ಪಕ್ಷದ ನಾಯಕರ ವಿರುದ್ಧ ಬಹಿರಂಗ ಹೇಳಿಕೆ
ಬಿಜೆಪಿ ಶೋಕಾಸ್ ನೋಟಿಸ್ಗೆ ಡೋಂಟ್ ಕೇರ್
ಶಿಷ್ಯನ ಕಿವಿ ಹಿಂಡಲು ಬಿಎಸ್ವೈಗೆ ಪಕ್ಷ ಸೂಚನೆ
ವಿಧಾನಸಭೆ ಚುನಾವಣೆಯ ಸೋಲಿನ ಬೆನ್ನಲ್ಲೇ ಪಕ್ಷದ ಚಟುವಟಿಕೆಗಳ ಬಗ್ಗೆ ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದ ಬಿಜೆಪಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯಗೆ ಬಿಗ್ ಶಾಕ್ ಆಗಿದೆ. ಪಕ್ಷದ ಶಿಸ್ತುಪಾಲನಾ ಸಮಿತಿ ಶೋಕಾಸ್ ನೋಟಿಸ್ ನೀಡಿದ ಬೆನ್ನಲ್ಲೇ, ಗುರುವಿನಿಂದ ಕಿವಿ ಹಿಂಡುವ ಕೆಲಸವಾಗಿದೆ.
ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಮ್ಮ ಶಿಷ್ಯ ರೇಣುಕಾಚಾರ್ಯಗೆ ಬುಲಾವ್ ನೀಡಿದ್ದರು. ಅದರಂತೆ ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿದ್ದ ರೇಣುಕಾಚಾರ್ಯಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಚುನಾವಣೆಯಲ್ಲಿ ನಮಗೆ ಸೋಲಾಗಿರೋದು ನಿಜ. ಪಕ್ಷದಲ್ಲಿ ಸಣ್ಣಪುಟ್ಟ ಆಂತರಿಕ ಸಮಸ್ಯೆಗಳು ಇರೋದು ನಿಜ. ಆದರೆ ನಾವು ಅದನ್ನು ಪಕ್ಷದ ವೇದಿಕೆಯಲ್ಲಿ ಕೂತು ಸರಿಪಡಿಸಿಕೊಳ್ಳಬೇಕೇ ವಿನಃ ಬಹಿರಂಗವಾಗಿ ಹೇಳಿಕೆ ನೀಡಬಾರದು. ಇದರಿಂದ ಪಕ್ಷಕ್ಕೆ ಮುಜುಗರ ಆಗಲಿದೆ ಎಂದು ಯಡಿಯೂರಪ್ಪ, ರೇಣುಕಾಚಾರ್ಯಗೆ ಕಿವಿಮಾತು ಹೇಳಿದ್ದಾರೆ ಎನ್ನಲಾಗಿದೆ.
ಅಂದ್ಹಾಗೆ ರೇಣುಕಾಚಾರ್ಯ, ಕಳೆದ ಒಂದು ವಾರದಿಂದ ಪಕ್ಷದ ಕೆಲವು ನಾಯಕರ ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸಿದ್ದರು. ಅದರಲ್ಲೂ, ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಜೀನಾಮೆಗೆ ಕೂಡ ಆಗ್ರಹಿಸಿದ್ದರು. ಚುನಾವಣೆಯಲ್ಲಿ ಸೋಲಾಗಲು ಕಾರಣ ಅವರೇ. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕಳಗೆ ಇಳಿಸಿರೋದು, ಚುನಾವಣೆ ಸಂದರ್ಭದಲ್ಲಿ ಹಿರಿಯರಿಗೆ ಟಿಕೆಟ್ ನೀಡದಿರೋದೇ ಕಾರಣ ಎಂದು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು.
ಈ ಹಿನ್ನೆಲೆಯಲ್ಲಿ ಬಿಜೆಪಿಯ ಶಿಸ್ತುಪಾಲನಾ ಸಮಿತಿ ರೇಣುಕಾಚಾರ್ಯಗೆ ಶೋಕಾಸ್ ನೋಟಿಸ್ ನೀಡಿತ್ತು. ನಿನ್ನೆ ಬೆಂಗಳೂರಿನಲ್ಲಿರುವ ಮುಖ್ಯ ಕಚೇರಿಗೆ ಬರುವಂತೆ ನೋಟಿಸ್ ನೀಡಲಾಗಿತ್ತು. ಆದರೆ ರೇಣುಕಾಚಾರ್ಯ, ನೋಟಿಸ್ ದಿಕ್ಕರಿಸಿ ಹೋಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಇವತ್ತು ರೇಣುಕಾಚಾರ್ಯರನ್ನು ಕರೆಸಿಕೊಂಡು ಪಾಠ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ