ ಸಹಯೋಗ ಮತ್ತು ಪ್ರಾಯೋಜಕತ್ವದಲ್ಲಿ ಈ ಪುಸ್ತಕ ಹೊರತರಲಾಗಿದೆ.

ದೆಹಲಿಯಲ್ಲಿ ವಿಆರ್‌ಎಲ್ ಸಮೂಹ ಸಂಸ್ಥೆಗಳ ಮ್ಯಾನೇಜಿಂಗ್ ಡೈರೆಕ್ಟರ್ ಡಾ. ಆನಂದ ಸಂಕೇಶ್ವರ ಮತ್ತು ಟೀಮ್ ಸೆನ್ಸ್ ಎಸೆನ್ಸ್ ಸಂಸ್ಥೆಯ ಸಂಸ್ಥಾಪಕಿಯರಾದ ರುಷಾಲಿ ದೋಶಿ ಮತ್ತು ಯಶ್ವಿ ಭಂಡಾರಿ ಉಪಸ್ಥಿತಿಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ಪುಸ್ತಕ ಬಿಡುಗಡೆಗೊಳಿಸಿದರು.

ದೇಶದ ಎರಡೂವರೆ ಲಕ್ಷ ಅಂಧ ಮಕ್ಕಳು ಹಾಗೂ ಕಣ್ಣಿನ ಸಮಸ್ಯೆ ಎದುರಿಸುತ್ತಿರುವ 7 ಕೋಟಿ ಜನರು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಈ ಪುಸ್ತಕದಿಂದ ಸಾಕಷ್ಟು ಮಾಹಿತಿ ಪಡೆದುಕೊಳ್ಳಬಹುದು. ಇದು ನಿಜಕ್ಕೂ ಸಾಹಸಮಯ ಕೆಲಸ. ವಿಆರ್‌ಎಲ್ ಸಂಸ್ಥೆ ಮತ್ತು ಟೀಮ್ ಸೆನ್ಸ್ ಎಸೆನ್ಸ್ ಸಂಸ್ಥೆಗೆ ಅಭಿನಂದನೆಗಳು ಎಂದು ಅಮಿತ್ ಶಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಕಳೆದ 10 ವರ್ಷಗಳಲ್ಲಿ ದೇಶದ ನಾಗರಿಕ ಮೌಲ್ಯ ಮತ್ತು ಸಾಂಸ್ಕೃತಿಕ ತತ್ವಗಳನ್ನು ಪುನರುಜ್ಜೀವನಗೊಳಿಸಿ, ಹೊಸ ಭಾರತದ ಸೌಧವನ್ನು ನಿರ್ಮಾಣ ಮಾಡಿದ್ದಾರೆ. ಈ ಹಾದಿಯಲ್ಲಿ ಮೋದಿಯವರು ಭಾರತದ ಅಂತರಂಗದ ಜಗತ್ತನ್ನು ಮತ್ತಷ್ಟು ಜಾಗೃತಗೊಳಿಸಿದ್ದಾರೆ ಎಂದು ಅಮಿತ್ ಶಾ ಅವರು ಅಭಿಪ್ರಾಯಪಟ್ಟರು. ಈ ಪುಸ್ತಕ ಬ್ರೈಲ್ ಲಿಪಿಯಲ್ಲಿದೆ. ಮೋದಿಯವರ ಜೀವನ, ಕಾರ್ಯ, ಮಾಡಿದ ಸಾಧನೆಗಳ ಬಗ್ಗೆ ತಿಳಿದುಕೊಳ್ಳಲು ಅನುಕೂಲವಾಗಲಿದೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಚಿತ್ರಣ
ಪ್ರಧಾನಿ ನರೇಂದ್ರ ಮೋದಿ ತಮ್ಮ ನಾಯಕತ್ವದಲ್ಲಿ ದೇಶವನ್ನು ಹೊಸ ಉತ್ತುಂಗಕ್ಕೆ ಕೊಂಡೊಯ್ಯಲು ಶ್ರಮಿಸುತ್ತಿದ್ದಾರೆ. ಇದರಿಂದ ದೇಶದ ಅನೇಕರಿಗೆ ಅವರು ಪ್ರೇರಣಾದಾಯಿಯಾಗಿದ್ದಾರೆ. ಹೀಗಾಗಿ, ಈ ಸಾಧಕ ಪ್ರಧಾನಿ ಬಗ್ಗೆ ಅಂಧ ಮಕ್ಕಳೂ ತಿಳಿದುಕೊಳ್ಳುವಂತಾಗಬೇಕು ಎಂಬ ಉದ್ದೇಶದಿಂದ ಈ ಪುಸ್ತಕ ಸಿದ್ಧಪಡಿಸಲಾಗಿದೆ. ಪುಸ್ತಕ ರೂಪಿಸಲು ಕಳೆದ ಹಲವು ತಿಂಗಳುಗಳಿಂದ ಸಾಕಷ್ಟು ಶ್ರಮಿಸಿದ್ದೇವೆ ಎಂದು ಟೀಮ್ ಸೆನ್ಸ್ ಎಸೆನ್ಸ್ ಸಂಸ್ಥೆಯ ಸಂಸ್ಥಾಪಕಿಯರಾದ ರುಷಾಲಿ ದೋಶಿ ಮತ್ತು ಯಶ್ವಿ ಭಂಡಾರಿ ಹೇಳಿದ್ದಾರೆ.

ನಮ್ಮನ್ನು ಪ್ರೋತ್ಸಾಹಿಸಿದ ವಿಆರ್‌ಎಲ್ ಸಂಸ್ಥೆಯ ಎಂಡಿ ಡಾ. ಆನಂದ ಸಂಕೇಶ್ವರ ಅವರಿಗೂ ನಾವು ಆಭಾರಿಯಾಗಿದ್ದೇವೆ. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ರಾಜೀವ್ ಚಂದ್ರಶೇಖರ್, ಅರ್ಜುನ್ ರಾಮ್ ಮೇಘ್ವಾಲ್, ಸ್ಮ ೃತಿ ಇರಾನಿ, ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಜಗದೀಶ ಶೆಟ್ಟರ್, ಆರ್‌ಎಸ್‌ಎಸ್ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ ಮಂಗೇಶ ಭೇಂಡೆ, ಶಾಸಕ ಮಹೇಶ ಟೆಂಗಿನಕಾಯಿ, ಮಾಜಿ ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ ಕೋರೆ ಸೇರಿ ಹಲವರು ನಮ್ಮ ಕೆಲಸಕ್ಕೆ ಬೆಂಬಲ ನೀಡಿದ್ದಾರೆ ಎಂದು ರುಷಾಲಿ ದೋಶಿ ಮತ್ತು ಯಶ್ವಿ ಭಂಡಾರಿ ಹೇಳಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಅಂಧರಿಗೆ ಗುಡ್​ನ್ಯೂಸ್​​.. ಕಣ್ಣು ಕಾಣದಿದ್ರೂ ಮೋದಿ ಸಾಧನೆಗಳ ಬಗ್ಗೆ ಓದಬಹುದು! ಹೇಗೆ?

https://newsfirstlive.com/wp-content/uploads/2024/01/Anand-Sankeshwar.jpg

Load More