newsfirstkannada.com

WATCH: ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಪಕ್ಕಾನಾ?; HDK ಭಾವನೆಗಳಿಗೆ ಬೊಮ್ಮಾಯಿ ಕೊಟ್ರು ಸ್ಫೋಟಕ ಸುಳಿವು

Share :

16-07-2023

  HD ಕುಮಾರಸ್ವಾಮಿ ಭಾವನೆಗಳಿಗೆ ಬಿಜೆಪಿ ವರಿಷ್ಠರು ಮಣೆ ಹಾಕ್ತಾರಾ?

  ನಾಳೆ ಬೆಂಗಳೂರಲ್ಲಿ ಕಾಂಗ್ರೆಸ್ ಮಿತ್ರಪಕ್ಷಗಳ ಮಹಾಘಟಬಂಧನ್ ಸಭೆ

  ದೆಹಲಿಯಲ್ಲಿ ಜೆಡಿಎಸ್‌, ಬಿಜೆಪಿ ಮೈತ್ರಿಯ ಮಾತುಕತೆ ಸಕ್ಸಸ್ ಆಗುತ್ತಾ?

ಹುಬ್ಬಳ್ಳಿ: ಬಿಜೆಪಿ ವಿರುದ್ಧ ಒಗ್ಗಟ್ಟಿನ ಮಂತ್ರ, ಲೋಕಸಭಾ ಚುನಾವಣೆಯಲ್ಲಿ ಗೆಲ್ಲೋ ರಣತಂತ್ರದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಿತ್ರಪಕ್ಷಗಳ ಮಹಾಘಟಬಂಧನ್ ಸಭೆ ನಾಳೆ ಬೆಂಗಳೂರಿನಲ್ಲಿ ನಡೆಯಲಿದೆ. ಯುಪಿಎ ಅಂಗಪಕ್ಷಗಳ ಈ ಸಭೆಗೂ ಮುನ್ನಾ ದಿನ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗಳು ಗರಿಗೆದರಿದೆ. ಯುಪಿಎ, ಎನ್‌ಡಿಎ ಶಕ್ತಿ ಪ್ರದರ್ಶನಗಳ ಮಧ್ಯೆ ಪ್ರಾದೇಶಿಕ ಪಕ್ಷಗಳ ನಡೆ ಕುತೂಹಲ ಕೆರಳಿಸಿದ್ದು, ಜೆಡಿಎಸ್ ನಡೆ ಕೂಡ ನಿಗೂಢವಾಗಿದೆ. ಈ ರಾಜಕೀಯ ಚಟುವಟಿಕೆಗಳ ಮಧ್ಯೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಬಗ್ಗೆ ಮಹತ್ವದ ಸುಳಿವು ಕೊಟ್ಟಿದ್ದಾರೆ.

ಹುಬ್ಬಳ್ಳಿಯಲ್ಲಿ ಜೆಡಿಎಸ್‌ ಜೊತೆ ಮೈತ್ರಿಯ ಕುರಿತು ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ವಿಚಾರ ನಮ್ಮ ವರಿಷ್ಠರಿಗೆ ಬಿಟ್ಟಿದ್ದು. ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಜೊತೆ ನಮ್ಮ ಪಕ್ಷದ ದೆಹಲಿ ವರಿಷ್ಠರು ಮಾತುಕತೆ ನಡೆಸುತ್ತಾರೆ. ಈಗಾಗಲೇ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿಯವರು ತಮ್ಮ ಭಾವನೆಗಳನ್ನ ವ್ಯಕ್ತಪಡಿಸಿದ್ದಾರೆ. ಮೈತ್ರಿ ಮಾತುಕತೆ ಫಲಶೃತಿ ಆಧಾರದ ಮೇಲೆ ಮುಂದಿನ ರಾಜಕೀಯ ಬೆಳವಣಿಗೆ ನಡೆಯುತ್ತದೆ ಎಂದು ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

‘ಪ್ರತಿಪಕ್ಷಗಳಲ್ಲಿ ಒಗ್ಗಟ್ಟು ಇಲ್ಲವೇ ಇಲ್ಲ’

ಇಡೀ ಭಾರತದಲ್ಲಿ ವಿರೋಧ ಪಕ್ಷಗಳು ಶಕ್ತಿಯುತವಾಗಿಲ್ಲ.. ಪ್ರತಿಪಕ್ಷಗಳಲ್ಲಿ ಪ್ರಾದೇಶಿಕ ಪಕ್ಷಗಳೇ ಹೆಚ್ಚಿವೆ‌. ಅವು ಆಯಾ ರಾಜ್ಯಗಳಲ್ಲಿ ಪ್ರತಿಪಕ್ಷಗಳಾಗಿ ಕೆಲಸ ಮಾಡುತ್ತಿವೆ. ಯುಪಿಎ ಮಿತ್ರಪಕ್ಷಗಳ ಒಕ್ಕೂಟ ರಚನೆ, ನಾಳೆ ನಡೆಯುವ ಪ್ರತಿಪಕ್ಷ ಸಭೆಯಿಂದ ಯಾವುದೇ ರಾಜಕೀಯ ಲಾಭ ಆಗುವುದಿಲ್ಲ. ಮಾಜಿ ಸಚಿವ ವಿ.ಸೋಮಣ್ಣ ಅವರು ಕಾಂಗ್ರೆಸ್ ಸೇರುತ್ತಾರೆ ಎನ್ನುವುದು ಕೇವಲ ಊಹಾಪೋಹ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ: ‘ದೇವೇಗೌಡ್ರ ಬಗ್ಗೆ ಮಾತಾಡ್ಲಿಲ್ಲ ಅಂದ್ರೆ ಕುಮಾರಸ್ವಾಮಿ ಬೇಳೆ ಬೇಯಲ್ಲ’; HDK ವಿರುದ್ಧ ಸಚಿವ ಚಲುವರಾಯಸ್ವಾಮಿ ವಾಗ್ದಾಳಿ

ಇದೇ ವೇಳೆ ಪ್ರತಿಪಕ್ಷಗಳಿಗೆ ಯಾವುದೇ ಸ್ವಂತ ಬಲವಿಲ್ಲ. ನಿರ್ದಿಷ್ಟವಾದ ಕಾರ್ಯಕ್ರಮವಿಲ್ಲ. ಭಾರತ ದೇಶ ಜಗತ್ತಿನಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಸದೃಢವಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನ್ನಣೆ ಸಿಗುತ್ತಿದೆ. ಮೋದಿಯವರನ್ನ ಸೋಲಿಸಬೇಕೆಂದು ಕಾಂಗ್ರೆಸ್ ಮಿತ್ರಪಕ್ಷಗಳು ಒಗ್ಗಟ್ಟಾಗುತ್ತಿದ್ದಾರೆ. ಅದು ಯಾವುದೇ ಕಾರಣಕ್ಕೂ ಆಗುವುದಿಲ್ಲ ಎಂದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

WATCH: ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಪಕ್ಕಾನಾ?; HDK ಭಾವನೆಗಳಿಗೆ ಬೊಮ್ಮಾಯಿ ಕೊಟ್ರು ಸ್ಫೋಟಕ ಸುಳಿವು

https://newsfirstlive.com/wp-content/uploads/2023/07/Basavaraj-Bommai-1.jpg

Load More